ತೆಲಂಗಾಣದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ 64 ಸ್ಥಾನಗಳಲ್ಲಿ ಭರ್ಜರಿ ಜಯ ಗಳಿಸುವುದರೊಂದಿಗೆ ಕಾಂಗ್ರೆಸ್ ನೇತೃತ್ವದ ಸರ್ಕಾರ ರಚನೆಯಾಗಿದ್ದು, ಇತ್ತೀಚೆಗಷ್ಟೇ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಅಧಿಕಾರ ಸ್ವೀಕರಿಸಿದ್ದರು. ರೇವಂತ್ ರೆಡ್ಡಿ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಹಿಂದಿನ ಸಿಎಂ ಚಂದ್ರಶೇಖರ್ ರಾವ್ ಅವರ ಬಿಆರ್ಎಸ್ ಪಕ್ಷದ ಹಗರಣಗಳು ಒಂದೊಂದಾಗಿ ಬಹಿರಂಗಗೊಳ್ಳುತ್ತಿದೆ.
“ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುತ್ತೇವೆ ಎಂಬ ಅತಿಯಾದ ಆತ್ಮವಿಶ್ವಾಸದಲ್ಲಿ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಸರ್ಕಾರವು, ಸುಮಾರು ₹66 ಕೋಟಿ ಖರ್ಚು ಮಾಡಿ 22 ಟೊಯೊಟಾ ಲ್ಯಾಂಡ್ ಕ್ರೂಸರ್ ಕಾರುಗಳನ್ನು ಖರೀದಿಸಿತ್ತು” ಎಂದು ಮುಖ್ಯಮಂತ್ರಿ ರೇವಂತ್ ರೆಡ್ಡಿ ಮಾಹಿತಿ ನೀಡಿದ್ದಾರೆ.
ప్రతి పేదవాడికి సంక్షేమం అందాలి..
ప్రతి అర్హుడికి ప్రభుత్వ సేవలు చేరాలి…
రేపటి నుండి…
ప్రజా క్షేత్రంలోకి ప్రజాపాలన..
యంత్రాంగానికి దిశానిర్ధేశం. #TelanganaPrajaPrabhutwam pic.twitter.com/8RTLiXVBmr— Revanth Reddy (@revanth_anumula) December 27, 2023
“>
ಪ್ರಜಾ ಪಾಲನಾ’ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ಬುಧವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ನಡೆದ ಸಂವಾದದ ವೇಳೆ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ.
“ಮುಖ್ಯಮಂತ್ರಿಯಾಗಿ ನಾನು ಅಧಿಕಾರ ಸ್ವೀಕರಿಸಿದ ನಂತರ ನನಗಾಗಿ ಹೊಸ ವಾಹನಗಳನ್ನು ಖರೀದಿಸದಂತೆ ಅಧಿಕಾರಿಗಳಿಗೆ ತಿಳಿಸಿದ್ದೆ. ಹಳೆಯ ಕಾರುಗಳನ್ನೇ ರಿಪೇರಿ ಮಾಡಿ ಬಳಸುವಂತೆ ಸೂಚಿಸಿದ್ದೆ. ಈ ವೇಳೆ ಅಧಿಕಾರಿಗಳು ಹೊಸ ಕಾರುಗಳನ್ನು ಈಗಾಗಲೇ ಖರೀದಿಸಿರುವ ಬಗ್ಗೆ ನನಗೆ ಮಾಹಿತಿ ನೀಡಿದರು” ಎಂದು ಹೇಳಿದ್ದಾರೆ.
ಕೃಪೆ:ಈದಿನ.ಕಾಂ