Friday, September 20, 2024

ಪ್ರಾಯೋಗಿಕ ಆವೃತ್ತಿ

ಕೆ.ಆರ್.ಪೇಟೆ| ಸೂಕ್ತ ಸ್ಥಾನಮಾನ ಸಿಗದಿದ್ದರೆ ‘ಕೈ’ಗೆ ತಕ್ಕಪಾಠ: ಅಹಿಂದ ಮುಖಂಡರ ಎಚ್ಚರಿಕೆ

ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಅಲ್ಪಸಂಖ್ಯಾತರು ಸೇರಿದಂತೆ ಅಹಿಂದ ವರ್ಗಗಳನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿದೆ. ಸಾಮಾಜಿಕ ನ್ಯಾಯದ ಹರಿಕಾರರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಹಿಂದ ವರ್ಗಗಳ ಹಿತ ಕಾಪಾಡಿ ಸೂಕ್ತ ಸ್ಥಾನಮಾನ ಕೊಡಿಸದಿದ್ದರೆ ಮುಂಬರುವ ಲೋಕಸಭಾ ಚುನಾವಣೆ ಸೇರಿದಂತೆ ತಾಪಂ, ಜಿಪಂ ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧವಾಗಿ ಮತ ಚಲಾಯಿಸಿ ತಕ್ಕ ಉತ್ತರ ನೀಡಬೇಕಾಗುತ್ತದೆ ಎಂದು ಪುರಸಭೆ ಹಿರಿಯ ಸದಸ್ಯ ಡಿ. ಪ್ರೇಮಕುಮಾರ್ ಎಚ್ಚರಿಕೆ ನೀಡಿದರು .

ಕೆ. ಆರ್.ಪೇಟೆ ಪಟ್ಟಣದ ಪ್ರವಾಸಿ ಮಂದಿರದ ಆವರಣದಲ್ಲಿ ಅಹಿಂದ ವರ್ಗಗಳ ಮುಖಂಡರು ಹಾಗೂ ಕಾರ್ಯಕರ್ತರು ಶನಿವಾರ ಸಭೆ ನಡೆಸಿ ಮಾತನಾಡಿದರು.

ಕೆ.ಆರ್.ಪೇಟೆ ತಾಲೂಕಿನಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳಿಗೆ ಸೂಕ್ತವಾದ ರಾಜಕೀಯ ಸ್ಥಾನ ಮಾನವೇ ಸಿಕ್ಕಿಲ್ಲ, ಕಳೆದ ಮೂರು ಅವಧಿಯಿಂದ ನಿರಂತರವಾಗಿ ಕಾಂಗ್ರೆಸ್ ಪಕ್ಷದಿಂದ ಸದಸ್ಯನಾಗಿ ಚುನಾಯಿತ ನಾಗಿರುವ ನನ್ನನ್ನು ಕಾಂಗ್ರೆಸ್ ಪಕ್ಷವು ಸಂಪೂರ್ಣವಾಗಿ ಕಡೆಗಣಿಸಿದೆ. ಪಕ್ಷ ಸೇರಿದಂತೆ ರಾಜ್ಯ ಸರ್ಕಾರದ ಯಾವುದೇ ಸರ್ಕಾರಿ ನಾಮಕರಣದಲ್ಲಿ ಸ್ಥಾನ ನೀಡದೆ ಕಡೆಗಣಿಸಲಾಗಿದೆ, ಸ್ಥಳೀಯ ಕಾಂಗ್ರೆಸ್ ನಾಯಕರು ಗುಂಪುಗಾರಿಕೆ ನಡೆಸುತ್ತಾ ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತರನ್ನು ಅಧಿಕಾರದಿಂದ ದೂರವಿಟ್ಟು ತಮಾಷೆ ನೋಡುತ್ತಿದ್ದಾರೆ. ಇದೇ ಪರಿಸ್ಥಿತಿ ಮುಂದುವರೆದರೆ ತಾಲೂಕಿನಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮತದಾರರನ್ನು ಹೊಂದಿರುವ ನಾವು ಸಂಘಟಿತರಗಿ ನಮ್ಮ ಶಕ್ತಿ ಏನೆಂದು ತೋರಿಸಬೇಕಾಗುತ್ತದೆ ಎಂದು ಆಕ್ರೋಶದಿಂದ ಹೇಳಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ತಾಲೂಕು ಕಾಂಗ್ರೆಸ್ ಎಸ್.ಸಿ ಘಟಕದ ಅಧ್ಯಕ್ಷ ರಾಜಯ್ಯ ಮಾತನಾಡಿ, ಚುನಾವಣೆಯ ಸಂಧರ್ಭದಲ್ಲಿ ಅಹಿಂದ ವರ್ಗವನ್ನು ಬಳಸಿಕೊಳ್ಳುವ ಮುಖಂಡರು ಚುನಾವಣೆಯ ನಂತರ ಸಂಪೂರ್ಣವಾಗಿ ಕಡೆಗಣಿಸುತ್ತಾರೆ. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಮಂತ್ರಿಗಳಾದ ಚಲುವರಾಯಸ್ವಾಮಿ ಅವರು ಗಮನ ಹರಿಸಿ ಅಹಿಂದ ವರ್ಗಗಳಿಗಾಗಿರುವ ಅನ್ಯಾಯವನ್ನು ಸರಿಪಡಿಸದಿದ್ದರೆ ಲೋಕಸಭಾ ಚುನಾವಣೆಯಲ್ಲಿ ನಮ್ಮ ಶಕ್ತಿ ಏನೆಂದು ತೋರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಕಾಂಗ್ರೆಸ್ ಮುಖಂಡರಾದ ಶಿವಣ್ಣ, ಫಯಾಜ್, ಕಾಂತರಾಜು, ಹರಿಹರಪುರ ಶ್ರೀನಿವಾಸ್, ಜೆಡಿಎಸ್ ಮುಖಂಡ ಸೋಮಸುಂದರ್, ನರಸಿಂಹ, ಬಿಜೆಪಿ ಮುಖಂಡರಾದ ಅಗ್ರಹಾರ ಬಾಚಹಳ್ಳಿ ಜಗಧೀಶ್, ಕಮಲಾಕ್ಷಿ, ಫೋಟೋ ವಿಷ್ಣು, ಕಿಕ್ಕೇರಿರಾಜಣ್ಣ, ನರೇಂದ್ರನಾಯಕ, ಛಲವಾದಿ ಮಹಾಸಭಾ ತಾಲೂಕು ಅಧ್ಯಕ್ಷ ನಟರಾಜು, ಮುದುಗೆರೆ ಮಹೇಂದ್ರ, ಬಸವೇಶ, ಬನ್ನಾರಿ, ಅಂಬೇಡ್ಕರ್ ಸೇನೆಯ ತಾಲೂಕು ಅಧ್ಯಕ್ಷ ಗಣೇಶ ಸೇರಿದಂತೆ ನೂರಾರು ಜನರು ಸಭೆಯಲ್ಲಿ ಭಾಗವಹಿಸಿ ಕಾಂಗ್ರೆಸ್ ನಾಯಕರಿಗೆ ಎಚ್ಚರಿಕೆ ಸಂದೇಶ ನೀಡಿ ಆಕ್ರೋಶ ವ್ಯಕ್ತಪಡಿಸಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!