Saturday, November 21, 2026

ಪ್ರಾಯೋಗಿಕ ಆವೃತ್ತಿ

ಗಾಂಧೀಜಿಯವರ ಸತ್ಯ- ಅಹಿಂಸೆ ಅನುಸರಿಸಿ: ಚಲುವರಾಯಸ್ವಾಮಿ

ಸತ್ಯ, ಅಹಿಂಸೆ‌ ಮೂಲಕ ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾನ್ ನಾಯಕರಾದ ಮಹಾತ್ಮಾಗಾಂಧೀಜಿ ಅವರ ತತ್ವ ಆದರ್ಶಗಳನ್ನು ನಮ್ಮ ಜೀವನದಲ್ಲಿ ಕಿಂಚಿತ್ತಾದರೂ ಅನುಸರಿಸಿಕೊಳ್ಳಬೇಕು ಎಂದು ಕೃಷಿ, ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ಮಂಡ್ಯ ನಗರದ ಬಂದೀಗೌಡ ಬಡಾವಣೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಹುತಾತ್ಮರ ದಿನಾಚರಣೆ ಪ್ರಯುಕ್ತ ಗಾಂಧಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ‌ ಅವರು ಮಾತನಾಡಿದರು.

ವ್ಯಾಪಾರಕ್ಕಾಗಿ ಭಾರತಕ್ಕೆ ಬಂದ ಬ್ರಿಟಿಷರು ನಮ್ಮನ್ನ ನೂರಾರು ವರ್ಷಗಳ ಕಾಲ ಆಳಿದರು. ಈ ವೇಳೆ ಮಹಾತ್ಮಾಗಾಂಧೀಜಿ ಅವರು ಸತ್ಯ, ಅಹಿಂಸಾ ತತ್ವ ಆಧಾರದ ಮೇಲೆ ಸ್ವಾತಂತ್ರ್ಯ ಹೋರಾಟ ನಡೆಸಿ ನಮ್ಮನ್ನ ಬ್ರಿಟಿಷರ ದಾಸ್ಯದಿಂದ ಮುಕ್ತಗೊಳಿಸಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು ಎಂದರು.

ಈ ವೇಳೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್, ಶಾಸಕರಾದ ಎ.ಬಿ.ರಮೇಶಬಂಡಿಸಿದ್ದೇಗೌಡ, ಪಿ.ಎಂ.ನರೇಂದ್ರಸ್ವಾಮಿ, ದರ್ಶನ್ ಪುಟ್ಟಣ್ಣಯ್ಯ, ಕದಲೂರು ಉದಯ್, ಗಣಿಗ ಪಿ.ರವಿಕುಮಾರ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಎನ್.ಮರಿತಿಬ್ಬೇಗೌಡ, ದಿನೇಶ್ ಗೂಳಿಗೌಡ, ಮುಖಂಡರಾದ ಕೊತ್ತತ್ತಿ ರಾಜು, ಸಾತನೂರು ಕೃಷ್ಣ, ಸಿ.ಆರ್.ರಮೇಶ್, ಹಿಟ್ಟನಹಳ್ಳಿಕೊಪ್ಪಲು ನಾಗರಾಜು, ಕೋ.ಪು.ಗುಣಶೇಖರ್, ಜಿಲ್ಲಾ ಮಾಧ್ಯಮ ಸಂಯೋಜಕ ಎನ್.ಕೃಷ್ಣೇಗೌಡ,‌ ಕಿರಣ್, ಗುರುರಾಜು, ಪ್ರಕಾಶ್ ಇತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ