ಕರ್ನಾಟಕ ಸ್ವಾಭಿಮಾನಿ ಸಮ ಸಮಾಜ (ಕೆ.ಎಸ್.ಎಸ್.) ಸಂಘಟನೆ ವತಿಯಿಂದ ಭೀಮಾ ಕೋರೆಂಗಾವ್ ವಿಜಯೋತ್ಸವ ಮತ್ತು ಸಾವಿತ್ರಿಬಾಯಿ ಪುಲೆ ಜಯಂತಿ ಪ್ರಯುಕ್ತ ಸ್ವಾಭಿಮಾನಿ ಸಮಾವೇಶವು ಜ. 20ರಂದು ಬೆಳಿಗ್ಗೆ 10 ಗಂಟೆಗೆ ಮಂಡ್ಯ ನಗರದಲ್ಲಿರುವ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ ಎಂದು ಕೆ ಎಸ್ ಎಸ್ ಸಂಘಟನೆಯ ರಾಜ್ಯಾಧ್ಯಕ್ಷ ನರಸಿಂಹಮೂರ್ತಿ ತಿಳಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರಿನ ಉರಿಲಿಂಗಿ ಪೆದ್ದಿ ಮಠದ ಪೀಠಾಧ್ಯಕ್ಷ ಜ್ಞಾನಪ್ರಕಾಶ್ ಸ್ವಾಮೀಜಿ ಹಾಗೂ ಬೌದ್ಧ ಧರ್ಮದ ಧರ್ಮಗುರು ಬಂತೇಜಿಯವರು ದಿವ್ಯ ಸಾನಿಧ್ಯ ವಹಿಸುವರು. ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ ಮಹದೇವಪ್ಪ ಸಮಾರಂಭ ಉದ್ಘಾಟಿಸುವರು.
ಮುಖ್ಯ ಅತಿಥಿಗಳಾಗಿ ಪ್ರಜಾ ಪರಿವರ್ತನೆ ವೇದಿಕೆಯ ರಾಜ್ಯಾಧ್ಯಕ್ಷ ಬಿ ಗೋಪಾಲ್, ಶಾಸಕರಾದ ಪಿ ರವಿಕುಮಾರ್ ಗೌಡ ಗಣಿಗ, ನರೇಂದ್ರಸ್ವಾಮಿ ಉದಯ್ ಕದಲೂರು, ವಿಧಾನ ಪರಿಷತ್ ಸದಸ್ಯ ಸುಧಾಮ್ ದಾಸ್ ಭಾಗವಹಿಸಲಿದ್ದು, ಕೆ ಎಸ್ ಎಸ್ ಸಂಘಟನೆಯ ಸಂಸ್ಥಾಪಕ ಡಾ.ಕುಮಾರಸ್ವಾಮಿ ಸಾಕ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಅಂದು ಬೆಳಗ್ಗೆ 10 ಗಂಟೆಗೆ ಮಂಡ್ಯನಗರದ ಜೆಸಿ ವೃತ್ತದಿಂದ ಅಂಬೇಡ್ಕರ್ ಭವನದವರೆಗೆ ಸ್ವಾಭಿಮಾನಿ ಮೆರವಣಿಗೆ ನಡೆಯಲಿದ್ದು, ನಂತರ ವೇದಿಕೆ ಕಾರ್ಯಕ್ರಮ ಆರಂಭಗೊಳ್ಳಲಿದೆ ಕಾರ್ಯಕ್ರಮದಲ್ಲಿ ಮಂಡ್ಯ, ಮೈಸೂರು, ಹಾಸನ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಸೇರಿದಂತೆ ಹಲವು ಜಿಲ್ಲೆಗಳಿಂದ ಸುಮಾರು 1500 ಕಾರ್ಯಕರ್ತರು ಹಾಗೂ ಅಂಬೇಡ್ಕರ್ ಅನುಯಾಯಿಗಳು, ಅಭಿಮಾನಿಗಳು ಪಾಲ್ಗೊಳ್ಳಲಿದ್ದಾರೆ ಎಂದು ವಿವರಿಸಿದರು.
ಗೋಷ್ಠಿಯಲ್ಲಿ ಕೆಎಸ್.ಎಸ್ ಸಂಘಟನೆಯ ರಾಜ್ಯ ಜಂಟಿ ಕಾರ್ಯದರ್ಶಿ ಚೆಲುವರಾಜ್, ರಾಜ್ಯ ಉಪಾಧ್ಯಕ್ಷ ಜಿ.ಎಸ್ ಸ್ವಾಮಿ ಗುಡಿಗೇನಹಳ್ಳಿ, ರಾಜ್ಯ ಪ್ರಧಾನ ಕಾರ್ಯದರ್ಶಿ, ಡಾ. ಲೋಕೇಶ್ ಮೌರ್ಯ, ಜಿಲ್ಲಾಧ್ಯಕ್ಷ .ಎ.ಪಿ ಚೌದರಿ , ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರದೀಪ ಸೇರಿದಂತೆ ಹಲವರು ಹಾಜರಿದ್ದರು.




