Thursday, September 19, 2024

ಪ್ರಾಯೋಗಿಕ ಆವೃತ್ತಿ

‘ಇಂಡಿಯಾ’ ಒಕ್ಕೂಟದ ಪ್ರಧಾನಿ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ: ಮಮತಾ ಬ್ಯಾನರ್ಜಿ ಪ್ರಸ್ತಾಪ

ಲೋಕಸಭೆ ಚುನಾವಣೆ ಮುಗಿಯುವವರೆಗೆ ಇಂಡಿಯಾ ಬಣವು ತನ್ನ ಪ್ರಧಾನಿ ಅಭ್ಯರ್ಥಿ ಯಾರೆಂದು ಘೋಷಿಸುವುದಿಲ್ಲ ಎಂದು ನಿನ್ನೆ ಹೇಳಿದ್ದ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಇಂದು ತದ್ವಿರುದ್ಧ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನು ಪ್ರಧಾನಿ ಅಭ್ಯರ್ಥಿಯಾಗಿ ಪ್ರಸ್ತಾಪಿದ್ದಾರೆ ಎನ್ನಲಾಗಿದ್ದು, ಕಾಂಗ್ರೆಸ್ ಅಧ್ಯಕ್ಷರು ಈ ಪ್ರಸ್ತಾಪವನ್ನು ನಯವಾಗಿ ನಿರಾಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇಂಡಿಯಾ ಕೂಟದ ಪ್ರಧಾನಿ ಅಭ್ಯರ್ಥಿಯ ಕುರಿತು ಸೋಮವಾರ ಮಾತನಾಡಿದ್ದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ‘2024ರ ಲೋಕಸಭೆ ಚುನಾವಣೆಯ ನಂತರ ವಿರೋಧ ಪಕ್ಷಗಳ ಮೈತ್ರಿ ಕೂಟ ‘ಇಂಡಿಯಾ’ದ ಪ್ರಧಾನಿ ಅಭ್ಯರ್ಥಿಯನ್ನು ನಿರ್ಧರಿಸಲಾಗುವುದು ಎಂದು ಹೇಳಿದ್ದರು.

ನಾಲ್ಕು ದಿನಗಳ ಭೇಟಿಗಾಗಿ ಮಮತಾ ಬ್ಯಾನರ್ಜಿ ಈಗ ದೆಹಲಿಯಲ್ಲಿದ್ದಾರೆ. ಈ ಸಂದರ್ಭದಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಟಿಎಂಸಿ ಸಂಸದರನ್ನು ಭೇಟಿಯಾಗಲಿದ್ದಾರೆ. ಜತೆಗೆ, ವಿರೋಧ ಪಕ್ಷದ ಇಂಡಿಯಾ ಬಣದ ಸಭೆಯಲ್ಲಿ ಭಾಗವಹಿಸಿದ್ದಾರೆ.

ಸೀಟು ಹಂಚಿಕೆ ಮತ್ತು ಜಂಟಿ ಸಮಾವೇಶಗಳು ಇಂದಿನ ಇಂಡಿಯಾ ಸಭೆಯ ಅಜೆಂಡಾ ಆಗಿತ್ತು ಎನ್ನಲಾಗಿದೆ. ‘ಈ ವಿಷಯಗಳ ಕುರಿತು ಆದಷ್ಟು ಬೇಗ ಒಮ್ಮತದ ನಿರ್ಧಾರಕ್ಕೆ ಬರುವುದು ಇಂಡಿಯಾ ಬ್ಲಾಕ್‌ನ ಮುಂದಿರುವ ಪ್ರಮುಖ ಸವಾಲುಗಳಲ್ಲಿ ಒಂದಾಗಿದೆ. ಪ್ರಧಾನಿ ಅಭ್ಯರ್ಥಿ ಯಾರಾಗಬೇಕು ಎಂಬುದನ್ನು ಮುಂದಿನ ಸಭೆಯಲ್ಲಿ ಚರ್ಚಿಸಲಾಗುವುದು’ ಎಂದು ಹೇಳಿದ್ದರು.

ಸತತ ಎರಡನೇ ದಿನ ಸಂಸತ್ತಿನ ಉಭಯ ಸದನಗಳಿಂದ ಸಂಸದರನ್ನು ಸಾಮೂಹಿಕವಾಗಿ ಅಮಾನತುಗೊಳಿಸಿದ ಹಿನ್ನೆಲೆಯಲ್ಲಿ, ಇಂಡಿಯಾ ಬ್ಲಾಕ್‌ ಪಕ್ಷಗಳ ನಾಯಕರು ಇಂದು ನವದೆಹಲಿಯಲ್ಲಿ ಸಭೆ ನಡೆಸಿದವು. 2024ರ ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ಕುರಿತು ತಂತ್ರಗಳು ಮತ್ತು ಪ್ರಧಾನಿ ಅಭ್ಯರ್ಥಿ ಸಂಭಾವ್ಯ ಹೆಸರುಗಳನ್ನು ಚರ್ಚಿಸಲಾಗಿದೆ ಎಂದು ತಿಳಿದುಬಂದಿದೆ.

ಸಭೆಯಲ್ಲಿ ಮಮತಾ ಬ್ಯಾನರ್ಜಿ ಮತ್ತು ಅರವಿಂದ್ ಕೇಜ್ರಿವಾಲ್ ಅವರು ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯಾಗುವಂತೆ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನು ಪ್ರಸ್ತಾಪಿಸಿದ್ದಾರೆ ಎಂದು ವರದಿಗಳು ಹೇಳಿವೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!