“2024ನೇ ವರ್ಷಕ್ಕೆ ನಾವೆಲ್ಲರೂ ಕಾಲಿಡುತ್ತಿದ್ದು, ಈ ವರ್ಷ ರಾಜ್ಯಕ್ಕೆ ಆಶಾದಾಯಕವಾಗಲಿದೆ” ಎಂದು ತಿಳಿಸಿದರು.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಕಾರ್ಯದರ್ಶಿಗಳು ಇಂದು ಅವರನ್ನು ಭೇಟಿಯಾಗಿ ನೂತನ ವರ್ಷದ ಶುಭಾಶಯಗಳನ್ನು ಕೋರಿದ ಸಂದರ್ಭದಲ್ಲಿ ಅವರು ಮಾತನಾಡಿದರು.
“ರಾಜ್ಯದಲ್ಲಿ 48 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 35 ಸಾವಿರ ಕೋಟಿ ಬೆಳೆ ನಷ್ಟವಾಗಿದೆ. ಪ್ರಕೃತಿಯ ಸಹಾಯವಿಲ್ಲದಿದ್ದರೆ, ಸರ್ಕಾರ ಏನು ಪರಿಹಾರ ಕೊಟ್ಟರೂ ಸಾಕಾಗುವುದಿಲ್ಲ. ಹವಾಮಾನ ಬದಲಾವಣೆಯಿಂದಾಗಿ ಈ ವೈಪರೀತ್ಯ ಕಾಣುತ್ತಿದ್ದೇವೆ. ಮುಂಗಾರಿನಲ್ಲಿ ಒಳ್ಳೆಯ ಮಳೆಯಾಗುವ ನಿರೀಕ್ಷೆ ಇದೆ. 2024ರಲ್ಲಿ ಒಳ್ಳೆಯ ಮಳೆ ಬೆಳೆ ಆಗಲಿ ಎಂದು ಪ್ರಾರ್ಥನೆ ಮಾಡುತ್ತೇನೆ” ಎಂದು ತಿಳಿಸಿದರು.
ರಾಜ್ಯ ಸರ್ಕಾರದ ಹಿರಿಯ ಐ.ಎ.ಎಸ್ ಅಧಿಕಾರಿಗಳು ಮುಖ್ಯಮಂತ್ರಿ @siddaramaiah ಅವರನ್ನು ಭೇಟಿಯಾಗಿ ಹೊಸವರ್ಷದ ಶುಭಾಶಯ ಕೋರಿದರು.
ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯೆಲ್, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್ ಕೆ. ಅತೀಕ್ ಹಾಗೂ ಸರ್ಕಾರದ… pic.twitter.com/aPMmeMZRxU— CM of Karnataka (@CMofKarnataka) January 1, 2024
“>
“ಶೇ. 60ಕ್ಕೂ ಹೆಚ್ಚು ಜನ ವ್ಯವಸಾಯದ ಮೇಲೆ ಅವಲಂಬಿತರಾಗಿದ್ದಾರೆ. ಗ್ಯಾರಂಟಿಗಳನ್ನು ಕೊಟ್ಟಿದ್ದರಿಂದ ಬರದ ತೀವ್ರತೆ ಕಡಿಮೆಯಾಗಿದೆ. ಬಡವರ ಕುಟುಂಬಕ್ಕೆ ಹಣ ದೊರೆಯುತ್ತಿದ್ದು ಕೊಳ್ಳುವ ಶಕ್ತಿ ಇದೆ. ಬರಗಾಲವಿದ್ದರೂ ಗ್ಯಾರಂಟಿಗಳನ್ನು ಕೊಟ್ಟಿದ್ದರಿಂದ ಸ್ವಲ್ಪಮಟ್ಟಿಗೆ ಅದರ ತೀವ್ರತೆ ಕಡಿಮೆಯಾಗಿದೆ” ಎಂದು ಸಿಎಂ ಅಭಿಪ್ರಾಯಪಟ್ಟರು.
“ಸಾರ್ವತ್ರಿಕ ಮೂಲ ಆದಾಯದ ತತ್ವದ ತಳಹದಿಯ ಮೇಲೆ ಜನರ ಆದಾಯ ಹೆಚ್ಚಿಸಿ ಆರ್ಥಿಕ ಚಟುವಟಿಕೆಗಳಿಗೆ ಇಂಬು ದೊರೆತಿದೆ. ರಾಜ್ಯದ ಜನರ ಅಭಿವೃದ್ಧಿಗಾಗಿ ಜನ ನಮ್ಮನ್ನು ಆಯ್ಕೆ ಮಾಡಿದ್ದಾರೆ. ಸರ್ಕಾರ ಆಡಳಿತ ವರ್ಗವನ್ನು ಆಯ್ಕೆ ಮಾಡಿದೆ. ಜನಪರ, ಸಮಾಜಮುಖಿ ಧೋರಣೆ ಇದ್ದಾಗ ಮಾತ್ರ ಸಮಾಜದಲ್ಲಿ ಬದಲಾವಣೆ ತರಲು, ಸಂವಿಧಾನದ ಆಶಯಗಳನ್ನು ಈಡೇರಿಸಲು ಸಾಧ್ಯವಾಗುತ್ತದೆ. ಸಂವಿಧಾನ ಅರಿತು ಅದರಂತೆ ನಡೆಯಬೇಕಿದೆ. ಈ ದಿಕ್ಕಿನಲ್ಲಿ ಪ್ರಯತ್ನ ಮಾಡೋಣ. ಜನರ ನಿರೀಕ್ಷೆ ಹುಸಿಯಾಗದ ರೀತಿ ಕೆಲಸ ಮಾಡಬೇಕಿದೆ” ಎಂದು ಸಲಹೆ ನೀಡಿದರು.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಕೆ.ಗೋವಿಂದರಾಜು, ನಜೀರ್ ಅಹ್ಮದ್ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಸರ್ಕಾರದ ಅಭಿವೃದ್ಧಿ ಆಯುಕ್ತರು ಹಾಗೂ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಬರೆದಿರುವ ‘ಸುಸ್ಥಿರ ಬದುಕಿನ ಸುತ್ತ ಆಶಾಕಿರಣ’ ಪುಸ್ತಕವನ್ನು ಮುಖ್ಯಮಂತ್ರಿಗಳು ಬಿಡುಗಡೆ ಮಾಡಿದರು.




