Thursday, September 19, 2024

ಪ್ರಾಯೋಗಿಕ ಆವೃತ್ತಿ

ದ್ವೇಷ ಭಾಷಣ | ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ: ಜ.10ಕ್ಕೆ ವಿಚಾರಣೆ ಮುಂದೂಡಿಕೆ

ಮುಸ್ಲಿಮ್‌ ಮಹಿಳೆಯರ ಅವಹೇಳನ ಮತ್ತು ಧಾರ್ಮಿಕ ದ್ವೇಷ ಬಿತ್ತುವ ಭಾಷಣಗೈದ ಆರೋಪ ಎದುರಿಸುತ್ತಿರುವ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್‌ ಭಟ್‌ ಜಾಮೀನು ಅರ್ಜಿಯ ವಿಚಾರಣೆಯು ಶುಕ್ರವಾರ ಶ್ರೀರಂಗಪಟ್ಟಣದ 3ನೇ ಅಪರ ಜಿಲ್ಲಾ ಸೆಶನ್ ನ್ಯಾಯಾಲಯದಲ್ಲಿ ನಡೆಯಿತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ್ತಿ ನಜ್ಮಾ ನಝೀರ್‌ ದೂರು ದಾಖಲಿಸಿದ್ದರು. ದೂರುದಾರರ ಪರವಾಗಿ ವಕೀಲ ಎಸ್‌ ಬಾಲನ್‌ ಅವರು ಸಿಆರ್‌ಪಿಸಿ ಸೆಕ್ಷನ್‌ 301 ಮತ್ತು 302ರ ಅಡಿ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯವು ಆರೋಪಿ ಕಲ್ಲಡ್ಕ ಪ್ರಭಾಕರ ಭಟ್‌ಗೆ ನೀಡಿರುವ ಮಧ್ಯಂತರ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸಬೇಕು ಎಂದು ಹಿರಿಯ ವಕೀಲ ಎಸ್ ಬಾಲನ್ ವಾದ ಮಂಡಿಸಿದರು‌.

ತನ್ನ ವಾದದ ವೇಳೆ, “ಪ್ರಭಾಕರ ಭಟ್ ಈ ರೀತಿ ಕೃತ್ಯಗಳ ಚಾಳಿ ಹೊಂದಿರುವ ವ್ಯಕ್ತಿ. ದ್ವೇಷ ಭಾಷಣ ಎನ್ನುವುದು ದೇಶ ಒಡೆಯುವ ಕೃತ್ಯ ಎಂದು ಸುಪ್ರಿಂ ಕೋರ್ಟ್ 2021 ಅಕ್ಟೋಬರ್ 21ರ ಆದೇಶದಲ್ಲಿ ಹೇಳಿದೆ. ಹಾಗಾಗಿ ಇದು ದೇಶದ್ರೋಹದ ಕೃತ್ಯ” ಎಂದು ಪ್ರಾಥಮಿಕ ವಾದ ಮಂಡಿಸಿದರು.

“ಚಾರ್ಜ್  ಶೀಟ್ ಸಲ್ಲಿಕೆಯಾಗಿದ್ದರೆ ಕಲ್ಲಡ್ಕ ಪ್ರಭಾಕರ್ ಭಟ್ ಮಧ್ಯಂತರ ಜಾಮೀನು ತಕ್ಷಣ ರದ್ದು ಮಾಡಬೇಕು. ದೇಶಕ್ಕಿಂತ ಮಿಗಿಲು ಯಾರೂ ಇಲ್ಲ. ಸುಪ್ರಿಂ ಕೋರ್ಟ್ ದ್ವೇಷ ಭಾಷಣದ ಬಗ್ಗೆ ಆದೇಶ ನೀಡಿದ್ದು ಮಾತ್ರವಲ್ಲ, ತೀಕ್ಷ್ಣವಾದ ಸೂಚನೆಗಳನ್ನು ಎಲ್ಲ ರಾಜ್ಯಗಳಿಗೆ ನೀಡಿದೆ” ಎಂದು ಬಾಲನ್ ವಾದ ಮಂಡಿಸಿದರು. ವಾದವನ್ನು ಆಲಿಸಿದ ನ್ಯಾಯಾಲಯವು, ಅರ್ಜಿಯ ವಿಚಾರಣೆಯನ್ನು ಜನವರಿ 10ಕ್ಕೆ ಮುಂದೂಡಿದೆ.

ಕಲ್ಲಡ್ಕ ಪ್ರಭಾಕರ್ ಭಟ್ ಪರವಾಗಿ ಹಿರಿಯ ವಕೀಲರು ಹಾಜರಾಗದೇ ಇದ್ದುದ್ದರಿಂದ ಅವರ ಕಿರಿಯ ವಕೀಲರು ಸಮಯ ಕೇಳಿದರು. ಇದಕ್ಕೆ ದೂರುದಾರರ ಪರ ವಕೀಲ ಲಕ್ಷ್ಮಣ್ ಚೀರನಹಳ್ಳಿ ಆಕ್ಷೇಪಣೆ ವ್ಯಕ್ತಪಡಿಸುತ್ತಾ ಜಾಮೀನು ಅರ್ಜಿ7 ದಿನಗಳ ಒಳಗೆ ಇತ್ಯರ್ಥ ಪಡಿಸುವ ನಿಟ್ಟಿನಲ್ಲಿ ಅವಕಾಶ ಬೇಡ ಎಂದರು, ಇದಕ್ಕೆ ಆರೋಪಿ ಪರ ವಕೀಲರಿಗೆ ಇದು ಕಡೆಯ ಅವಕಾಶ ಎಂದು ನ್ಯಾಯಾಧೀಶರು ಎಚ್ಚರಿಕೆ ನೀಡಿದರು.

“ಆರೋಪಿ ವಿರುದ್ದ ಚಾರ್ಜ್ ಶೀಟ್ ಸಿದ್ಧವಾಗಿದೆ” ಎಂದು ನ್ಯಾಯಾಧೀಶರು ಎಸ್ ಬಾಲನ್ ಅವರಿಗೆ ತಿಳಿಸಿದರು ಎಂದು ಗೊತ್ತಾಗಿದೆ.

ಪ್ರಕರಣದ ಹಿನ್ನೆಲೆ

ಹನುಮ ಜಯಂತ್ಯುತ್ಸವದ ಅಂಗವಾಗಿ ಕಳೆದ ಡಿಸೆಂಬರ್‌ 24ರಂದು ಶ್ರೀರಂಗಪಟ್ಟಣದಲ್ಲಿ ಹಿಂದೂ ಜಾಗರಣಾ ವೇದಿಕೆಯು ಆಯೋಜಿಸಿದ್ದ ಸಂಕೀರ್ತನಾ ಯಾತ್ರೆಯಲ್ಲಿ ಪ್ರಭಾಕರ್‌ ಭಟ್‌ ಮುಸ್ಲಿಮರ ವಿರುದ್ಧ ಧಾರ‍್ಮಿಕ ದ್ವೇಷಕಾರಿದ್ದಾರೆ ಎಂದು ನಜ್ಮಾ ನಝೀರ್‌ ನೀಡಿದ್ದರು.

ಈ ದೂರಿನ ಅನ್ವಯ ಶ್ರೀರಂಗಪಟ್ಟಣ ಟೌನ್‌ ಠಾಣೆಯ ಪೊಲೀಸರು ಪ್ರಭಾಕರ್‌ ಭಟ್‌ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ ೨೯೪ (ಸರ‍್ವಜನಿಕ ಸ್ಥಳದಲ್ಲಿ ಅಶ್ಲೀಲ ಮಾತುಗಳನ್ನು ಆಡುವುದು), ೫೦೯ (ಮಹಿಳೆಯ ಖಾಸಗಿತನಕ್ಕೆ ಸಂಬಂಧಿಸಿದ ಮಾತುಗಳನ್ನಾಡುವುದು), ೧೫೩ಎ (ರ‍್ಮದ ಆಧಾರದಲ್ಲಿ ಸಮುದಾಯಗಳ ನಡುವೆ ದ್ವೇಷ ಹರಡುವುದು) ಮತ್ತು ೨೯೮ (ಉದ್ದೇಶಪರ‍್ವಕವಾಗಿ ಧಾರ‍್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡುವುದು) ಅಡಿ ಪ್ರಕರಣ ದಾಖಲಿಸಿಕೊಂಡಿದ್ದರು.

ಆರೋಪಿಯನ್ನು ಬಂಧಿಸಲ್ಲ ಎಂದಿದ್ದ ಸರ್ಕಾರ ಪರ ವಕೀಲರು!

ತನ್ನ ವಿರುದ್ಧದ ಎಫ್‌ಐಆರ್ ಅನ್ನು ವಜಾಗೊಳಿಸುವಂತೆ ಆರೋಪಿ ಕಲ್ಲಡ್ಕ ಪ್ರಭಾಕರ್ ಭಟ್ ಹೈಕೋರ್ಟ್ ನ ಮೊರೆ ಹೋಗಿದ್ದರು. ಈ ನಡುವೆ ಆರೋಪಿಯನ್ನು ನಾವು ಬಂಧಿಸಲ್ಲ ಎಂದು ರ‍್ಕಾರದ ಪರ ವಕೀಲರು ನ್ಯಾಯಾಲಯಕ್ಕೆ ಭರವಸೆ ನೀಡಿದ್ದರಿಂದ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿತ್ತು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!