Thursday, September 19, 2024

ಪ್ರಾಯೋಗಿಕ ಆವೃತ್ತಿ

ಗ್ರಾಮೀಣ ವಿದ್ಯಾರ್ಥಿಗಳಿಂದ ಅತ್ಯುತ್ತಮ ಸಾಧನೆ

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಗ್ರಾಮೀಣ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶ ದಾಖಲಿಸಿದ್ದಾರೆ ಎಂದು ಅಭಿನವಭಾರತಿ ವಿದ್ಯಾ ಕೇಂದ್ರದ ಕಾರ್ಯದರ್ಶಿ ಶಿವಮೂರ್ತಿ ಕೀಲಾರ ಹೇಳಿದರು.

ಮಂಡ್ಯ ನಗರದಲ್ಲಿರುವ ಅಭಿನವ ಭಾರತಿ ವಿದ್ಯಾಕೇಂದ್ರದಲ್ಲಿ ಇಂದು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಅಭಿನಂದಿಸಿ ಅವರು ಮಾತನಾಡಿದರು.

ಅಭಿನವಭಾರತಿ ವಿದ್ಯಾಕೇಂದ್ರದ ಪ್ರೌಢಶಾಲೆಯು ಸತತವಾಗಿ 3 ವರ್ಷಗಳಿಂದಲೂ ಪ್ರಥಮಸ್ಥಾನ ಪಡೆದುಕೊಳ್ಳುವಲ್ಲಿ ವಿದ್ಯಾರ್ಥಿಗಳ ಶ್ರಮ ಮತ್ತು ಶಿಕ್ಷಕ ವೃಂದದ ಪರಿಶ್ರಮವು “ಎ ಗ್ರೇಡ್” ಫಲಿತಾಂಶ ರೂಪದಲ್ಲಿ ದಾಖಲಾಗಿದೆ ಎಂದು ಪ್ರಶಂಶಿಸಿದರು.

ಶಾಲೆಯಲ್ಲಿ 5 ವಿದ್ಯಾರ್ಥಿಗಳು 600ಅಂಕಗಳಿಗಿಂತಲೂ ಹೆಚ್ಚು ಅಂಕ ಪಡೆದಿದ್ದಾರೆ, 44 ವಿದ್ಯಾರ್ಥಿಗಳು ಅತ್ಯುನ್ನತ ದರ್ಜೆಯಲ್ಲಿ ತೇರ್ಗಡೆ ಹೊಂದಿ, 34 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ತಿಳಿಸಿದರು.

ಕನ್ನಡ ವಿಷಯದಲ್ಲಿ 3, ಇಂಗ್ಲೀಷ್‌ನಲ್ಲಿ 2, ಹಿಂದಿಯಲ್ಲಿ 8, ಗಣಿತದಲ್ಲಿ 2,ವಿಜ್ಞಾನದಲ್ಲಿ 1, ಸಮಾಜ ವಿಜ್ಞಾನದಲ್ಲಿ 7 ವಿದ್ಯಾರ್ಥಿಗಳು ಶೇ.100 ಅಂಕ ಪಡೆದು ಶಾಲೆಗೆ ಮತ್ತು ಪೋಷಕರಿಗೆ ಕೀರ್ತಿ ತಂದಿದ್ದಾರೆ. ಇಂತಹ ಗ್ರಾಮೀಣ ಪ್ರತಿಭೆಗಳನ್ನು ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗ ಅಭಿನಂದಿಸಲು ಹೆಮ್ಮೆ ಪಡುತ್ತದೆ ಎಂದರು.

ಇದೇ ಸಂದರ್ಭದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಾದ ನವ್ಯಶ್ರೀ 623, ಕಿಶೋರ್‌ಗೌಡ 617, ಕಿಶನ್‌ಕುಮಾರ್ 609, ಪಂಕಜಾಕ್ಷಿ 609, ಶ್ರೀಕೃಷ್ಣಸಾರಥಿ 602 ಅಂಕ ಪಡೆದಿದ್ದು,ಎಲ್ಲರನ್ನೂ ಅಭಿನಂದಸಿಲಾಯಿತು.

ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆಯ ಪ್ರಾಂಶುಪಾಲೆ ಅಂಜಲಿ ಜೋಷಿ ಮತ್ತು ಶಿಕ್ಷಕರು ಅಭಿನಂದಿಸಿದರು. ಶಾಲಾ ಸಿಬ್ಬಂದಿಗಳು ಮತ್ತು ಪೋಷಕರು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!