Saturday, November 21, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಸತತ 3 ದಿನಗಳ ಕಾಲ ಸಚಿವ ಚಲುವರಾಯಸ್ವಾಮಿ ಪ್ರವಾಸ

ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಜನವರಿ 28 ಭಾನುವಾರ ದಿಂದ 30 ರವರೆಗೆ ಮಂಡ್ಯ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ‌.

ಜ. 28 ರಂದು ಬೆಳಿಗ್ಗೆ 10.30 ಕ್ಕೆ ಶ್ರೀರಂಗಪಟ್ಟಣದ ಚಂದ್ರವನ ಆಶ್ರಮದ ಪೂರ್ವ ವಾಹಿನಿಯಲ್ಲಿ ಶ್ರೀ ತ್ರೀನೇತ್ರ ಮಹಂತ ಶಿವಯೋಗಿ ಮಹಾಸ್ವಾಮಿಗಳ 25 ನೇ ವರ್ಷದ ಪಟ್ಟಾಧಿಕಾರ ರಜತ ಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ನಾಗಮಂಗಲ ತಾಲ್ಲೂಕಿನ ಚೀಣ್ಯ ಗ್ರಾಮದಲ್ಲಿ ಸಾರ್ವಜನಿಕರ ಭೇಟಿ ಮಾಡಿ ಕುಂದು ಕೊರತೆಗಳನ್ನು ಆಲಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಹೊಣಕೆರೆ ಗ್ರಾಮದಲ್ಲಿ ಸಾರ್ವಜನಿಕರ ಭೇಟಿ ಮಾಡಿ ಕುಂದು ಕೊರತೆಗಳನ್ನು ಆಲಿಸಲಿದ್ದಾರೆ.

ಮಧ್ಯಾಹ್ನ 3.30 ಕ್ಕೆ ಕಾಂತಾಪುರ ಗ್ರಾಮದಲ್ಲಿ ಸಾರ್ವಜನಿಕರ ಭೇಟಿ ಮಾಡಿ ಕುಂದು ಕೊರತೆಗಳನ್ನು ಆಲಿಸಲಿದ್ದಾರೆ. ಸಂಜೆ 4.30 ಕ್ಕೆ ಬೋಗಾದಿ ಗ್ರಾಮದಲ್ಲಿ ಸಾರ್ವಜನಿಕರ ಭೇಟಿ ಮಾಡಿ ಕುಂದು ಕೊರತೆಗಳನ್ನು ಆಲಿಸಲಿದ್ದಾರೆ. ಸಂಜೆ 5 ಕ್ಕೆ ಬೋಗಾದಿ ಪ್ರಾಥಮಿಕ ಕೇಂದ್ರದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ 8 ಕ್ಕೆ ನಾಗಮಂಗಲ ದಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಜ.29ರಂದು ಬೆಳಿಗ್ಗೆ 9 ಗಂಟೆಗೆ ಬಿಂಡಿಗನವಿಲೆ ಕದಬಹಳ್ಳಿ ಗ್ರಾಮದಲ್ಲಿ ಸಾರ್ವಜನಿಕರ ಭೇಟಿ ಮಾಡಿ ಕುಂದು ಕೊರತೆಗಳನ್ನು ಆಲಿಸಲಿದ್ದಾರೆ. ಬೆಳಿಗ್ಗೆ 11.30 ಕ್ಕೆ ಲಾಳನಕೆರೆ ಗ್ರಾಮದಲ್ಲಿ ಸಾರ್ವಜನಿಕರ ಭೇಟಿ ಮಾಡಿ ಕುಂದು ಕೊರತೆಗಳನ್ನು ಆಲಿಸಲಿದ್ದಾರೆ. ಮಧ್ಯಾಹ್ನ 12.30 ಕ್ಕೆ ಹೊನ್ನಾವರ ಗ್ರಾಮದಲ್ಲಿ ಸಾರ್ವಜನಿಕರ ಭೇಟಿ ಮಾಡಿ ಕುಂದು ಕೊರತೆಗಳನ್ನು ಆಲಿಸಲಿದ್ದಾರೆ. ಮಧ್ಯಾಹ್ನ 2,30 ಕ್ಕೆ ದೊಡ್ಡಾಬಾಲ ಗ್ರಾಮದಲ್ಲಿ ಸಾರ್ವಜನಿಕರ ಭೇಟಿ ಮಾಡಿ ಕುಂದು ಕೊರತೆಗಳನ್ನು ಆಲಿಸಲಿದ್ದಾರೆ. ಮಧ್ಯಾಹ್ನ 3.30 ಕ್ಕೆ ಮಾಯಗೋನಹಳ್ಳಿ ಗ್ರಾಮದಲ್ಲಿ ಸಾರ್ವಜನಿಕರ ಭೇಟಿ ಮಾಡಿ ಕುಂದು ಕೊರತೆಗಳನ್ನು ಆಲಿಸಲಿದ್ದಾರೆ. ಸಂಜೆ 5 ಗಂಟೆಗೆ ಹುಲಿಕೆರೆ ಗ್ರಾಮದಲ್ಲಿ ಸಾರ್ವಜನಿಕರ ಭೇಟಿ ಮಾಡಿ ಕುಂದು ಕೊರತೆಗಳನ್ನು ಆಲಿಸಲಿದ್ದಾರೆ. ರಾತ್ರಿ 8 ಕ್ಕೆ ನಾಗಮಂಗಲ ದಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಜ.30ರಂದು ಬೆಳಿಗ್ಗೆ 10 ಗಂಟೆಗೆ ಮಂಡ್ಯ ಸ್ತ್ರೀ ಶಕ್ತಿ ಸಂಘಗಳಿಗೆ ಸಾಲ ವಿತರಣೆ ಕಾರ್ಯಕ್ರಮ ಹಾಗೂ ಮಂಡ್ಯ ವಿಧಾನಸಭಾ ಕ್ಷೇತ್ರದ ಫಲಾನುಭವಿಗಳ ಸಮಾವೇಶ, ಸರ್ಕಾರಿ ಸವಲತ್ತುಗಳ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 12 ಕ್ಕೆ ನಾಗಮಂಗಲ ತಾಲೂಕಿನ ಭೀಮನಹಳ್ಳಿಯಲ್ಲಿ ಸಾರ್ವಜನಿಕರ ಭೇಟಿ ಮಾಡಿ ಕುಂದು ಕೊರತೆಗಳನ್ನು ಆಲಿಸಲಿದ್ದಾರೆ. ಮಧ್ಯಾಹ್ನ 2.30 ಕ್ಕೆ ನಾಗಮಂಗಲ ತಾಲೂಕಿನ ದೇವಲಾಪುರ ಗ್ರಾಮದಲ್ಲಿ ಸಾರ್ವಜನಿಕರ ಭೇಟಿ ಮಾಡಿ ಕುಂದು ಕೊರತೆಗಳನ್ನು ಆಲಿಸಲಿದ್ದಾರೆ. ಸಂಜೆ 4 ಕ್ಕೆ ನಾಗಮಂಗಲ ಕರಡಹಳ್ಳಿ ಗ್ರಾಮದಲ್ಲಿ ಸಾರ್ವಜನಿಕರ ಭೇಟಿ ಮಾಡಿ ಕುಂದು ಕೊರತೆಗಳನ್ನು ಆಲಿಸಲಿದ್ದಾರೆ. ಸಂಜೆ 5.30 ಕ್ಕೆ ತಾಲೂಕು ತಹಶೀಲ್ದಾರ್ ಕಚೇರಿಗೆ ಭೇಟಿ ಮಾಡಲಿದ್ದಾರೆ. ಸಂಜೆ 7.30 ಕ್ಕೆ ಮಂಡ್ಯ ತೋಟಗಾರಿಕೆ ಕಛೇರಿ ಆವರಣದಲ್ಲಿ ನಡೆಯುತ್ತಿರುವ ಫಲಪುಷ್ಪ ಪ್ರದರ್ಶನದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ