Friday, September 20, 2024

ಪ್ರಾಯೋಗಿಕ ಆವೃತ್ತಿ

ಮಧ್ಯಪ್ರದೇಶ| ಬಿಜೆಪಿಯ 51 ನೂತನ ಶಾಸಕರ ಮೇಲಿದೆ ಕ್ರಿಮಿನಲ್‌ ಕೇಸ್!

ಮಧ್ಯಪ್ರದೇಶದಲ್ಲಿ ಹೊಸದಾಗಿ ಚುನಾಯಿತರಾದ 230 ಶಾಸಕರಲ್ಲಿ ಸುಮಾರು 39 ಪ್ರತಿಶತದಷ್ಟು ಶಾಸಕರು  ಕ್ರಿಮಿನಲ್ ಪ್ರಕರಣವನ್ನು ಎದುರಿಸುತ್ತಿದ್ದು, ಅದರಲ್ಲಿ 34 ಮಂದಿ ಗಂಭೀರ ಆರೋಪಗಳು ಎಂದರೆ ಗರಿಷ್ಠವಾಗಿ 5 ವರ್ಷಗಳಿಗಿಂತ ಹೆಚ್ಚು ಕಾಲ ಜೈಲು ಶಿಕ್ಷೆಯಾಗಬಲ್ಲ ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಎಡಿಆರ್‌ ವರದಿ ಬಹಿರಂಗಪಡಿಸಿದೆ.

ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್(ಎಡಿಆರ್) ವರದಿಯ ಪ್ರಕಾರ, ಮಧ್ಯಪ್ರದೇಶದಲ್ಲಿ 90 ಶಾಸಕರು ಕ್ರಿಮಿನಲ್‌ ಪ್ರಕರಣಗಳನ್ನು ಹೊಂದಿದ್ದಾರೆ. ಅದರಲ್ಲಿ ಹೆಚ್ಚಿನ ಸಂಖ್ಯೆಯ ಅಂದರೆ 51 ಮಂದಿ ಬಿಜೆಪಿ ಶಾಸಕರಿದ್ದಾರೆ.

94 ಶಾಸಕರು ಅಥವಾ ಒಟ್ಟು ಶೇಕಡಾದಲ್ಲಿ 41ರಷ್ಟು ಜನರು ಹಿಂದಿನ ಚುನಾವಣೆಗಳು ನಡೆದಾಗ 2018ರಲ್ಲಿ ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ಘೋಷಿಸಿದ್ದರು. 2023ರಲ್ಲಿ ಮಧ್ಯಪ್ರದೇಶ ವಿಧಾನಸಭೆಗೆ ಹೊಸದಾಗಿ ಆಯ್ಕೆಯಾಗಿರುವ 230 ಶಾಸಕರ ಪೈಕಿ 90 ಮಂದಿ ಅಂದರೆ ಶೇ.39ರಷ್ಟು ಜನರು ಕ್ರಿಮಿನಲ್ ಕೇಸ್‌ ಹೊಂದಿದ್ದಾರೆ. ಈ ಪೈಕಿ 34 ಮಂದಿ ಜನಪ್ರತಿನಿಧಿಗಳು ಗಂಭೀರ ಕ್ರಿಮಿನಲ್ ಮೊಕದ್ದಮೆ ಎದುರಿಸುತ್ತಿದ್ದಾರೆ.

ಶಿವಪುರಿ ಜಿಲ್ಲೆಯ ಪಿಚೋರ್‌ನಿಂದ ಆಯ್ಕೆಯಾಗಿರುವ ಬಿಜೆಪಿ ಶಾಸಕ ಪ್ರೀತಮ್ ಲೋಧಿ, ಕೊಲೆ ಆರೋಪ ಎದುರಿಸುತ್ತಿರುವ ಬಿಜೆಪಿಯ ಶಾಸಕ. ಹೊಸದಾಗಿ ಆಯ್ಕೆಯಾಗಿರುವ ಇನ್ನಿತರ ಐದು ಶಾಸಕರು ವಿರುದ್ಧ ಕೊಲೆ ಯತ್ನದ ಆರೋಪವಿದೆ. ಮೂವರು ಶಾಸಕರು ಮಹಿಳೆಯರಿಗೆ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದ ಕ್ರಿಮಿನಲ್ ಮೊಕದ್ದಮೆ ಎದುರಿಸುತ್ತಿದ್ದಾರೆ.

ಮಧ್ಯಪ್ರದೇಶ ವಿಧಾನಸಭೆ 230 ಸದಸ್ಯ ಬಲವನ್ನು ಹೊಂದಿದೆ. ಈ ಬಾರಿ ಚುನಾವಣೆಯಲ್ಲಿ163 ಸ್ಥಾನಗಳಲ್ಲಿ ಜಯ ಗಳಿಸಿ ಬಿಜೆಪಿ ರಾಜ್ಯದಲ್ಲಿ ಅಧಿಕಾರ ಉಳಿಸಿಕೊಂಡಿದೆ. ಕಾಂಗ್ರೆಸ್ 66 ಸ್ಥಾನಗಳಲ್ಲಿ ಜಯ ಗಳಿಸಿದೆ.  ಬಿಜೆಪಿಯ 51 ಮಂದಿ ಶಾಸಕರು ಕ್ರಿಮಿನಲ್ ಹಿನ್ನೆಲೆ ಹೊಂದಿದ್ದು, ಈ ಪೈಕಿ 16 ಮಂದಿ ಗಂಭೀರ ಕ್ರಿಮಿನಲ್ ಮೊಕದ್ದಮೆ ಎದುರಿಸುತ್ತಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್‌ನ 38 ಶಾಸಕರು ‌ಕ್ರಿಮಿನಲ್ ಪ್ರಕರಣ ಹೊಂದಿದ್ದಾರೆ.

ಗಂಭೀರ ಕ್ರಿಮಿನಲ್ ಪ್ರಕರಣಗಳಿಗೆ ಸಂಬಂಧಿಸಿ 5 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಅವಧಿಯ ಶಿಕ್ಷೆಯನ್ನು ಒಳಗೊಂಡಿರುತ್ತದೆ. ಕೆಲವು ಶಾಸಕರ ವಿರುದ್ಧ ಚುನಾವಣಾ ಅಪರಾಧ,  ಹಲ್ಲೆ, ಕೊಲೆ, ಅಪಹರಣ, ಅತ್ಯಾಚಾರ ಸಂಬಂಧಿತ ಅಪರಾಧಗಳು, ಪ್ರಜಾಪ್ರತಿನಿಧಿ ಕಾಯ್ದೆ, ಭ್ರಷ್ಟಾಚಾರ ತಡೆ ಕಾಯ್ದೆಯ ಅಡಿಯಲ್ಲಿರುವ ಅಪರಾಧಗಳು ಮತ್ತು ಮಹಿಳೆಯರ ವಿರುದ್ಧದ ಅಪರಾಧಗಳು ಇದೆ ಎಂದು ವರದಿ ಬಹಿರಂಗಪಡಿಸಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!