Friday, November 20, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ ಲೋಕಸಭೆ | ‘ನನಗೆ ಟಿಕೆಟ್ ಬೇಕು, ಇಲ್ಲವೇ ರಾಜಕೀಯವೇ ಬೇಡ’ ಎಂದ ಸುಮಲತಾ

ಬಿಜೆಪಿ-ಜೆಡಿಎಸ್‌ ಮೈತ್ರಿಯಾದ ಬಳಿಕ ಮಂಡ್ಯ ಲೋಕಸಭಾ ಕ್ಷೇತ್ರವನ್ನು ಯಾರಿಗೆ ಕೊಡಬೇಕೆಂಬ ಕಗ್ಗಂಟು ಎದುರಾಗಿದೆ.

ಬಿಜೆಪಿಗೆ ಬೆಂಬಲ ನೀಡಿದ್ದ ಸಂಸದೆ ಸುಮಲತಾ ಮಂಡ್ಯದಲ್ಲಿಯೇ ಸ್ಪರ್ಧಿಸುತ್ತೇನೆಂದು ಹೇಳುತ್ತಿದ್ದಾರೆ. ಆದರೆ, ಜೆಡಿಎಸ್‌ ಮಂಡ್ಯ ನಮಗೇ ಬೇಕೆಂದು ಪಟ್ಟು ಹಿಡಿದಿದೆ. ಈ ನಡುವೆ, ಬಿಜೆಪಿ ನಾಯಕರೊಂದಿಗೆ ಸುಮಲತಾ ಸಭೆ ನಡೆಸಿದ್ದು, ಬಿಜೆಪಿಯಿಂದ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಆದರೆ, ಮಂಡ್ಯ ಕ್ಷೇತ್ರವಲ್ಲದೆ, ಬೇರಾವುದೇ ಕ್ಷೇತ್ರ ನೀಡಿದರೂ ನಾನು ಸ್ಪರ್ಧಿಸುವುದಿಲ್ಲ. ಮಂಡ್ಯ ಕೊಡದಿದ್ದರೆ, ನನಗೆ ರಾಜಕೀಯವೇ ಬೇಡ ಎಂದಿದ್ದಾರೆ ಎಂದು ತಿಳಿದುಬಂದಿದೆ.

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಸುಮಲತಾ ಮಾತನಾಡಿದ್ದು, “ನನ್ನ ಬಗ್ಗೆ ಯಾವುದೇ ಕಳಂಕ ಇಲ್ಲ. ಮಂಡ್ಯ ಕ್ಷೇತ್ರವನ್ನು ಬಿಜೆಪಿ ಉಳಿಸಿಕೊಳ್ಳುತ್ತದೆ ಎನ್ನಿಸುತ್ತಿದೆ. ನನ್ನ ಬೆಂಬಲಿಗರಲ್ಲಿ ಹಲವರು ಕಾಂಗ್ರೆಸ್‌ ಕಾರ್ಯಕರ್ತರಿದ್ದಾರೆ. ಅವರು ಕಾಂಗ್ರೆಸ್‌ಗೆ ಬನ್ನಿ ಎಂದು ಕರೆಯುತ್ತಿದ್ದಾರೆ. ಆದರೆ, ಕಾಂಗ್ರೆಸ್‌ನಿಂದ ಸ್ಪರ್ಧಿಸಲು ನಾನು ಪ್ರಯತ್ನಿಸಿಲ್ಲ. ಮೋದಿ ನೇತೃತ್ವವೇ ಸರಿಯೆಂದು ನಾನು ಭಾವಿಸಿದ್ದೇನೆ” ಎಂದು ಹೇಳಿದ್ದು, ಬಿಜೆಪಿಯಿಂದ ಸ್ಪರ್ಧಿಸುವ ಮಾತನಾಡಿದ್ದಾರೆ.

“ಸಭೆಯಲ್ಲಿ ಬಿಜೆಪಿ ಏನು ನಿರ್ಧಾರ ತೆಗೆದುಕೊಳ್ಳಬೇಕು. ಏನು ಮಾಡಬೇಕು ಎಂಬುದರ ಬಗ್ಗೆ ಚರ್ಚಿಸಿದ್ದೇವೆ. ಅಧಿಕೃತವಾಗಿ ಮಂಡ್ಯ ಬಿಜೆಪಿಗಾ ಅಥವಾ ಜೆಡಿಎಸ್‌ಗಾ ಎಂಬುದು ಇನ್ನೂ ನಿರ್ಧಾರವಾಗಿಲ್ಲ” ಎಂದು ಹೇಳಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ