ಹೆಣ್ಣುಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣ ಮಂಡ್ಯ ಜಿಲ್ಲೆಯೂ ರಾಜ್ಯಾದ್ಯಂತ ಸುದ್ದಿಯಾದ ಬೆನ್ನಲ್ಲೇ ಪಾಂಡವಪುರ ತಾಲೂಕಿನ ಮೇಲುಕೋಟೆಯ ದಳವಾಯಿ ಕೆರೆಯ ಬಳಿ 2 ದಿನದ ನವಜಾತ ಹೆಣ್ಣು ಶಿಶುವಿನ ಶವವೊಂದು ಮಂಗಳವಾರ ಪತ್ತೆಯಾಗಿದೆ.
ದಳವಾಯಿ ಕರೆ ಬಳಿ ಇರುವ ನಿರ್ಜನ ಪ್ರದೇಶದಲ್ಲಿ ಎರಡು ದಿನದ ಹಿಂದೆ ಜನಿಸಿರುವ ಹೆಣ್ಣು ಶಿಶುವಿನ ಶವ ಪತ್ತೆಯಾಗಿದೆ. ಹೆಣ್ಣು ಶಿಶು ಎಂಬ ಕಾರಣಕ್ಕೆ ಯಾರೋ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಈ ಪ್ರದೇಶದಲ್ಲಿ ಹೋಗುತ್ತಿದ್ದ ಸಾರ್ವಜನಿಕರು ಶಿಶುವಿನ ಮೃತದೇಹ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸಾರ್ವಜನಿಕರು ನೀಡಿದ ದೂರಿನ ಮೇರೆಗೆ ಮೇಲುಕೋಟೆ ಪೊಲೀಸರು ಸ್ಥಳಕ್ಕೆ ಭೇಟಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.




