Thursday, November 19, 2026

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ| ಅಂಗಡಿಗಳ ಮೇಲೆ ದಾಳಿ: ಪ್ಲಾಸ್ಟಿಕ್ ಉತ್ಪನ್ನಗಳ ವಶ

ಮಳವಳ್ಳಿ ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುವ ಅಂಗಡಿ ಮುಂಗಟ್ಟುಗಳ ಮೇಲೆ ಪುರಸಭೆ ಪರಿಸರ ಅಭಿಯಂತರ ನಾಗೇಂದ್ರ ನೇತೃತ್ವದಲ್ಲಿ ದಾಳಿ ಮಾಡಿ ಪ್ಲಾಸ್ಟಿಕ್ ಉತ್ಪನ್ನಗಳನ್ನು ವಶಪಡಿಸಿಕೊಳ್ಳಲಾಯಿತು

ಸರ್ಕಾರದ ಆದೇಶದ ಮೇರೆಗೆ ಪುರಸಭೆ ಮುಖ್ಯ ಅಧಿಕಾರಿ ನಾಗರತ್ನ ಅವರ ಆದೇಶದ ಮೇರೆಗೆ ಹೋಟೆಲ್ ಉಪಹಾರ ಗೃಹಗಳ ಪರಿಶೀಲನೆ ನಡೆಸಿ ಶುಚಿತ್ವ ಇಲ್ಲದಿರುವುದಕ್ಕೆ, ಇಡ್ಲಿ ಬೇಯಿಸಲು ಪ್ಲಾಸ್ಟಿಕ್ ಹಾಳೆ ಬಳಸುವುದು ಇತ್ಯಾದಿ ಕಾನೂನು ಉಲ್ಲಂಘನೆಗೆ ಮಾಡಿದ ಮತ್ತು ರಸ್ತೆಯ ಮೇಲೆ ಕಸ ಹಾಕುವ ಅಂಗಡಿಗಳಿಗೆ ಕೊನೆಯ ಎಚ್ಚರಿಕೆ ನೋಟೀಸ್ ನೀಡಲಾಯಿತು.

ಕೋಳಿ ಮಾಂಸ ಮಾರಾಟ ಅಂಗಡಿಗಳಿಗೆ ನೋಟಿಸ್ ನೀಡಿ ಸ್ವಚ್ಛತೆ ಕಾಪಾಡಲು ಮಾಂಸವನ್ನು ಗಾಜಿನ ಪೆಟ್ಟಿಗೆಯಲ್ಲಿ ಇಟ್ಟು ಮಾರಾಟ ಮಾಡಲು ಸೂಚಿಸಲಾಯಿತು. ಇನ್ನು ಮುಂದೆ ಪ್ಲಾಸ್ಟಿಕ್ ಬಳಕೆ ಮಾಡುವವರ ಮೇಲೆ ದಂಡ ವಿಧಿಸಿ ಪ್ರಕರಣ ಧಾಖಲಿಸುವುದಾಗಿ ಮುಖ್ಯಾಧಿಕಾರಿ ನಾಗರತ್ನ ಅವರು ತಿಳಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ