Wednesday, November 18, 2026

ಪ್ರಾಯೋಗಿಕ ಆವೃತ್ತಿ

ಕೃಷಿ ಇಲಾಖೆಯಲ್ಲಿ ಶೇ.100 ಗುರಿ ಸಾಧಿಸಲು ಸೂಚನೆ: ಅನ್ಬು ಕುಮಾರ್

ಕೃಷಿ ಇಲಾಖೆಯಲ್ಲಿ ಪ್ರಗತಿ ಪರಿಶೀಲನೆ ನಡೆಸಿದಾಗ ಶೇ 97 ರಿಂದ 99 ರಷ್ಟು ಸಾಧನೆಯಾಗಿರುವುದು ನೋಡಿದ್ದೇನೆ. ಈ ಬಾರಿ ಶೇ 100 ರಷ್ಟು ಸಾಧನೆ ಮಾಡುವಂತೆ ಕೃಷಿ ಇಲಾಖೆ ಕಾರ್ಯದರ್ಶಿ ಅನ್ಬು ಕುಮಾರ್ ಅವರು ತಿಳಿಸಿದರು.

ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೃಷಿ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು. ರೈತರಿಗೆ ಕೃಷಿ ನಡೆಸಲು ಟಿಲ್ಲರ್ ಯಂತ್ರೋಪಕರಣ ಸಿಕ್ಕರೆ ಅವರು ಸಂತೋಷದಿಂದ ಯಂತ್ರ ಬಳಿಸಿ ಕಡಿಮೆ ಬೆವರು ಸುರಿಸಿ ಕೃಷಿ ನಡೆಸುತ್ತಾರೆ‌ ಎಂಬುದನ್ನು ಅರಿತು ರೈತರಿಗೆ ಪೂರಕವಾಗಿ ಕಾರ್ಯನಿರ್ವಹಿಸಿ ಎಂದರು.

ಬೆಳೆ ವಿಮೆಯ ಬಗ್ಗೆ ಜಾಗೃತಿ ಮೂಡಿಸಿ ಹವಾಮಾನದ ವೈಪರೀತ್ಯ ದಲ್ಲಿ ಬೆಳೆ ಹಾನಿಯಾದ ಸಂದರ್ಭದಲ್ಲಿ ಬೆಳೆ ವಿಮೆಯ ಉಪಯುಕ್ತತೆಯ ಬಗ್ಗೆ ತಿಳಿಸಿ ಹೆಚ್ಚು ರೈತರು ಬೆಳೆ ವಿಮೆ ಮಾಡಿಸಿಕೊಳ್ಳುವಂತೆ ಪ್ರೇರೇಪಿಸಿ ಎಂದರು.

ರೈತರಿಗೆ ಸೌಲಭ್ಯಗಳನ್ನು ನೀಡುವುದರಲ್ಲಿ ಅಧಿಕಾರಿಗಳು ಒಂದು ಹೆಜ್ಜೆ ಮುಂದಿರಬೇಕು. ಕಿಶಾನ್ ಸಮ್ಮಾನ್ ಯೋಜನೆಯಲ್ಲಿ ಪ್ರತಿಯೊಬ್ಬರಿಗೂ ಸಹಾಯಧನ ದೊರಕಬೇಕು ಎಂದರು.

ದ್ವಿತೀಯ ಕೃಷಿಯ ಉದ್ದೇಶಗಳಾದ ಕೃಷಿ ಹಾಗೂ ಕೃಷಿಯೇತರ ಚಟುವಟಿಕೆಗಳ ಮೂಲಕ ಉದ್ಯೋಗ ಮತ್ತು ರೈತರ ಆದಾಯವನ್ನು ಹೆಚ್ಚಿಸಿ, ರೈತ ಕುಟುಂಬಗಳಿಗೆ ವಿವಿಧ ಆದಾಯ ಮೂಲಗಳ ಸೃಜನೆಗೆ ಪೂರಕವಾಗಿ ಯೋಜನೆ ರೂಪಿಸಿ ಕೃಷಿಯಲ್ಲಿನ ಸಮಸ್ಯೆಗಳ ಪರಿಹಾರಕ್ಕೆ ಕ್ರಮವಹಿಸಿ ಎಂದರು.

ಜಿಲ್ಲಾಧಿಕಾರಿ ಡಾ. ಕುಮಾರ ಮಾತನಾಡಿ, ವಿಶೇಷ ಕಾಳಜಿ ವಹಿಸಿ ರೈತರಿಗೆ ಫ್ರೂಟ್ಸ್ ನೊಂದಣಿ ಮಾಡಿಸಲಾಗುತ್ತಿದೆ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸೀಫ್, ಜಂಟಿ ಕೃಷಿ ನಿರ್ದೇಶಕ ಅಶೋಕ್, ಉಪನಿರ್ದೇಶಕಿ ಮಾಲತಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ