Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ| ಪಿಯುಸಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ

ಪ್ರಥಮ ಹಾಗೂ ದ್ವಿತೀಯ ಪಿಯುಸಿ ಓದುತ್ತಿರುವ ಮಕ್ಕಳಿಗೆ ಅವರ ಶೈಕ್ಷಣಿಕ ಪ್ರಗತಿ ಉಚಿತವಾಗಿ ಲ್ಯಾಪ್ ಟಾಪ್ ವಿತರಿಸಲಾಗಿದೆ ಎಂದು ಶಾಸಕ ಪಿಎಂ ನರೇಂದ್ರಸ್ವಾಮಿ ತಿಳಿಸಿದರು.

ಮಳವಳ್ಳಿ ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಇಲಾಖೆಯಿಂದ ಪಿಯುಸಿ ಓದುತ್ತಿರುವ ಮಕ್ಕಳಿಗೆ ಉಚಿತ ಲ್ಯಾಪ್ ಟಾಪ್ ವಿತರಿಸಿ ಮಾತನಾಡಿದ ಅವರು, ಸ್ಪರ್ಧಾತ್ಮಕ ಯುಗದಲ್ಲಿ ಕಠಿಣ ಪರಿಶ್ರಮದಿಂದ ಓದಿದರೇ ಮಾತ್ರ ಯಶಸ್ಸು ಗಳಿಸಲು ಸಾಧ್ಯವಾಗಲಿದ್ದು, ನಿಲ೯ಕ್ಷ್ಯ ವಹಿಸದೇ ವ್ಯಾಸಂಗದ ಕಡೆಗೆ ಗಮನ ನೀಡಬೇಕು. ಎಲ್ಲರಂತೆ ಸಮಾನವಾಗಿ ಶಿಕ್ಷಣ ಸಿಗಬೇಕೆಂಬ ಉದ್ದೇಶದಿಂದ ದುಡಿಯುವ ವಗ೯ದ ಕಾಮಿ೯ಕ ಮಕ್ಕಳಿಗೆ ಸಕಾ೯ರ ಲ್ಯಾಪ್ ಟಾಪ್ ವಿತರಣೆ ಮಾಡುತ್ತಿದ್ದು, ಪ್ರಯೋಜನ ಪಡೆದುಕೊಳ್ಳಬೇಕೆಂದು ತಿಳಿಸಿದರು.

ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆಗಳನ್ನು ಅಳವಡಿಸಿಕೊಂಡು ಮೂಡನಂಬಿಕೆಗಳನ್ನು ದೂರ ಮಾಡಬೇಕು, ಉನ್ನತ ಶಿಕ್ಷಣ ಪಡೆದು ಒಳ್ಳೇಯ ಉದ್ಯೋಗವನ್ನು ಪಡೆದು ಮನೆಯ ಬೆಳಕಾಗಬೇಕೆಂದು ಸಲಹೆ ನೀಡಿದರು. ಸ್ಪರ್ಧಾತ್ಮಕ ಯುಗದ ಪ್ರಸ್ತುತ ಸಂದರ್ಭದಲ್ಲಿ ಅವಕಾಶಗಳು ಸಾಕಷ್ಟು ಇದ್ದು, ಪ್ರತಿಭೆ ತಕ್ಕಂತೆ ಉದ್ಯೋಗವನ್ನು ಪಡೆದು ಜೀವನವನ್ನು ಸಾಥ೯ಕಗೊಳಿಸಿಕೊಳ್ಳಬೇಕೆಂದು ತಿಳಿಸಿದರು. ಇದೇ ಸಂದರ್ಭದಲ್ಲಿ 30 ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಲಾಯಿತು.

ವೇದಿಕೆಯಲ್ಲಿ ತಹಶಿಲ್ದಾರ್ ಲೊಕೇಶ್, ತಾಲೂಕು ಪಂಚಾಯಿತಿ ಇ. ಓ ಮಮತಾ, ಪುರಸಭೆ ಮುಖ್ಯಾಧಿಕಾರಿ ನಾಗರತ್ನ, ಕಾಮಿ೯ಕ ಇಲಾಖೆ ಅಧಿಕಾರಿ ಸಿ.ಅನಿತಾ ಸೇರಿದಂತೆ ಇತರರು ಇದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!