ಮಂಡ್ಯ ವಿಧಾನಸಭಾ ಕ್ಷೇತ್ರದ ಮಂಡ್ಯ ಗ್ರಾಮಾಂತರ ಗ್ರಾಮ ಪಂಚಾಯಿತಿ ಕೋಣನಹಳ್ಳಿ ಗ್ರಾಮದ ಎಂ.ಜಿ. ಬಡಾವಣ ಗ್ರಾ.ಪಂ. ಮಾಜಿ ಸದಸ್ಯ ಸಿದ್ದರಾಮಯ್ಯ ಅವರ ಮಕ್ಕಳಾದ ರವಿ ಹಾಗೂ ಅರವಿಂದ ಅವರು ಮನ್ ಮುಲ್ ಮಾಜಿ ಅಧ್ಯಕ್ಷ ಬಿ ಆರ್ ರಾಮಚಂದ್ರು ನೇತೃತ್ವದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಶಂಭು ಟ್ರಸ್ಟ್ ಕಾರ್ಯದರ್ಶಿಬಿ ಆರ್ ಸುರೇಶ್, ಗ್ರಾಮ ಪಂಚಾಯಿತಿ ಸದಸ್ಯ ಕೋಣನಹಳ್ಳಿ ಮಂಜು, ಜೆಡಿಎಸ್ ಮಾಹಿತಿ ಮತ್ತು ತಂತ್ರಜ್ಞಾನ ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷ ನವೀನ್ ತಂಡಸನಹಳ್ಳಿ, ಯುವ ಮುಖಂಡರಾದ ಚಿನ್ಮಯಿ, ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಸಿದ್ದರಾಮು, ಮಂಡ್ಯ ಗ್ರಾಮಾಂತರ ಗ್ರಾಮ ಪಂಚಾಯಿತಿ ಜೆಡಿಎಸ್ ಕಾರ್ಯಕರ್ತರು ಉಪಸ್ಥಿತರಿದ್ದರು.




