ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಮಹಿಳಾ ಸರ್ಕಾರಿ ಕಾಲೇಜು (ಸ್ವಾಯತ್ತ), ಅಕ್ಷಯನಿಕೇತನ ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರ, ಗ್ರಾಹಕರ ಸ್ವಯಂಸೇವಾ ಸಂಸ್ಥೆಗಳು ಹಾಗೂ ವಿವಿಧ ಸರ್ಕಾರಿ ಇಲಾಖೆಗಳ ಆಶ್ರಯದಲ್ಲಿ ಮಂಡ್ಯ ನಗರದ ಮಹಿಳಾ ಸರ್ಕಾರಿ ಕಾಲೇಜಿನ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಗ್ರಾಹಕರ ದಿನಾಚರಣೆ-2023ರ ಕಾರ್ಯಕ್ರಮವನ್ನು ಮಂಡ್ಯ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಎಸ್. ವಸಂತಕುಮಾರ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯರಾದ ಎಂ.ಎಸ್. ಲತಾ, ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರದ ಅಧ್ಯಕ್ಷರಾದ ಸೂನಗಹಳ್ಳಿ ಪುಟ್ಟಸ್ವಾಮಿ, ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಿತರಾದ ಸರಳ ನಾಯರ್, ಆಹಾರ ಮತ್ತು ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಸಹಾಯಕ ನಿರ್ದೇಶಕರಾದ ಎನ್. ಶ್ರೀನಿವಾಸ್, ವ್ಯವಸ್ಥಾಪಕರಾದ ರೇಣುಕಾ, ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ. ಕೆ.ಕೆ. ಪದ್ಮನಾಭ, ಕಾರ್ಯಕ್ರಮದ ಸಂಯೋಜಕರಾದ ಎನ್.ಪಿ. ಶಿಲ್ಪ, ಸಹಾಯಕ ಪ್ರಾಧ್ಯಾಪಕರುಗಳಾದ ಡಾ. ಆಶಾ, ಡಾ. ಲತಾ, ಪ್ರೊ. ಜಯಶೀಲ, ಆಂಥೋನಿ ಸಾಮ್ಸಂಗ್, ಇನ್ನಿತರರಿದ್ದರು.