ಅಪ್ರಾಪ್ತ ಬಾಲಕಿಯ ಮೇಲೆ ಇಬ್ಬರು ಬಾಲಕರು ಚಾಕು ತೋರಿಸಿ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಗ್ರಾಮವೊಂದರಲ್ಲಿ ಘಟನೆ ನಡೆದಿದೆ.
9 ಮತ್ತು 10ನೇ ತರಗತಿ ಓದುತ್ತಿರುವ ಇಬ್ಬರು ಬಾಲಕರು 10 ವರ್ಷದ ಬಾಲಕಿಗೆ ಚಾಕು ತೋರಿಸಿ, ಬೆದರಿಸಿ ಅತ್ಯಾಚಾರ ಎಸಗಿದ್ದಾರೆ. ಅಲ್ಲದೇ ದೃಶ್ಯವನ್ನು ಮೊಬೈಲ್ ನಲ್ಲಿ ವಿಡಿಯೋ ಸಹ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ಬಾಲಕಿಯ ಪೋಷಕರು ಕೆಲಸದ ನಿಮಿತ್ತ ಮುಂಬೈಗೆ ತೆರಳಿದ್ದ ಕಾರಣ ಬಾಲಕಿ ಸಂಬಂಧಿಕರ ಮನೆಯಲ್ಲಿ ವಾಸವಿದ್ದಳು. ಬಾಲಕಿಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ಇಬ್ಬರು ಬಾಲಕರು ಮನೆಗೆ ನುಗ್ಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಯಾರಿಗಾದರೂ ಹೇಳಿದರೆ ಕೊಲ್ಲುವುದಾಗಿ ಬಾಲಕಿಯನ್ನು ಚಾಕು ತೋರಿಸಿ ಬೆದರಿಕೆ ಹಾಕಿದರು ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.
ಘಟನೆ ತಿಳಿದು ಮುಂಬೈನಿಂದ ಬಂದ ಪೋಷಕರು ಮಗಳಿಂದ ಘಟನೆ ಬಗ್ಗೆ ಮಾಹಿತಿ ಪಡೆದು, ಇಬ್ಬರು ಬಾಲಕರ ವಿರುದ್ದ ಕಾಳಗಿ ಪೊಲೀಸ್ ಠಾಣೆಗೆ ದೂರು ನೀಡಿದ ಅನ್ವಯ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಕೃಪೆ: ಈದಿನ.ಕಾಂ