Friday, September 20, 2024

ಪ್ರಾಯೋಗಿಕ ಆವೃತ್ತಿ

ಗುಣಮಟ್ಟದ ಶಿಕ್ಷಣ ನೀಡಲು ಮೊದಲ ಆದ್ಯತೆ: ನರೇಂದ್ರಸ್ವಾಮಿ

ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಉನ್ನತ್ತೀಕರಣ ಪಡೆದು ಪೈಪೋಟಿ ಯುಗದಲ್ಲಿ ಸ್ಪರ್ಧೆ ಮಾಡುವಂತೆ ಗುಣಮಟ್ಟದ ಶಿಕ್ಷಣ ಕೊಡಿಸಲು ಮೊದಲ ಆದ್ಯತೆ ನೀಡಲಾಗುವುದು ಎಂದು ಶಾಸಕ ಪಿಎಂ ನರೇಂದ್ರಸ್ವಾಮಿ ತಿಳಿಸಿದರು

ಮಳವಳ್ಳಿ ತಾಲ್ಲೂಕಿನ ಹಂಗ್ರಾಪುರ ಗ್ರಾಮದಲ್ಲಿ ಹಾಲು ಉತ್ಪಾದಕ ಸಹಕಾರ ಸಂಘ ವತಿಯಿಂದ ನಿರ್ಮಿಸಿರುವ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಳವಳ್ಳಿಗೆ ವಿಶೇಷ ಕಾಲೇಜು ಮಂಜೂರು ಮಾಡಿಸಲಾಗಿದೆ, ವಿಜ್ಞಾನ ವಿಷಯಗಳನ್ನು ಪ್ರಾರಂಭಿಸಲಾಗುತ್ತಿದೆ, ತಾಲ್ಲೂಕಿನ 8 ಕೆಪಿಎಸ್ ಶಾಲೆಗಳನ್ನು ತರಲಾಗುವುದು, ಪ್ರತಿ ಶಾಲೆಯಲ್ಲಿ ಶಿಕ್ಷಕರ ಕೊರತೆ ಇಲ್ಲದಂತೆ 180 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಸಲಾಗಿದೆ, ಮುಂದಿನ ವರ್ಷಗಳಲ್ಲಿ ಕಾರ್ಖಾನೆ ಸೇರಿದಂತೆ ಇತರೆ ಸಂಸ್ಥೆಗಳಿಂದ ಬರುವ ಸಂಸ್ಕರಣ ನಿಧಿಯನ್ನು ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ಬಳಸುವಂತೆ ಕ್ರಮ ಕೈಗೊಳ್ಳಲಾಗುವುದು, ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಉನ್ನತ್ತೀಕರಣ ಪಡೆದು ಪೈಪೋಟಿ ಯುವದಲ್ಲಿ ಸ್ಪರ್ಧೆ ಮಾಡುವಂತೆ ಗುಣ ಮಟ್ಟದ ಶಿಕ್ಷಣ ಕೊಡಿಸಲು ಮೊದಲ ಆಧ್ಯತೆ ನೀಡಲಾಗುವುದು ಎಂದರು.

ತೋಟಗಾರಿಕೆ ಇಲಾಖೆಯಿಂದ ರಾಗಿ ಬೊಮ್ಮನಹಳ್ಳಿ ಪಂಚಾಯಿತಿಗೆ 535 ರೈತರಿಗೆ ಸಮಗ್ರ ಪೋಷಕಾಂಶ ಪದ್ದತಿ, ಸಮಗ್ರ ಕೀಟ ಮತ್ತು ನಿರ್ವಹಣೆ ಪದ್ದತಿ, ಅಂತರ ಬೆಳೆ ಬೆಳೆಯುವ ಪದ್ದತಿಗಳನ್ನು ರೈತರು ಅಳವಡಿಸಿಕೊಳ್ಳಲು, ಹಸಿರೆಲೆ ಗೊಬ್ಬರದ ಬೀಜ, ಬೇವಿನ ಹಿಂಡಿ, ರಾಸಾಯನಿಕ ಗೊಬ್ಬರ,ಸೂಕ್ಷ್ಮ ಪೋಷಕಾಂಶ, ಜೈವಿಕ ಗೊಬ್ಬರ, ಸಮಗ್ರ ಕೀಟ ಮತ್ತು ರೋಗಗಳ ನಿರ್ವಹಣೆ ಮತ್ತು ಅಂತರ ಬೆಳೆ ಮತ್ತು ಮಧ್ಯಂತರ ಬೆಳೆಗೆ ಒಟ್ಟಾರೆ ತಲಾ ಒಬ್ಬ ರೈತರಿಗೆ ಪ್ರತಿ ಎಕರೆಗೆ 7,000 ರೂ ಸಹಾಯ ಧನವನ್ನು ನೀಡಲಾಗುತ್ತಿದ್ದು ರೈತರು ಪ್ರಯೋಜನ ಪಡೆದುಕೊಳ್ಳಬೇಕೆಂದು ಸಲಹೆ ನೀಡಿದರು.

ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಉಚಿತವಾಗಿ ತೆಂಗಿನ ಸಸಿಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಆರ್.ಎನ್ ವಿಶ್ವಾಸ್, ಗ್ರಾ.ಪಂ ಅಧ್ಯಕ್ಷ ರವಿ, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷೆ ಚಂದ್ರಕಲಾ ಪ್ರಭು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೇವರಾಜು, ಪ್ರಭು. ಜಯಶಂಕರ್, ಮಹೇಶ್ ಸೇರಿದಂತೆ ಇತರರು ಇದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!