Thursday, September 19, 2024

ಪ್ರಾಯೋಗಿಕ ಆವೃತ್ತಿ

ಯುವನಿಧಿ ನೋಂದಣಿಗೆ ಎಲ್ಲರ ಸಹಕಾರ ಅಗತ್ಯ: ಡಾ. ಕುಮಾರ

ಮಂಡ್ಯ ಜಿಲ್ಲೆಯಲ್ಲಿರುವ ವಿವಿಧ ಕಾಲೇಜಿನ ಪ್ರಾಂಶುಪಾಲರು ತಮ್ಮಲ್ಲಿ 2022-23 ನೇಸಾಲಿನಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಮಾಹಿತಿ ಲಭ್ಯವಿದ್ದು, ಯುವನಿಧಿ ಯೋಜನೆಗೆ ಅಭ್ಯರ್ಥಿಗಳನ್ನು ನೊಂದಾಯಿಸಲು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.

ಮಂಡ್ಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಯುವನಿಧಿ ನೊಂದಣಿ ಕುರಿತು ಜಿಲ್ಲೆಯ ವಿವಿಧ ಕಾಲೇಜಿನ ಪ್ರಾಂಶುಪಾಲರ ಸಭೆ ನಡೆಸಿ ಮಾತನಾಡಿದರು.2022- 23ನೇ ಶೈಕ್ಷಣಿಕ ಸಾಲಿನ 2023ರಲ್ಲಿ ಪದವಿ ಅಥವಾ ಡಿಪ್ಲೋಮೋ ಉತ್ತೀರ್ಣರಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಕಾಲೇಜಿನ ಪ್ರಾಂಶುಪಾಲರಿಗೆ ಸುಲಭವಾಗಿ ವಿದ್ಯಾರ್ಥಿಗಳನ್ನು ಸಂಪರ್ಕಿಸಲು ಸಾಧ್ಯ. ಉನ್ನತ ವ್ಯಾಸಂಗಕ್ಕೆ, ಉದ್ಯೋಗ ಅಥವಾ ಸ್ವಯಂ ಉದ್ಯೋಗ ಪಡೆದುಕೊಂಡವರನ್ನು ಹೊರತು ಪಡಿಸಿ ಉಳಿದ ವಿದ್ಯಾರ್ಥಿಗಳನ್ನು ಈ ಯೋಜನೆಯಡಿ ನೊಂದಣಿ ಮಾಡಿಸಿ‌ ಯಾವುದೇ ಅಭ್ಯರ್ಥಿ ಯುವನಿಧಿ ಯೋಜನೆಯಿಂದ ವಂಚಿತರಾಗದಂತೆ ನೋಡಿಕೊಳ್ಳಿ ಎಂದರು.

ಜಿಲ್ಲೆಯಲ್ಲಿ ಅಂದಾಜು 10000 ವಿದ್ಯಾರ್ಥಿಗಳು 2022-23 ನೇ ಸಾಲಿನಲ್ಲಿ ಉತ್ತೀರ್ಣರಾಗಿದ್ದಾರೆ.ಇವರಲ್ಲಿ ಶೇ 40 ವಿದ್ಯಾರ್ಥಿಗಳು ಉನ್ನತ ವ್ಯಾಸಂಗ ಹಾಗೂ ಉದ್ಯೋಗಕ್ಕೆ ಸೇರ್ಪಡೆಯಾಗಿದ್ದರೆ ಎಂದು ಭಾವಿಸಿದರೂ 6000 ವಿದ್ಯಾರ್ಥಿಗಳು ನೊಂದಣಿಯಾಗಬೇಕು. ಜಿಲ್ಲೆಯಲ್ಲಿ ಈ ವರೆಗೆ ಕೇವಲ 715 ಅಭ್ಯರ್ಥಿಗಳು ನೊಂದಣಿ ಮಾಡಿಕೊಂಡಿದ್ದರೆ. ನೊಂದಣಿ ಪ್ರಕ್ರಿಯೆ ಚುರುಕುಗೊಳ್ಳಬೇಕು ಎಂದರು.

ವಿಶ್ವವಿದ್ಯಾಲಯಗಳಿಂದ ಎನ್.ಎ.ಡಿ ನಲ್ಲಿ ಅಂಕಪಟ್ಟಿ ಅಪ್ ಲೋಡ್ ಆಗಿಲ್ಲದ ಕಾರಣ ನೊಂದಣಿ ಕ್ಷೀಣವಾಗಿದೆ ಎಂದು ತಿಳಿಸಿರುವ ಹಿನ್ನಲೆಯಲ್ಲಿ ವಿಶ್ವವಿದ್ಯಾಲಯಗಳೊಂದಿಗೆ ಚರ್ಚಿಸಿ ಎನ್.ಎ.ಡಿ ನಲ್ಲಿ ಅಂಕಪಟ್ಟಿ ಅಪ್ ಲೋಡ್ ಮಾಡಲು ತಿಳಿಸಲಾಗಿದೆ. ಕಾಲೇಜಿನ ಪ್ರಾಂಶುಪಾಲರು ವಿಶೇಷ ಕಾಳಜಿ ವಹಿಸಿ ವಿಶ್ವವಿದ್ಯಾಲಯದೊಂದಿಗೆ ಸಮನ್ವಯ ಸಾಧಿಸಿ ತಮ್ಮ ಕಾಲೇಜಿನ ವಿದ್ಯಾರ್ಥಿಗಳ ಅಂಕಪಟ್ಟಿ ಎನ್.ಎ.ಡಿ ಯಲ್ಲಿ ಅಪ್ ಲೋಡ್ ಮಾಡಿಸಿ ಎಂದರು.

ವಿಶ್ವ ಕೌಶಲ್ಯ ಸ್ಪರ್ಧೆ ವಿಶ್ವ ಕೌಶಲ್ಯ ಸ್ಪರ್ಧೆಯು ಎರಡು ವರ್ಷಗಳಿಗೊಮ್ಮೆ ಪ್ರಪಂಚದ ಆಯಕಟ್ಟಿನ ಸ್ಥಳಗಳಲ್ಲಿ/ದೇಶಗಳಲ್ಲಿ ಆಯೋಜಿಸಲಾಗುವ ಪ್ರಮುಖ ಜಾಗತಿಕ ಕಾರ್ಯಕ್ರಮವಾಗಿದ್ದು, 2024 ರಲ್ಲಿ ವಿಶ್ವ ಕೌಶಲ್ಯ ಸ್ಪರ್ಧೆಯು ಫ್ರಾನ್ಸ್ ದೇಶದ ಲಿಯಾನ್‌ನಲ್ಲಿ ನಡೆಯಲಿದೆ.ಇದಕ್ಕೆ ಪೂರ್ವ ತಯಾರಿಯಾಗಿ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವು (KSDC) ಇಂಡಿಯಾ ಸ್ಕಿಲ್ಸ್ ಕರ್ನಾಟಕ 2023-24 ಸ್ಪರ್ಧೆಯನ್ನು ಪ್ರಾರಂಭಿಸಿದೆ. ಕೌಶಲ್ಯ ಸ್ಪರ್ಧೆಗಳಲ್ಲಿ ಗೆಲುವು ಸಾಧಿಸಿದವರಿಗೆ ನಿರಂತರ ತರಬೇತಿಯನ್ನು ಒದಗಿಸಿ ಪ್ರಾದೇಶಿಕ ಮತ್ತು ರಾಷ್ಟ್ರಮಟ್ಟದಲ್ಲಿ ಗೆಲುವು ಸಾಧಿಸಲು ಹಾಗೂ ಭಾರತವನ್ನು ಜಾಗತಿಕ ಮಟ್ಟದಲ್ಲಿ ಪ್ರತಿನಿಧಿಸಲು ವೇದಿಕೆಯನ್ನು ಕಲ್ಪಿಸಿಕೊಡಲಾಗುವುದು ಎಂದರು

22 ವರ್ಷದೊಳಗಿನವರು ಹೆಸರು ನೊಂದಾಯಿಸಿಕೊಳ್ಳಬಹುದಾಗಿದ್ದು, ನೋಂದಾಯಿಸಿಕೊಳ್ಳಲು ಜನವರಿ 07 ಕೊನೆಯ ದಿನಾಂಕವಾಗಿರುತ್ತದೆ. ಪ್ರಾಂಶುಪಾಲರು ತಮ್ಮ ಕಾಲೇಜಿನಲ್ಲಿ ಕೌಶಲ್ಯಯುತ ವಿದ್ಯಾರ್ಥಿಗಳನ್ನು ನೊಂದಾಯಿಸಿ ಎಂದರು

ಇದೇ ಸಂದರ್ಭದಲ್ಲಿ ಕೌಶಲ್ಯಾಭಿವೃದ್ದಿ,ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ವಿಶ್ವ ಕೌಶಲ್ಯ ಸ್ಪರ್ಧೆ -2024 ಪೋಸ್ಟರ್ ಅನ್ನು ಬಿಡುಗಡೆ ಮಾಡಲಾಯಿತು.

ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಯತೀಶ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಆನಂದ್ ಕುಮಾರ್ , ಪಾಂಡವಪುರ ಉಪವಿಭಾಗಾಧಿಕಾರಿ ನಂದೀಶ್, ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ ನಾಗನಂದ ಆರ್ , ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇದಕಿ ಶೈಲಜಾ, ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ ನಾಗರಾಜು ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!