Friday, September 20, 2024

ಪ್ರಾಯೋಗಿಕ ಆವೃತ್ತಿ

ಲೋಕಸಭೆಯ 28 ಕ್ಷೇತ್ರಗಳಲ್ಲೂ ಕೆ.ಆರ್.ಎಸ್ ಸ್ಪರ್ಧೆ: ರಮೇಶ್ ಗೌಡ

ಮುಂಬರುವ ಲೋಕಸಭಾ ಚುನಾವಣೆಗೆ ಕೆ.ಆರ್.ಎಸ್. ಪಕ್ಷದಿಂದ ಎಲ್ಲಾ 28 ಸ್ಥಾನಗಳಿಗೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ಸ್ಪರ್ಧೆ ಮಾಡಲಿದೆ ಎಂದು ಮಂಡ್ಯ ಜಿಲ್ಲಾ ಕೆ.ಆರ್.ಎಸ್ ಜಲ್ಲಾಧ್ಯಕ್ಷ ರಮೇಶ್ ಗೌಡ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಸಕ್ತ ಚುನಾವಣಾ ಸ್ಪರ್ಧಾಕಾಂಕ್ಷಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಲಾಗುತ್ತಿದೆ, ಸಂದರ್ಶನವು ಇದೇ ಜನವರಿ 6 ಮತ್ತು 7 ರಂದು ಪಕ್ಷದ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ನಡೆಯಲಿದೆ ಎಂದರು.

ಅಭ್ಯರ್ಥಿಗಳ ಸಂದರ್ಶನವು ಪಕ್ಷದ ಕೇಂದ್ರ ಕಚೇರಿಯಲ್ಲಿ ನಡೆಯಲ್ಲಿದ್ದು, ಆಸಕ್ತರು ಸಂದರ್ಶನಕ್ಕೆ ಹಾಜರಾಗಬಹುದು, ಪಕ್ಷದ ಹಾಲಿ ಸದಸ್ಯರಾಗಿರುವವರಿಗೆ ರೂ. 5 ಸಾವಿರ ಹಾಗೂ ಹೊಸದಾಗಿ ಪಕ್ಷ ಸೇರಿ ಸಂದರ್ಶನಕ್ಕೆ ಹಾಜರಾಗುವವರಿಗೆ ರೂ. 10 ಸಾವಿರ ಸಂದರ್ಶನ ಶುಲ್ಕವಿರುತ್ತದೆ. ಸಂದರ್ಶನದ ನಂತರ ರಾಜ್ಯ ಸಮಿತಿಯು ಸಂಭಾವ್ಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಸಂಭಾವ್ಯ ಅಭ್ಯರ್ಥಿಗಳು ಎಂದು ಘೋಷಿಸುತ್ತದೆ. ಈ ವಿಚಾರವಾಗಿ ಹೆಚ್ಚಿನ ಮಾಹಿತಿಗಾಗಿ ಮೊ.96117 20802 ಸಂಪರ್ಕಿಸಬಹುದು ಎಂದರು.

ಕೆಆರ್‌ಎಸ್‌ ಪಕ್ಷವು, ಪಕ್ಷದ ಆರಂಭದಿಂದಲೂ ಎಲ್ಲಾ ಚುನಾವಣೆಗಳಲ್ಲಿ ಸ್ಪರ್ಧಿಸಿ, ನಿರಂತರವಾಗಿ ಜನರನ್ನು ತಲುಪುವ ಕೆಲಸ ಮಾಡುತ್ತಿದೆ. 2023ರ ಮೇನಲ್ಲಿ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ 195 ಕ್ಷೇತ್ರಗಳಿಂದ ಸ್ಪರ್ಧಿಸಿತ್ತು. ಪಕ್ಷವು ನಿರಂತರವಾಗಿ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುತ್ತಾ, ವ್ಯವಸ್ಥೆಯಲ್ಲಿನ ಅಕ್ರಮ, ಅನ್ಯಾಯ, ದುರಾಡಳಿತ, ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಾ, ನಾಡಿನ ನೆಲ, ಜಲ, ಭಾಷೆಯ ಸಂರಕ್ಷಣೆಗಾಗಿ ಮತ್ತು ರಾಜ್ಯದ ಸಮಗ್ರ ಅಭಿವೃದ್ಧಿಗೆ ಕೆಲಸ ಮಾಡುತ್ತಾ ಬಂದಿದೆ ಎಂದರು.

ಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ಚಂದ್ರು, ಮಲ್ಲೇಶ್ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!