Saturday, November 21, 2026

ಪ್ರಾಯೋಗಿಕ ಆವೃತ್ತಿ

ವೇಶ್ಯಾವಾಟಿಕೆ ದಂಧೆ ಆರೋಪಿ ಸ್ಯಾಂಟ್ರೋ ರವಿಗೆ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್

ಒಂದು ವರ್ಷದಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಸ್ಯಾಂಟ್ರೋ ರವಿ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ.

ಜಾಮೀನು ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ಬೇಲಾ ಎಂ.ತ್ರಿವೇದಿ ಮತ್ತು ನ್ಯಾಯಮೂರ್ತಿ ಪಂಕಜ್ ಮಿತ್ತಲ್ ಅವರನ್ನೊಳಗೊಂಡ ವಿಭಾಗೀಯ ಪೀಠ, ಸ್ಯಾಂಟ್ರೋ ರವಿ ಪರ ವಾದ ಮಂಡಿಸಿದ ಹಿರಿಯ ವಕೀಲರಾದ ಸಿದ್ಧಾರ್ಥ್ ಲೂತ್ರಾ ಮತ್ತು ರವೀಂದ್ರ ಕಾಮತ್ ಮತ್ತು ಪ್ರಾಸಿಕ್ಯೂಷನ್ ಪರ ವಾದ ಮಂಡಿಸಿದ ವಕೀಲ ಸಿ.ಬಿ.ಗುರುರಾಜ್ ಅವರ ವಾದ ಆಲಿಸಿತು.

ಬಲವಾಗಿ ವಾದಿಸಿದ ವಕೀಲ ಗುರುರಾಜ್, ಪ್ರಕರಣದ ಗಂಭೀರತೆಯನ್ನು ಕೋರ್ಟ್‌ಗೆ ಮನವರಿಕೆ ಮಾಡಿಕೊಟ್ಟರು ಮತ್ತು ಸ್ಯಾಂಟ್ರೋ ರವಿ ಕರ್ನಾಟಕ ರಾಜ್ಯದಾದ್ಯಂತ 22 ಕ್ಕೂ ಹೆಚ್ಚು ಮಾನವ ಕಳ್ಳಸಾಗಣೆ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ ಎಂದು ತಿಳಿಸಿದರು.

ವಕೀಲ ಗುರುರಾಜ್ ಅವರ ವಾದವನ್ನು ಗೌರವಿಸಿದ ನ್ಯಾಯಮೂರ್ತಿಗಳಾದ ಬೇಲಾ ಎಂ. ತ್ರಿವೇದಿ ಮತ್ತು ಪಂಕಜ್ ಮಿತ್ತಲ್ ಅವರು ಸ್ಯಾಂಟ್ರೋ ರವಿ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದಾರೆ. ವಕೀಲ ವಿ.ಎನ್. ರಘುಪತಿ ಕರ್ನಾಟಕದ ಪರ ವಕೀಲರಾಗಿದ್ದರು.

ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಮೈಸೂರಿನ ವಿಜಯನಗರ ಪೊಲೀಸರು ಕೆ.ಎಸ್. ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿ ವಿರುದ್ಧ ವರದಕ್ಷಿಣೆ ನಿಷೇಧ ಕಾಯಿದೆ, ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದವು,.  ಐಪಿಸಿ ಸೆಕ್ಷನ್ 506, 498A, 504, 376, 270, 313 ಮತ್ತು 323 ರ ಅಡಿಯಲ್ಲಿ ಜನವರಿ 2, 2023 ರಂದು ಸ್ಯಾಂಟ್ರೋ ರವಿ ಮೇಲೆ ಲೈಂಗಿಕ ದೌರ್ಜನ್ಯ, ಬಲವಂತದ ಮದುವೆ ಮತ್ತು ಜಾತಿ ನಿಂದನೆ ಮತ್ತು ಇತರ ಹಲವು ಆರೋಪಗಳನ್ನು ಹೊರಿಸಲಾಗಿತ್ತು. ರವಿ ಆಗ  ತಲೆಮರೆಸಿಕೊಂಡಿದ್ದ.

ಸ್ಯಾಂಟ್ರೋ ರವಿಯ ಸಹಚರರಾದ 45 ವರ್ಷದ ರಾಮ್‌ಜಿ ಮತ್ತು 35 ವರ್ಷದ ಸತೀಶ್ ಕುಮಾರ್ ಅವರನ್ನು ಗುಜರಾತ್‌ನ ಅಹಮದಾಬಾದ್‌ನಲ್ಲಿ ಬಂಧಿಸಲಾಗಿತ್ತು. ಅಲ್ಲಿ ಆಗಿನ ಎಡಿಜಿಪಿ. (ಕಾನೂನು ಮತ್ತು ಸುವ್ಯವಸ್ಥೆ) ಅಲೋಕ್ ಕುಮಾರ್ ಅವರನ್ನು ಒಂದು ಗಂಟೆಗೂ ಹೆಚ್ಚು ಕಾಲ ವಿಚಾರಣೆ ನಡೆಸಿದ್ದರು. ನಂತರ ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಿತ್ತು. ನಂತರ ರವಿಯನ್ನು ಮೈಸೂರು ಜೈಲಿನಿಂದ ಬೆಂಗಳೂರಿಗೆ ಸ್ಥಳಾಂತರಿಸಲಾಗಿತ್ತು.

ಸ್ಯಾಂಟ್ರೋ ರವಿ ಜಾಮೀನು ಕೋರಿ ಜಿಲ್ಲಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಅದು ತಿರಸ್ಕೃತಗೊಂಡಿತ್ತು,  ನಂತರ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದರು, ಅಲ್ಲಿಯೂ ಜಾಮೀನು ಅರ್ಜಿ ವಜಾವಾಗಿತ್ಗೊತು. ನಂತರ ಆತ ಸುಪ್ರೀಂ ಕೋರ್ಟ್‌ಗೆ ತೆರಳಿದರು, ಆದರೆ ಅಲ್ಲಿಯೂ ಜಾಮೀನು ಅರ್ಜಿಗೊಂಡಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ