Friday, September 20, 2024

ಪ್ರಾಯೋಗಿಕ ಆವೃತ್ತಿ

ಬ್ರಿಟಿಷರ ಗುಂಡಿಗೆ ಎದೆಗೊಟ್ಟು ತಿರಂಗಾ ಹಾರಿಸಿದ ವೀರ ಪರಂಪರೆ ನಮ್ಮದು: ಕಾಂಗ್ರೆಸ್

ಅಂತಹ ಬ್ರಿಟಿಷರನ್ನೇ ಹೆದರಿಸಿದ ಕಾಂಗ್ರೆಸ್ ಈ ಬಿಜೆಪಿ RSS ಎಂಬ ದೇಶದ್ರೋಹಿಗಳಿಗೆ ಹೆದರುವುದುಂಟೆ ಎಂದು ಕಾಂಗ್ರೆಸ್ ಪಕ್ಷವು ಬಿಜೆಪಿ, ಆರ್ ಎಸ್ ಎಸ್ ಗೆ ತಿರುಗೇಟು ನೀಡಿದೆ.

ಮಂಡ್ಯ ತಾಲ್ಲೂಕಿನ ಕೆರಗೋಡುವಿನಲ್ಲಿ ಕೇಸರಿ ಧ್ವಜ ಹಾರಿಸಿ ವಿವಾದ ಹುಟ್ಟು ಹಾಕಿದ ನಂತರ ಅದೇ ಜಾಗದಲ್ಲಿ ಮಂಡ್ಯ ಜಿಲ್ಲಾಡಳಿತ ರಾಷ್ಟ್ರಧ್ವಜವನ್ನು ಹಾರಿಸಿದ ನಂತರ, ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಪಕ್ಷವು, ಬ್ರಿಟಿಷರ ಗುಂಡಿಗೆ ಎದೆಗೊಟ್ಟು ತಿರಂಗಾ ಹಾರಿಸಿದ ವೀರ ಪರಂಪರೆ ನಮ್ಮದು ಎಂದು, ಕೆರಗೋಡಿನಲ್ಲಿ ರಾಷ್ಟ್ರಧ್ವಜ ಹಾರಿಸಿದ ವಿಡಿಯೋವನ್ನು ಹಂಚಿಕೊಂಡು ‘ಟ್ವೀಟ್’ ಮಾಡಿದೆ.

“>

ಈ ಸಂಘಿ ಕ್ರಿಮಿ ಕೀಟಗಳು ನಮ್ಮನ್ನು ತಡೆಯಲು ಸಾಧ್ಯವೇ ? ದೇಶದ ಘನತೆ, ಗೌರವವನ್ನು ಎತ್ತಿ ಹಿಡಿದಿದ್ದೇವೆ, ದೇಶದ್ರೋಹಿ ಬಿಜೆಪಿ, ಆರ್ ಎಸ್ ಎಸ್ ನಾಯಕರಿಗೆ ದಮ್ಮು ತಾಕತ್ತಿದ್ದರೆ ಈ ರಾಷ್ಟ್ರ ಧ್ವಜವನ್ನು ಕಿತ್ತು ಹಾಕುವ ಧೈರ್ಯ ತೋರಲಿ ಎಂದು ಕಾಂಗ್ರೆಸ್ ಸವಾಲು ಹಾಕಿದೆ.

ಬಿಜೆಪಿಯ ಲೋಕಸಭಾ ಚುನಾವಣೆಯ ತಾಲೀಮು ಮಂಡ್ಯದಲ್ಲಿ ಶುರುವಾಗಿದೆ, ಇದಕ್ಕೆ ಸೋಕಾಲ್ಡ್ ಜಾತ್ಯತೀತ ಜನತಾ ದಳ ಪೂರ್ಣ ಸಹಕಾರ ನೀಡುತ್ತಿದೆ. ಆರ್ ಅಶೋಕ್ ಹಾಗೂ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ದಮ್ಮು ತಾಕತ್ತಿದ್ದರೆ ಈ ಪ್ರಶ್ನೆಗಳಿಗೆ ಉತ್ತರಿಸಲಿ. ಕೆರೆಗೋಡು ಗ್ರಾಮದಲ್ಲಿ ಶ್ರೀ ಗೌರಿಶಂಕರ ಸೇವಾ ಟ್ರಸ್ಟ್ ನವರು ರಾಷ್ಟ್ರಧ್ವಜ ಹಾಗೂ ನಾಡ ಧ್ವಜ ಹಾರಿಸುವುದಕ್ಕಾಗಿ ಮಾತ್ರ ಧ್ವಜ ಸ್ಥಂಭ ಸ್ಥಾಪನೆಗೆ ಮುಚ್ಚಳಿಕೆ ಬರೆದುಕೊಟ್ಟು ಅನುಮತಿ ಪಡೆದಿದ್ದಾರೆ. ಬರೆದುಕೊಟ್ಟ ಮುಚ್ಚಳಿಕೆಯಂತೆ ಹಾಗೂ ಯಾವುದಕ್ಕೆ ಅನುಮತಿ ಪಡೆದಿದ್ದಾರೋ ಅದನ್ನ ಪಾಲಿಸಬೇಕೇ ಬೇಡವೇ? ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.

ರಾಷ್ಟ್ರಧ್ವಜ ಹಾರಿಸುವ ಉದ್ದೇಶವನ್ನು ಹೈಜಾಕ್ ಮಾಡಿ ಮಂಡ್ಯದಲ್ಲಿ ಶಾಂತಿ ಕದಡಬೇಕು, ಸರ್ಕಾರಕ್ಕೆ ಸವಾಲು ಹಾಕಬೇಕು ಎನ್ನುವುದು ನಿಮ್ಮ ಪೂರ್ವಯೋಜಿತ ಹುನ್ನಾರವಾಗಿತ್ತಲ್ಲವೇ? ನಿಮ್ಮ ನಿಷ್ಠೆ ಸಂವಿಧಾನಕ್ಕೋ ಮನುವಾದಕ್ಕೋ ? ನಿಮ್ಮ ನಿಷ್ಠೆ ದೇಶಕ್ಕೋ, ದೇಶದ್ರೋಹಕ್ಕೋ? ನಿಮ್ಮ ನಿಷ್ಠೆ ರಾಷ್ಟ್ರ ಧ್ವಜಕ್ಕೋ , ಧಾರ್ಮಿಕ ಧ್ವಜಕ್ಕೋ? ಉತ್ತರ ನೀಡುವ ದಮ್ಮು ತಾಕತ್ತು ಇದೆಯೇ ? ಎಂದು ಪ್ರಶ್ನಿಸಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!