Friday, September 20, 2024

ಪ್ರಾಯೋಗಿಕ ಆವೃತ್ತಿ

ಬಿಜೆಪಿ ನಾಯಕಿ, ನಟಿ ಜಯಪ್ರದಾ ಪತ್ತೆಗೆ ಪೊಲೀಸರ ವಿಶೇಷ ತಂಡ ರಚನೆ

ಮಾದರಿ ನೀತಿ ಸಂಹಿತೆ ಉಲ್ಲಂಘನೆಯ ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಸಂಸದೆ ಮತ್ತು ನಟಿ ಜಯಪ್ರದಾ ವಿರುದ್ಧ ಹೊರಡಿಸಲಾದ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಲು ಉತ್ತರ ಪ್ರದೆಶದ ರಾಂಪುರ ಪೊಲೀಸರು ಇನ್ಸ್‌ಪೆಕ್ಟರ್ ನೇತೃತ್ವದಲ್ಲಿ ತಂಡವನ್ನು ರಚಿಸಿದ್ದಾರೆ.

ಮಾದರಿ ನೀತಿ ಸಂಹಿತೆ ಉಲ್ಲಂಘನೆಯ ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಸಂಸದೆar ಮತ್ತು ನಟಿ ಜಯಪ್ರದಾ ವಿರುದ್ಧ ಹೊರಡಿಸಲಾದ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಲು ರಾಂಪುರ ಪೊಲೀಸರು ಇನ್ಸ್‌ಪೆಕ್ಟರ್ ನೇತೃತ್ವದಲ್ಲಿ ತಂಡವನ್ನು ರಚಿಸಿದ್ದಾರೆ.

ಹಲವು ಅವಕಾಶಗಳನ್ನು ನೀಡಿದರೂ, ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಜಯಪ್ರದಾ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿದ್ದಾರೆ.

ಜಯಪ್ರದಾ ಅವರು 2019ರ ಲೋಕಸಭೆ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ)ದ ಅಭ್ಯರ್ಥಿಯಾಗಿ ಉತ್ತರ ಪ್ರದೇಶದ ರಾಂಪುರ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು. ಈ ಚುನಾವಣೆಯ ವೇಳೆ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಅವರ ವಿರುದ್ಧ ಎರಡು ಪ್ರಕರಣಗಳು ದಾಖಲಾಗಿತ್ತು.

ಒಂದು ಪ್ರಕರಣ ಅವರ ಲೋಕಸಭಾ ಕ್ಷೇತ್ರವಾದ ರಾಂಪುರದ ಸ್ವರ್ ಪ್ರದೇಶದಲ್ಲಿ ದಾಖಲಾಗಿತ್ತು. ಏಪ್ರಿಲ್ 19,2019 ರಂದು ನೀತಿ ಸಂಹಿತೆ ಜಾರಿಯಲ್ಲಿದ್ದಾಗ ಸ್ವರ್ ಪ್ರದೇಶದ ನೂರ್‌ಪುರ ಗ್ರಾಮದಲ್ಲಿ ರಸ್ತೆ ಉದ್ಘಾಟಿಸಿದ ಆರೋಪ ಅವರ ಮೇಲಿದೆ. ಮತ್ತೊಂದು ಪಿಪ್ಲಿಯಾ ಮಿಶ್ರಾ ಗ್ರಾಮದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೆಮ್ರಿ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

ಎರಡೂ ಪ್ರಕರಣಗಳ ತನಿಖೆ ಪೂರ್ಣಗೊಳಿಸಿರುವ ಪೊಲೀಸರು, ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಜಯಪ್ರದಾ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಪ್ರಕರಣ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯ ಜಯಪ್ರದಾ ಅವರಿಗೆ ಹಾಜರಾಗುವಂತೆ ಸೂಚಿಸಿತ್ತು. ಆದರೆ, ಅವರು ಇದುವರೆಗೆ ನ್ಯಾಯಾಲಯಕ್ಕೆ ಹಾಜರಾಗಿಲ್ಲ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!