Friday, September 20, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಕಲ್ಲಡ್ಕ ಪ್ರಭಾಕರ್ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ಶ್ರೀರಂಗಪಟ್ಟಣದಲ್ಲಿ ಹಿಂದೂ ಜಾಗರಣ ವೇದಿಕೆ ಆಯೋಜಿಸಿದ್ದ ಸಮಾವೇಶದಲ್ಲಿ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಮುಸ್ಲಿಂ ಮಹಿಳೆಯರಿಗೆ ದಿನಕ್ಕೊಬ್ಬ ಗಂಡ, ಜೀವನಪೂರ್ತಿ ಪರ್ಮನೆಂಟ್ ಗಂಡ ಇರಲಿಲ್ಲ, ಅವರಿಗೆ ಪರ್ಮನೆಂಟ್ ಗಂಡನನ್ನು ಕೊಟ್ಟಿದ್ದು ಮೋದಿ ಸರ್ಕಾರ ಎಂದು ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನವಾಗಿ ಮಾತನಾಡಿದ್ದು, ಆತನನನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ( ಪ್ರೊ.ಕೃಷ್ಣಪ್ಪ ಸ್ಥಾಪಿತ) ಕಾರ್ಯಕರ್ತರು ಮಂಡ್ಯದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಮಂಡ್ಯ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಸಮಿತಿಯ ಕಾರ್ಯಕರ್ತರು ಪ್ರತಿಭಟಿಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ ಪತ್ರ ರವಾನಿಸಿದರು.

ಸಾರ್ವಜನಿಕವಾಗಿ ಮಹಿಳೆಯರನ್ನು ಅವಮಾನಿಸಿ ಧರ್ಮ ನಿಂದಿಸಿ ಧರ್ಮ ಧರ್ಮಗಳ ನಡುವೆ ಬೆಂಕಿ ಹಚ್ಚುವಂತಹ, ಕೋಮುಗಲಭೆಗೆ ಪ್ರಚೋದನೆ ನೀಡುವ ದ್ವೇಷ ಭಾಷಣ ಮಾಡಿರುವ ಇಂತಹ ವರ್ತನೆಯಿಂದ ಅಶಾಂತಿ ವಾತಾವರಣ ಸೃಷ್ಟಿಯಾಗಿ, ಜೀವ ಹಾನಿಯೂ ಸಂಭವಿಸಬಹುದಾಗಿದೆ, ದ್ವೇಷ ಭಾಷಣದ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತರಾಗಿ ಪ್ರಕರಣ ದಾಖಲಿಸಿಕೊಳ್ಳಲು ಅವಕಾಶ ಇದೆ ಎಂಬುದನ್ನು ಸುಪ್ರೀಂ ಕೋರ್ಟ್ ಹೇಳಿದ್ದರೂ ಸಹ ಪೋಲಿಸ್ ಇಲಾಖೆ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು,

ಕಲ್ಲಡ್ಕ ಪ್ರಭಾಕರ್ ಭಟ್ ನನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ ಗಡಿಪಾರು ಮಾಡಬೇಕು, ಸಾಮಾಜಿಕ ನ್ಯಾಯಕ್ಕಾಗಿ ಸಾಮಾಜಿಕ,ಶೈಕ್ಷಣಿಕ ಸಮೀಕ್ಷೆನಡೆಸಿರುವ ಕಾಂತರಾಜ ಆಯೋಗದ ವರದಿಯನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಸಮಿತಿಯ ಮುಖಂಡರಾದ ಶಿವರಾಜ್ ಮರಳಿಗ, ಮದ್ದೂರು ಶ್ರೀನಿವಾಸ್, ಶಂಕರ್ ನಿಡಘಟ್ಟ, ಸವಿತಾ ಶಿವಪುರ, ಪ್ರಕಾಶ್ ನಿಡಘಟ್ಟ, ತಿಮ್ಮೇಶ್ ಅಬಲವಾಡಿ, ದೇವರಾಜ್ ನರಹಳ್ಳಿ, ಎಂ.ಡಿ ಸುರೇಶ್, ಪುಟ್ಟ ಲಿಂಗಯ್ಯ, ಆನಂದ.ಎಸ್,ಹನುಮಂತಯ್ಯ ಇತರರಿದ್ದರು

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!