Friday, September 20, 2024

ಪ್ರಾಯೋಗಿಕ ಆವೃತ್ತಿ

ಶ್ರೀರಂಗಪಟ್ಟಣ| ರಸ್ತೆ ಅಭಿವೃದ್ದಿ ಕಾಮಗಾರಿಗೆ ಗುದ್ದಲಿಪೂಜೆ

ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಕೊತ್ತತ್ತಿ ಹೋಬಳಿಯ ತಗ್ಗಹಳ್ಳಿ ಜಿಲ್ಲಾ ಪಂಚಾಯತಿ ಕ್ಷೇತ್ರ ವ್ಯಾಪ್ತಿಯ ಲೋಕಸರ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ರಮೇಶ ಬಂಡಿಸಿದ್ದೇಗೌಡ ಗುದ್ದಲಿಪೂಜೆ ನೆರವೇರಿಸಿದರು.

ನಂತರ ಮಾತನಾಡಿದ ಅವರು ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರತಿ ಗ್ರಾಮದ ಅಭಿವೃದ್ಧಿಗೆ ಚಾಲನೆ ನೀಡಲು ಸಂಕಲ್ಪ ಮಾಡಿದ್ದೇನೆ ಎಂದು ಹೇಳಿದರು.

ಕಾವೇರಿ ನೀರಾವರಿ ನಿಗಮ,ಸಣ್ಣ ನೀರಾವರಿ ನಿಗಮ,ಎಸ್ಸಿಪಿ, ಪಂಚಾಯತ್ ರಾಜ್ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಸೇರಿದಂತೆ ವಿವಿಧ ಇಲಾಖೆಗಳಿಂದ ಅನುದಾನ ತಂದು ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಶ್ರೀರಂಗಪಟ್ಟಣವಿಧಾನ ಸಭಾ ಕ್ಷೇತ್ರವನ್ನು ಮಾದರಿ ವಿಧಾನಸಭಾ ಕ್ಷೇತ್ರವಾಗಿ ಮಾಡಲು ಸಂಕಲ್ಪ ಮಾಡಿದ್ದೇನೆ ಎಂದು ಹೇಳಿದರು.

ಕ್ಷೇತ್ರದ ಜನರು ಮತ್ತೊಮ್ಮೆ ನನ್ನ ಮೇಲೆ ವಿಶ್ವಾಸವಿಟ್ಟು ವಾಪಸ್ ಜನಪ್ರತಿನಿಧಿಯಾಗಿ ಆಯ್ಕೆ ಮಾಡಿದ್ದಾರೆ.ಅವರ ನಂಬಿಕೆಗೆ ಚ್ಯುತಿ ಬಾರದ ರೀತಿ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಸತೀಶ್, ಮಧು, ಮಂಜುನಾಥ್, ಶಂಕರ್, ತಗ್ಗಹಳ್ಳಿ ಕೃಷ್ಣ, ಮಹದೇವಸ್ವಾಮಿ,ಶಿವಣ್ಣ, ಸೇರಿದಂತೆ ಮತ್ತಿತರರು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!