2020-21 ನೇ ಸಾಲಿನಲ್ಲಿ ಕೋವಿಡ್ ಸಂದರ್ಭದಲ್ಲಿ ನಿರ್ವಹಿಸಿದ ಸೇವೆಗಾಗಿ ಭಾರತೀಯ ರೆಡ್ಕ್ರಾಸ್ ಸಂಸ್ಥೆ ಮಂಡ್ಯ ಜಿಲ್ಲಾ ಶಾಖೆಗೆ ”ಅತ್ಯುತ್ತಮ ಜಿಲ್ಲಾ ಶಾಖೆ ಪ್ರಶಸ್ತಿ”ಯನ್ನು ಕರ್ನಾಟಕದ ರಾಜ್ಯಪಾಲ ಹಾಗೂ ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ಕರ್ನಾಟಕ ರಾಜ್ಯ ಶಾಖೆಯ ಅಧ್ಯಕ್ಷ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರದಾನ ಮಾಡಿದ್ದಾರೆ.
ಬೆಂಗಳೂರಿನ ರಾಜಭವನದಲ್ಲಿ ನಡೆದ ಭಾರತೀಯ ರೆಡ್ಕ್ರಾಸ್ ಸಂಸ್ಥೆ ಕರ್ನಾಟಕ ರಾಜ್ಯ ಶಾಖೆಯ 2020-21 ಮತ್ತು 2021-22 ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಮಹಾಸಭೆಯ ರಾಜ್ಯಪಾಲರು ಪ್ರಶಸ್ತಿ ಪ್ರದಾನ ಮಾಡಲಾಯಿತು, ಪ್ರಶಸ್ತಿಯನ್ನು ರೆಡ್ ಕ್ರಾಸ್ ಮಂಡ್ಯ ಜಿಲ್ಲಾ ಶಾಖೆಯ ಸಭಾಧ್ಯಕ್ಷೆ ಮೀರಾಶಿವಲಿಂಗಯ್ಯ ಹಾಗೂ ನಿರ್ದೇಶಕ ಟಿ.ನಾರಾಯಣ ಸ್ವಾಮಿ ಅವರು ರಾಜ್ಯಪಾಲರಿಂದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಶಾಖೆಯ ಉಪಾಧ್ಯಕ್ಷ ಗೋಪಾಲ್ ಹೊಸೂರು, ಸಭಾಧ್ಯಕ್ಷರಾದ ವಿಜಯಕುಮಾರ್ ಪಾಟೀಲ್, ಉಪಸಭಾಪತಿಗಳಾದ ಆನಂದ್ ಜಿಗಜಿಣಗಿ ಉಪಸ್ಥಿತರಿದ್ದರು.




