Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಗಣರಾಜ್ಯೋತ್ಸವದ ಅಂಗವಾಗಿ ಸಂವಿಧಾನ ಜಾಗೃತಿ ಜಾಥ

ಗಣರಾಜ್ಯೋತ್ಸವದ ಅಂಗವಾಗಿ ಜನವರಿ 26 ರಿಂದ ಫೆಬ್ರವರಿ 23ರವರೆಗೆ ಮಂಡ್ಯ ಜಿಲ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.

ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಒಂದು ತಿಂಗಳ ಕಾಲ ನಡೆಯಲಿರುವ ಸಂವಿಧಾನ ಜಾಗೃತಿ ಜಾಥಾಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಜನವರಿ 26 ರಂದು ಚಾಲನೆ ನೀಡಲಿದ್ದಾರೆ.

ಸಂವಿಧಾನದ ಮಹತ್ವ ಹಾಗೂ ಮೌಲ್ಯದ ಕುರಿತು ಅರಿವು ಮೂಡಿಸುವುದು ಹಾಗೂ ರಾಷ್ಟ್ರೀಯ ಏಕತೆಯನ್ನು ಎತ್ತಿಹಿಡಿಯುವುದು ಜಾಗೃತಿ ಜಾಥದ ಉದ್ದೇಶವಾಗಿದೆ. ಸಂವಿಧಾನ ಜಾಗೃತಿ ಜಾಥವು ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸಲಿದ್ದು, ಇದಕ್ಕೆ ವ್ಯವಸ್ಥಿತವಾಗಿ ರೂಟ್ ಮ್ಯಾಪ್ ಸಿದ್ಧಪಡಿಸಬೇಕು ಎಂದರು.

ಸಮಿತಿ ರಚನೆ ಕಾರ್ಯಕ್ರಮದಲ್ಲಿ ಯಾವುದೇ ಲೋಪ ಉಂಟಾಗದAತೆ ನೋಡಿಕೊಳ್ಳಲು ಗ್ರಾಮ ಪಂಚಾಯಿತಿ, ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಸಮಿತಿ ರಚಿಸಲಾಗುವುದು. ಜಾಥಾದ ಬಗ್ಗೆ ಜನಪ್ರತಿನಿಧಿಗಳಿಗೆ ಮಾಹಿತಿ ನೀಡಿ ತಾಲ್ಲೂಕು ಮಟ್ಟದಲ್ಲಿ ಸಭೆ ನಡೆಸಿ. ಸಭೆಗೆ ಎಲ್ಲಾ ಸಂಘಟನೆಗಳ ಮುಂಖಡರನ್ನು ಆಹ್ವಾನಿಸಿ ಎಂದರು.

ಜಾಥದಲ್ಲಿ ಎಲ್.ಇ.ಡಿ ಡಿಸಪ್ಲೇ ವಾಹನದಲ್ಲಿ ಸಂವಿಧಾನ ಜಾಗೃತಿ ಕುರಿತು ವಿಡಿಯೋ ಕ್ಲಿಪ್ ಗಳನ್ನು ಪ್ರದರ್ಶಿಸಲಾಗುವುದು. ಇದರೊಂದಿಗೆ ಸ್ತಬ್ದಚಿತ್ರ ಹಾಗೂ ಕಲಾತಂಡಗಳು ಭಾಗವಹಿಸಿ ವಿಶೇಷÀ ಮೆರಗು ನೀಡಲಿದೆ ಎಂದರು.

ಪ್ರಬಂಧ ಸ್ಪರ್ಧೆ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ನಡೆಸಿ, ಜಾಥಾ ತಮ್ಮ ಗ್ರಾಮಕ್ಕೆ ಆಗಮಿಸಿದಾಗ ಕಾರ್ಯಕ್ರಮ ಆಯೋಜಿಸಿ ಬಹುಮಾನ ವಿತರಣೆ ಮಾಡಿ. ಭಾರತದ ಸಂವಿಧಾನ ಪೀಠಿಕೆ, ನ್ಯಾಯ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಮತ್ತು ಡಾಃ ಬಿ.ಆರ್ ಅಂಬೇಡ್ಕರ್ ಅವರ ಪರಿಕಲ್ಪನೆ, ಬಸವಣ್ಣ ನವರ ವಚನಗಳು ಮತ್ತು ಭಾರತದ ಸಂವಿಧಾನದ ಪ್ರಸ್ತುತತೆ ಸೇರಿದಂತೆ ಇನ್ನಿತರ ವಿಷಯಯಗಳ ಬಗ್ಗೆ ಸಂಪನ್ಮೂಲ ವ್ಯಕ್ತಿಗಳಿಂದ ಉಪನ್ಯಾಸ ಕಾರ್ಯಕ್ರಮ ಆಯೋಜಿಸಿ ಎಂದರು.

ಸಹಿ ಆಂದೋಲನ ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವುದರ ಜೊತೆಗೆ ಸಹಿ ಆಂದೋಲನವನ್ನು ನಡೆಸಿ. ಕಾರ್ಯಕ್ರಮದ ಭಾವಚಿತ್ರವನ್ನು ವೆಬ್ ಸೈಟ್ ನಲ್ಲಿ ಅಪಲೋಡ್ ಮಾಡುವಂತೆ ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 233 ಗ್ರಾಮ ಪಂಚಾಯಿತಿಗಳಿದ್ದು, ರೂಟ್ ಮ್ಯಾಪ್ ಸಿದ್ಧಪಡಿಸುವ ಸಂದರ್ಭದಲ್ಲಿ ಐತಿಹಾಸಿಕ ಸ್ಥಳಗಳಿರುವ ರಸ್ತೆಗಳನ್ನು ಆಯ್ಕೆ ಮಾಡಿ ಎಂದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ಉಪ ವರಿಷ್ಠಾಧಿಕಾರಿ ಶಿವಮೂರ್ತಿ, ಸಮಾಜ ಕ್ಯಲಾಣ ಇಲಾಖೆಯ ಜಂಟಿ ನಿರ್ದೇಶಕ ಸಿದ್ದಲಿಂಗೇಶ್, ತಹಶಿಲ್ದಾರ್ ಡಾ.ಶಿವಕುಮಾರ್ ಬಿರದಾರ, ನಗರಸಭೆ ಆಯುಕ್ತ ಆರ್. ಮಂಜುನಾಥ್ ,ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕಿ ನಿರ್ಮಲ, ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!