ಮಂಡ್ಯ ತಾಲ್ಲೂಕು ವ್ಯಾಪ್ತಿಯ 19 ಪರೀಕ್ಷಾ ಕೇಂದ್ರಗಳಲ್ಲಿ ಕೆ.ಸೆಟ್ ಪರೀಕ್ಷೆಯು ಜನವರಿ 13ರಂದು ನಡೆಯಲಿದೆ.
ಕೆ.ಸೆಟ್ (KSET) ಪರೀಕ್ಷೆಯನ್ನು ಸುಗಮವಾಗಿ ನಡೆಸುವ ಸಲುವಾಗಿ ಮಂಡ್ಯ ತಾಲ್ಲೂಕು ವ್ಯಾಪ್ತಿಯ 19 ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಪರೀಕ್ಷಾ ಕೇಂದ್ರಗಳ ಸುತ್ತ ಇರುವ ಜೆರಾಕ್ಸ್ ಅಂಗಡಿಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚುವಂತೆ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಆದೇಶ ಹೊರಡಿಸಿದ್ದಾರೆ.
ಪರೀಕ್ಷಾರ್ಥಿಗಳು ಮತ್ತು ಪರೀಕ್ಷಾ ಕಾರ್ಯಕ್ಕೆ ನೇಮಕಗೊಂಡ ಅಧಿಕಾರಿಗಳು, ಸಿಬ್ಬಂದಿಗಳನ್ನು ಹೊರತುಪಡಿಸಿ ಇತರರು ಯಾರು ನಿಷೇಧಿತ ಪ್ರದೇಶದೊಳಗೆ ಪ್ರವೇಶಿಸುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.




