Friday, September 20, 2024

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ| ಪೊಲೀಸರು, ಪ್ರತಿಭಟನಕಾರರ ನಡುವೆ ತಳ್ಳಾಟ-ನೂಕಾಟ

ಮಳವಳ್ಳಿ ತಾಲ್ಲೂಕು ಕಚೇರಿ ಆವರಣದ ಮುಂಭಾಗ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಪತ್ರಿಭಟನೆ ನಡೆಸುವ ಸಂದರ್ಭದಲ್ಲಿ ಪೊಲೀಸರು ಮತ್ತು ಪ್ರತಿಭಟನಕಾರರ ನಡುವೆ ತಳ್ಳಾಟ ನೂಕಾಟ ನಡೆದು ಕೆಲಕಾಲ ಉದ್ರಿಕ್ತ ಸ್ಥಿತಿ ನಿರ್ಮಾಣವಾದ ಘಟನೆ ಮಂಗಳವಾರ ನಡೆಯಿತು.

ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ಆಗ್ರಹಿಸಿ ಮಳವಳ್ಳಿ ತಾಲ್ಲೂಕು ಕಚೇರಿ ಆವರಣದಲ್ಲಿ ಆಹೋರಾತ್ರಿ ಧರಣಿ ಪ್ರತಿಭಟನೆ ನಡೆಸಲು ಮುಂದಾದ ಪ್ರಾಂತ ರೈತ ಸಂಘದ ಕಾರ್ಯಕರ್ತರು, ತಾಲ್ಲೂಕು ಕಚೇರಿ ಆವರಣಕ್ಕೆ ಪ್ರವೇಶಿಸುವುದಕ್ಕೆ ಪೊಲೀಸರು ತಡೆಯೊಡ್ಡಿದ ವೇಳೆ ಪೊಲೀಸರು ಪ್ರತಿಭಟನಕಾರರ ನಡುವೆ ತಳ್ಳಾಟ ನೂಕಾಟ ನಡೆದು ಕೆಲಕಾಲ ಉದ್ರಿಕ್ತ ಸ್ಥಿತಿ ನಿರ್ಮಾಣವಾಯಿತು.

ಮಲ್ಲಿಕ್ಯಾತನಹಳ್ಳಿ ಹಲವಾರು ದಶಕಗಳಿಂದ ವಾಸವಿರುವ ನಿವಾಸಿಗಳಿಗೆ ಹಕ್ಕು ಪತ್ರ ನೀಡಬೇಕು, ಮೂಗನಕೊಪ್ಪಲು ಗ್ರಾಮಠಾಣಾ ಜಾಗದ ಒತ್ತುವರಿ ತೆರವು ಮಾಡಬೇಕು ಎಂಬುದು ಸೇರಿದಂತೆ ಮುಂತಾದ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಪ್ರಾಂತ ರೈತ ಸಂಘದ ಕಾರ್ಯಕರ್ತರು ಇಂದಿನಿಂದ ಆಹೋರಾತ್ರಿ ಪ್ರತಿಭಟನೆ ಹಮ್ಮಿಕೊಂಡಿದ್ದರು.

ಪ್ರತಿಭಟನೆಯಲ್ಲಿ ಸಂಘಟನೆಯ ಮುಖಂಡರಾದ ಭರತ್ ರಾಜ್, ರಾಮಕೃಷ್ಣ,ಮೊಗಣ್ಣ, ದೇವಿ,ಲಿಂಗರಾಜ ಮೂರ್ತಿ, ತಿಮ್ಮೇಗೌಡ ಮತ್ತಿತರರು ಪಾಲ್ಗೊಂಡಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!