ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಜ.22ರಂದು ರಾಮಮಂದಿರ ಉದ್ಘಾಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಅಂದು ಸಾರ್ವತ್ರಿಕ ರಜೆ ಘೋಷಿಸಬೇಕೆಂದು ಬಿಜೆಪಿ ಮುಖಂಡರು ಮನವಿ ಮಾಡಿದರು.
ಮಂಡ್ಯ ನಗರದಲ್ಲಿ ಜಿಲ್ಲಾಧಿಕಾರಿ ಡಾ. ಕುಮಾರ ಅವರಿಗೆ ಮನವಿ ಸಲ್ಲಿಸಿದ ಕಾರ್ಯಕರ್ತರು, ಅಂದು ಜಿಲ್ಲೆಯ ಜನತೆ ದೂರದರ್ಶನದಲ್ಲಿ ನೇರ ಪ್ರಸಾರ ವೀಕ್ಷಣೆ ಮಾಡಲು ಅನುಕೂಲವಾಗುವಂತೆ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಣೆ ಮಾಡಬೇಕು. ಅಂದು ಮಾಂಸ, ಮದ್ಯ ಮಾರಾಟ ನಿಷೇಧದ ಮಾಡಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಎಸ್ ಶಿವಕುಮಾರ್ ಆರಾಧ್ಯ,ಸಿ.ಟಿ ಮಂಜುನಾಥ್, ಮಹಾಂತೇಶ್, ಹೊಸಳ್ಳಿ ಶಿವು, ಪ್ರಸನ್ನ ಕುಮಾರ್,ಶಿವಮ್ಮ, ಎಂ.ಎಸ್.ಸುಧಾಮಣಿ,ಬಿ.ಟಿ ಶಿವಲಿಂಗಯ್ಯ, ನಿತ್ಯಾನಂದ ಹಾಜರಿದ್ದರು.




