Friday, September 20, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಫೇಸ್ ಬುಕ್ ಮೂಲಕ ಮಹಿಳೆಯರನ್ನು ವಂಚಿಸುತ್ತಿದ್ದ ಆಸಾಮಿ ಬಂಧನ !

ಫೇಸ್ ಬುಕ್ ಮೂಲಕ ಮಹಿಳೆಯರನ್ನು ಪರಿಚಯ ಮಾಡಿಕೊಂಡು ಅವರನ್ನು ನಂಬಿಸಿ ಚಿನ್ನವನ್ನು ಪಡೆದು ಮೋಸ ಮಾಡುತ್ತಿದ್ದ ಆರೋಪಿಯನ್ನು ಮಂಡ್ಯ ನಗರದ ಸೆಂಟ್ರಲ್‌ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಮಂಡ್ಯ ತಾಲ್ಲೂಕಿನ ಬಸರಾಳು ಹೋಬಳಿಯ ಚಂದಗಾಲು ಗ್ರಾಮದ ರಂಜನ್ ಸಿ.ಜೆ ಬಂಧಿತ ಆರೋಪಿಯಾಗಿದ್ದು, ಈತನಿಂದ ₹ 10.30 ಲಕ್ಷ ಬೆಲೆ ಬಾಳುವ 182 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈತನ ವಂಚನೆಗೆ ಸಂಬಂಧಿಸಿದಂತೆ ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ, ಮಂಡ್ಯ ಪಶ್ಚಿಮ ಠಾಣೆಯಲ್ಲಿ 2, ಮಂಡ್ಯ ಪೂರ್ವ ಪೊಲೀಸ್ ಠಾಣೆ ಹಾಗೂ ಕೆರಗೋಡು ಪೊಲೀಸ್ ಠಾಣೆಯಲ್ಲಿ ತಲಾ ಒಂದು ಪ್ರಕರಣ ಸೇರಿದಂತೆ ಒಟ್ಟು 5 ಪ್ರಕರಣಗಳು ದಾಖಲಾಗಿವೆ. ಈ ಕಾರ್ಯಾಚರಣೆಗೆ ಶ್ರಮಿಸಿದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ತಂಡವನ್ನು ಎಸ್.ಪಿ ಯತೀಶ್ ಶ್ಲಾಘಿಸಿ, ಪ್ರಶಂಸಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!