Friday, November 20, 2026

ಪ್ರಾಯೋಗಿಕ ಆವೃತ್ತಿ

‘ಯುವನಿಧಿ’ಯಡಿ ನಿರುದ್ಯೋಗ ಭತ್ಯೆ ಸದುಪಯೋಗಪಡಿಸಿಕೊಳ್ಳಿ: ಶೇಖ್ ತನ್ವೀರ್ ಆಸಿಫ್

ಆರ್ಥಿಕ ಸಂಕಷ್ಟದ ನಡುವೆ ಕನಸಿನ ಉದ್ಯೋಗದ ಹುಡುಕಾಟದಲ್ಲಿರುವ ನಿರುದ್ಯೋಗಿ ಯುವಜನರು ಯುವನಿಧಿ ಯೋಜನೆಗೆ ನೊಂದಾಯಿಸಿಕೊಳ್ಳುವ ಮೂಲಕ ಸದುಪಯೋಗ ಪಡೆಯಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಅವರು ತಿಳಿಸಿದರು.

ಮಂಡ್ಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ‘ಯುವನಿಧಿ’ ನೋಂದಣಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಡಿಪ್ಲೊಮಾ ಅಥವಾ ಪದವಿ ಮುಗಿದ ನಂತರ ತಕ್ಷಣ ಉದ್ಯೋಗ ಸಿಗುವುದು ಕಷ್ಟಕರವಾಗಿರುತ್ತದೆ. ಯುವ ನಿಧಿಯಡಿ ದೊರಕುವ ನಿರುದ್ಯೋಗ ಭತ್ಯೆಯನ್ನು
ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಲು, ಕೌಶಲ್ಯ ತರಬೇತಿ ಪಡೆಯಲು, ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧವಾಗಲು ಪುಸ್ತಕ ಖರೀದಿಗಾಗಿ ಉಪಯೋಗಿಸಿ ಎಂದರು.

2022- 23ನೇ ಶೈಕ್ಷಣಿಕ ಸಾಲಿನ 2023ರಲ್ಲಿ ಪದವಿ ಅಥವಾ ಡಿಪ್ಲೋಮೋ ಉತ್ತೀರ್ಣರಾದ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಇವರಲ್ಲಿ ಪದವಿ/ಡಿಪ್ಲೊಮಾ ನಂತರ ಕನಿಷ್ಠ 6 ತಿಂಗಳ ಅವಧಿಯವರೆಗೆ ಸರ್ಕಾರಿ/ಖಾಸಗಿ ಉದ್ಯೋಗ ಹೊಂದಿಲ್ಲದವರು, ಸ್ವಯಂ ಉದ್ಯೋಗ ಹೊಂದಿಲ್ಲದವರು.ಉನ್ನತ ವಿದ್ಯಾಭ್ಯಾಸ ಮುಂದುವರಿಸದೇ ಇರುವವರು. ಕರ್ನಾಟಕದಲ್ಲಿ ವಾಸವಿರುವ (ಕನಿಷ್ಠ 6 ವರ್ಷದೊಳಗೆ ಪದವಿ/ಡಿಪ್ಲೊಮಾದವರೆಗೆ ಅಧ್ಯಯನ ಮಾಡಿದವರು) ಮಾತ್ರ ಅರ್ಜಿ ಸಲ್ಲಿಸಲು ಅರ್ಹರು ಎಂದರು.

ಜಿಲ್ಲೆಯಲ್ಲಿರುವ ವಿವಿಧ ಕಾಲೇಜಿನ ಪ್ರಾಂಶುಪಾಲರು ತಮ್ಮಲ್ಲಿ ವಿದ್ಯಾರ್ಥಿಗಳ ಮಾಹಿತಿ ಲಭ್ಯವಿದ್ದು, ಎಲ್ಲರಿಗೂ ಯುವ ನಿಧಿ ಯೋಜನೆಯ ಮಾಹಿತಿ ನೀಡಿ ನೊಂದಾಯಿಸಲು ಸಹಕರಿಸಿ ಎಂದರು.

ಅಪರ ಜಿಲ್ಲಾಧಿಕಾರಿ ಡಾ: ಹೆಚ್. ಎಲ್ ನಾಗರಾಜು ಅವರು ಮಾತನಾಡಿ ಅರ್ಹರು ಉಚಿತವಾಗಿ ಗ್ರಾಮ ಒನ್‌, ಬಾಪೂಜಿ ಸೇವಾ ಕೇಂದ್ರ, https://sevasindhu.karnataka.gov.in ವೆಬ್‌ಸೈಟ್‌ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 1800 599 9918 ಅನ್ನು ಸಂಪರ್ಕಿಸಬಹುದಾಗಿದೆ ಎಂದರು.

ಜಿಲ್ಲೆಯಲ್ಲಿ ನೊಂದಾಯಿಸಿಕೊಳ್ಳಲು ಅರ್ಹತೆ ಹೊಂದಿರುವವರು 10,000 ದಿಂದ 12,000 ಅಭ್ಯರ್ಥಿಗಳು ಇರಬಹುದು ಎಂದು ಅಂದಾಜಿಸಲಾಗಿದೆ. ಮುಖ್ಯವಾಗಿ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳು ಬಿಟ್ಟು ಹೋಗದಂತೆ ನೋಡಿಕೊಳ್ಳಿ, ಕಾಲೇಜು ಅಥವಾ ಗ್ರಾಮಗಳಲ್ಲಿ ನೋಂದಾಯಿಸಿಕೊಳ್ಳಲು ಅಭ್ಯರ್ಥಿಗಳನ್ನು ಗುರುತಿಸಿ ಒಟ್ಟುಗೂಡಿಸಿದರೆ ನೊಂದಣಿಗೆ ಶಿಬಿರವನ್ನು ಸಹ ಆಯೋಜಿಸಿಕೊಡಲಾಗುವುದು ಎಂದರು‌.

ನೋಂದಣಿ ಬೇಕಾದ ದಾಖಲಾತಿಗಳು

ಆಧಾರ್ ಕಾರ್ಡ್, ಆಧಾರ್ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ, ಎಸ್ಎಸ್ಎಲ್‌ಸಿ, ಪಿಯುಸಿ ಅಂಕಪಟ್ಟಿ, ಪದವಿ/ ಡಿಪ್ಲೊಮೊ ಪ್ರಮಾಣ ಪತ್ರ (ಕಾನ್ವೂಕೇಷನ್) ಅಥವಾ ತಾತ್ಕಾಲಿಕ ಪದವಿ/ ಡಿಪ್ಲೊಮೊ ಪ್ರಮಾಣ ಪತ್ರ(ಪಿಡಿಸಿ), ಸಾಮಾನ್ಯ ಪ್ರವೇಶ ಪರೀಕ್ಷೆಯ(ಸಿಇಟಿ) ನೋಂದಣಿ ಸಂಖ್ಯೆ, 2017 ಕ್ಕೂ ಹಿಂದಿನ ಪಡಿತರ ಚೀಟಿ. NIOS(ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್) ನೀಡಿದ ಎಸ್‌ಎಸ್ಎಲ್‌ಸಿ ಅಂಕಪಟ್ಟಿ, ಒಂದು ವೇಳೆ ಎಸ್‌ಎಸ್‌ಎಲ್‌ಸಿ ನಂತರ ನೇರವಾಗಿ ಡಿಪ್ಲೊಮೊಗೆ ಸೇರ್ಪಡೆಗೊಂಡು ತೇರ್ಗಡೆಯಾಗಿದ್ದರೆ, ಅಂತಹ ವಿದ್ಯಾರ್ಥಿಗಳು 7ನೇ ತರಗತಿ, 8ನೇ ತರಗತಿ, 9ನೇ ತರಗತಿ ಮತ್ತು 10ನೇ ತರಗತಿ ಅಂಕಪಟ್ಟಿ ಅವಶ್ಯವಿರುತ್ತದೆ ಎಂದರು. ಇದೇ ಸಂದರ್ಭದಲ್ಲಿ ಯುವನಿಧಿ ಕುರಿತು ಪೋಸ್ಟರ್ ಬಿಡುಗಡೆ ಮಾಡಲಾಯಿತು‌

ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಎಂ ಬಾಬು,ಯೋಜನಾ ನಿರ್ದೇಶಕ ಸಂಜೀವಪ್ಪ, ಮುಖ್ಯ ಯೋಜನಾಧಿಕಾರಿ ಧನುಷ್, ಮಂಡ್ಯ ಉಪವಿಭಾಗಾಧಿಕಾರಿ ಶಿವಮೂರ್ತಿ, ಪಾಂಡವಪುರ ಉಪವಿಭಾಗಾಧಿಕಾರಿ ನಂದೀಶ್, ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ ನಾಗನಂದ ಆರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕಿ ನಿರ್ಮಲ ಎಸ್.ಎಚ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ