ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪತ್ರಿಕಾ ಭವನ ಮತ್ತು ತರಬೇತಿ ಕೇಂದ್ರದ ಶಂಕುಸ್ಥಾಪನೆ ನೆರವೇರಿಸಿದರು.
ಪರಮಪೂಜ್ಯ ಜಗದ್ಗುರು ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಕಾರ್ಯನಿತರ ಪತ್ರಕರ್ತರ ಸಂಘದ ಅಧ್ಯಕ್ಷರಾದ ಎಸ್.ಟಿ.ರವಿಕುಮಾರ್ ವಹಿಸಿದ್ದರು.
ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಶಾಸಕರುಗಳಾದ ಜಿ.ಟಿ.ದೇವೇಗೌಡ, ಶ್ರೀವತ್ಸ, ತನ್ವೀರ್ ಸೇಠ್, ಹರೀಶ್ ಗೌಡ, ರವಿಶಂಕರ್, ಅನಿಲ್ ಚಿಕ್ಕಮಾದು, ಆಶ್ರಯ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ, ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಮರಿತಿಬ್ಬೇಗೌಡ, ಹೆಚ್.ವಿಶ್ವನಾಥ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.
ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಹೆಚ್.ಬಿ.ಮದನ್ ಗೌಡ, ಪತ್ರಕರ್ತರ ಸಂಘಗಳ ಒಕ್ಕೂಟದ ಮುಖಂಡರಾದ ಮಲ್ಲಿಕಾರ್ಜುನಯ್ಯ, ರಾಜ್ಯ ಸಮಿತಿ ಸದಸ್ಯ ರಾಘವೇಂದ್ರ ಸೇರಿ ಹಲವು ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.




