Thursday, November 19, 2026

ಪ್ರಾಯೋಗಿಕ ಆವೃತ್ತಿ

ಕಲೆ- ಸಾಹಿತ್ಯದಿಂದ ವೈಚಾರಿಕತೆ ಬೆಳೆಯಲು ಸಹಕಾರಿ: ಮರಿತಿಬ್ಬೇಗೌಡ

ಕಲೆ, ಸಾಹಿತ್ಯ, ಸಂಸ್ಕೃತಿ ಕಡೆಗೆ ಮಕ್ಕಳನ್ನು ಸೆಳೆಯುವುದರಿಂದ ಅವರಲ್ಲಿ ಮಾನವೀಯ ಮೌಲ್ಯ, ವೈಚಾರಿಕತೆ ಬೆಳೆಯಲು ಸಾಧ್ಯವಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ತಿಳಿಸಿದರು.

ಮಂಡ್ಯನಗರ ಶ್ರೀಲಕ್ಷ್ಮಿಜನಾರ್ಧನ ಶಿಕ್ಷಣ ಸಮಿತಿ ಟ್ರಸ್ಟ್ ವತಿಯಿಂದ ಶಾಲೆಯ ಆವರಣದಲ್ಲಿ ನಡೆದ ಶಾಲಾ-ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಕೌಸ್ತುಭ ಸಂಚಿಕೆ ಬಿಡುಗಡೆ ಮಾಡಿ ಮಾತನಾಡಿದ ಅವರು, ಸಮಾಜಮುಖಿಯಾಗಿ ವ್ಯಕ್ತಿತ್ವ ರೂಪಿಸಿಕೊಳ್ಳುವುದಕ್ಕೆ ಕೇವಲ ಅತಿ ಹೆಚ್ಚು ಅಂಕ ಪಡೆದರೆ ಸಾಲದು, ಮೌಲ್ಯಗಳು, ಮಾನವೀಯತೆ, ವೈಚಾರಿಕತೆ, ವಿಚಾರವಂತಿಕೆಯನ್ನು ರೂಢಿಸಿಕೊಂಡಲ್ಲಿ ಬದುಕು ಸಾರ್ಥಕತೆ ಪಡೆಯಲು ಸಾಧ್ಯ ಎಂದು ಪ್ರತಿಪಾದಿಸಿದರು.

ಕೋವಿಡ್ ನಂತರ ಎಲ್ಲಾ ಶಾಲಾ ಕಾಲೇಜುಗಳಲ್ಲೂ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಆದರೂ ಕೆಲವು ಶಿಕ್ಷಣ ಸಂಸ್ಥೆಗಳಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಇದಕ್ಕೆ ಅಲ್ಲಿನ ಅಧ್ಯಾಪಕ ವರ್ಗ ಕಾರಣ ವಾಗುತ್ತದೆ.  ಖಾಸಗೀ ಶಿಕ್ಷಣ ಸಂಸ್ಥೆಗಳು ಉಳಿಯಲು ಅಲ್ಲಿನ ಶಿಕ್ಷಕರು ಎಲ್ಲ ವಿದ್ಯಾರ್ಥಿಗಳನ್ನು ಆಧರಿಸಿ ಅರ್ಥ ಆಗುವ ರೀತಿಯಲ್ಲಿ ಪಾಠ ಮಾಡುವುದರ ಜೊತೆಗೆ ಪಠ್ಯೇತರ ಚಟುವಟಿಕೆಯಲ್ಲಿ ಅವರನ್ನು ಭಾಗವಹಿಸುವಂತೆ ಮಾಡುವುದು ಸಹ ಮಕ್ಕಳ ಸಂಖ್ಯೆ ಹೆಚ್ಚಳಕ್ಕೆ ಕಾರಣವಾಗುತ್ತದೆ ಎಂದು ಹೇಳಿದರು.

ಶಿಕ್ಷಕರಿಗೆ ತುಂಬಾ ತೊಂದರೆಗಳಿವೆ, ಹಲವಾರು ಸಮಸ್ಯೆಗಳೂ ಅವರನ್ನು ಕಾಡುತ್ತಿವೆ. ಈ ಬಗ್ಗೆ ಸರ್ಕಾರದ ಗಮನ ಸೆಳೆಯುತ್ತಿವೆ, ಹೋರಾಟ ಮಾಡುತ್ತಿದ್ದೇವೆ. ಸರ್ಕಾರಗಳು ಸಹ ಸ್ವಲ್ಪ ಮಟ್ಟಿಗೆ ಸಹಕಾರ ನೀಡುತ್ತಿವೆಯಾದರೂ, ಸಾಲದು. ಶಿಕ್ಷಕರ ಸಮಸ್ಯೆಗಳ ಬಗ್ಗೆ ನಾವು ನಿರಂತರ ಹೋರಾಟ ಮಾಡುತ್ತಲೇ ಇರುತ್ತವೆ ಎಂದು ಭರವಸೆ ನೀಡಿದರು.

ಇದೇ ವೇಳೆ ಶಿಕ್ಷಕ ರವಿಕುಮಾರ್ ಅವರು ನೀಡಿದ ಲ್ಯಾಪ್‌ಟಾಪ್ ಕಂಪ್ಯೂಟರನ್ನು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಶಾಸಕ ಪಿ. ರವಿಕುಮಾರ್ ಸಮಾರಂಭ ಉದ್ಘಾಟಿಸಿದರು. ಸಂಸ್ಥೆಯ ಅಧ್ಯಕ್ಷೆ ಅಂಜನಾ ಶ್ರೀಕಾಂತ್ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ಚಲುವಯ್ಯ, ಸಂಸ್ಥೆಯ ಡಾ.ಬಿ.ಕೆ. ಸುರೇಶ್, ಶಕಿಲಾ ಪ್ರಕಾಶ್, ಮಂಜುನಾಥ್, ಅಶೋಕ್, ಕಸ್ತೂರಿ, ಕಾಲೇಜಿನ ಪ್ರಾಂಶುಪಾಲೆ ಎನ್.ಜಿ. ಲತಾ, ಪ್ರೌಢಶಾಲಾ ಮುಖ್ಯ ಶಿಕ್ಷಕ ಎಚ್.ವಿ. ಧನಲಕ್ಷ್ಮಿ ಇತರರು ಸಮಾರಂಭದಲ್ಲಿ ಭಾಗವಹಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ