Thursday, September 19, 2024

ಪ್ರಾಯೋಗಿಕ ಆವೃತ್ತಿ

ಪರೀಕ್ಷಾ ಕೇಂದ್ರಕ್ಕೆ ಡಿಸಿ ಎಸ್.ಅಶ್ವತಿ ಭೇಟಿ

ಮಂಡ್ಯ ಜಿಲ್ಲೆಯಲ್ಲಿ ಮೇ.21 ಹಾಗೂ 22 ರಂದು ನಡೆಯಲಿರುವ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರು ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಕ್ರಮಗಳು ನಡೆಯದಂತೆ ಎಚ್ಚರಿಕೆ ಕ್ರಮವಹಿಸಿ ಹಾಗೂ ಪರೀಕ್ಷೆ ನಡೆಸಲು ಸರ್ಕಾರ ನೀಡಿರುವ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಎಂದು ಪರೀಕ್ಷಾ ಕೇಂದ್ರದ ಅಧಿಕಾರಿಗಳಿಗೆ ತಿಳಿಸಿದರು.

ಪರೀಕ್ಷಾ ಕೇಂದ್ರದ ಎಲ್ಲಾ ಕೊಠಡಿಗಳಲ್ಲಿ ಸಿಸಿಟಿವಿ ಕಾರ್ಯಾಚರಣೆ ಕುರಿತು,ಶೌಚಾಲಯ, ಕುಡಿಯುವ ನೀರು, ವಿದ್ಯುತ್ ಹಾಗೂ ಪ್ರವೇಶ ದ್ವಾರದಲ್ಲಿ ಮೊಬೈಲ್, ವಾಚ್, ಬ್ಯಾಗ್ ಸಂಗ್ರಹ ಕೇಂದ್ರ ಇತ್ಯಾದಿ ಸ್ಥಳಗಳನ್ನು ಪರಿಶೀಲನೆ ಮಾಡಿದರು.

ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು, ಪರೀಕ್ಷೆ ಸುಗಮವಾಗಿ ನಡೆಯಲು ಸಹಕರಿಸಿ ಎಂದರು.

ಇದೇ ಸಂದರ್ಭದಲ್ಲಿ ಜಿ.ಪಂ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ.ಆರ್.ಜೆ.ದಿವ್ಯಪ್ರಭು,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಯತೀಶ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಜವರೇಗೌಡ, ಶಿಕ್ಷಣಾಧಿಕಾರಿ ಬಿ. ಚಂದ್ರಶೇಖರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಬಿ.ಎಸ್. ಸೋಮಶೇಖರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!