Friday, September 20, 2024

ಪ್ರಾಯೋಗಿಕ ಆವೃತ್ತಿ

ಕೆ.ಆರ್.ಎಸ್ ಅಣೆಕಟ್ಟಿನ 20 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧ: ಡಾ.ಕುಮಾರ

ಶ್ರೀರಂಗಪಟ್ಟಣ ತಾಲ್ಲೂಕಿನ ಕೃಷ್ಣರಾಜಸಾಗರ ಅಣೆಕಟ್ಟಿನ ಸುತ್ತಮುತ್ತ 20 ಕಿಲೋಮೀಟರ್ ವ್ಯಾಪ್ತಿಯಲ್ಲಿ ಉಚ್ಚ ನ್ಯಾಯಾಲಯದ ಆದೇಶದಂತೆ ಸಂಪೂರ್ಣ ಗಣಿಗಾರಿಕೆ ಹಾಗೂ ಗಣಿಗಾರಿಕೆಗೆ ಸಂಬಂಧಿಸಿದ ಇತರೆ ಚಟುವಟಿಕೆಗಳನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.

ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಅಧಿಕಾರಿಗಳು ಉಚ್ಛ ನ್ಯಾಯಾಲಯ ನೀಡಿರುವ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಕೆ.ಆರ್.ಎಸ್ 20 ಕಿ.ಮೀ ವ್ಯಾಪ್ತಿಯಲ್ಲಿ ಬರುವ 30 ಕ್ವಾರೆಗಳನ್ನು 2022 ನೇ ಸಾಲಿನಲ್ಲಿ ನಿಲುಗಡೆ ಮಾಡಲಾಗಿತ್ತು. ಪರವಾನಗಿ ಹೊಂದಿರುವ ಕ್ವಾರೆ ಹಾಗೂ ಕ್ರಷರ್ ಗಳಿಗೆ ಪತ್ರ ಬರೆದು ನಿಲುಗಡೆ ಮಾಡಲು ತಿಳಿಸಬೇಕು ಎಂದರು.

ಕೆ.ಆರ್.ಎಸ್ 20 ಕಿ.ಮೀಟರ್ ವ್ಯಾಪ್ತಿಯಲ್ಲಿ ಶ್ರೀರಂಗಪಟ್ಟಣ, ಪಾಂಡವಪುರ ಹಾಗೂ ಕೆ.ಆರ್.ಪೇಟೆ ತಾಲ್ಲೂಕು ಬರಲಿದೆ. ಈ ತಾಲ್ಲೂಕಿನ ತಹಶೀಲ್ದಾರ್ ಕೆ.ಆರ್.ಎಸ್ ವ್ಯಾಪ್ತಿಯ 20 ಕಿ.ಮೀ ವ್ಯಾಪ್ತಿಯಲ್ಲಿ ಯಾವುದೇ ಗಣಿಗಾರಿಕೆ ನಡೆಯದಂತೆ ನೋಡಿಕೊಳ್ಳಬೇಕು. ಅನಧಿಕೃತವಾಗಿ ಅಧಿಕಾರಿಗಳ ಗಮನಕ್ಕೆ ಬಾರದಂತೆ ಗಣಿಗಾರಿಕೆ ನಡೆಯಬಹುದು, ಹೆಚ್ಚಿನ ಪರಿಶೀಲನೆಗಳನ್ನು ನಡೆಸಿ ಎಂದು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಭೂ ವಿಜ್ಞಾನಿ ರೇಷ್ಮಾ, ಡಿ.ಎಫ್.ಓ ರಾಜು ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!