ಮಂಡ್ಯನಗರದ ಕೆಎಸ್ಆರ್’ಟಿಸಿ ಬಸ್ ನಿಲ್ದಾಣದ ಬಳಿ ಬಸ್ಸಿಗೆ ಸಿಲುಕಿ ಮಹಿಳೆಯೊಬ್ಬರು ಸಾವಿಗೀಡಾಗಿರುವ ಘಟನೆ ಸೋಮವಾರ ಬೆಳಿಗ್ಗೆ 7.30ರ ಸಮಯದಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಬೆಂಗಳೂರಿನ ಪೂಜಾ ಎಂದು ಗುರುತಿಸಲಾಗಿದೆ. ಮಹಿಳೆ ನಡೆದುಕೊಂಡು ಹೋಗುತ್ತಿದ್ದಾಗ ವೇಗವಾಗಿ ಬಂದ ಕೆಎಸ್ಆರ್’ಟಿಸಿ ಬಸ್ಸು ಹಿಂಬದಿಯಿಂದ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ, ಚಾಲಕನ ಅಜಾಕರೂಕತೆಯೇ ಈ ಘಟನೆಗೆ ಕಾರಣ ಎಂದು ಮೇಲ್ನೊಟಕ್ಕೆ ಕಂಡು ಬಂದಿದೆ.
ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.