Friday, September 20, 2024

ಪ್ರಾಯೋಗಿಕ ಆವೃತ್ತಿ

ಲೋಕಸಭಾ ಚುನಾವಣೆ| ಮಂಡ್ಯ ಬಿಜೆಪಿಗೆ ಇರಲಿ, ಜೆಡಿಎಸ್ ಗೆ ಬೇಡವೆಂದ ಕಮಲ ಮುಖಂಡರು

ಕೆರಗೋಡಿನಲ್ಲಿ ಧ್ವಜ ವಿವಾದ ಹುಟ್ಟು ಹಾಕಿದ ಬಿಜೆಪಿ, ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ತನ್ನದೇ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು. ಜೆಡಿಎಸ್‌ಗೆ ಮಂಡ್ಯ ಬಿಟ್ಟುಕೊಡದೆ, ಬಿಜೆಪಿಯೇ ಕ್ಷೇತ್ರವನ್ನು ಪಡೆದುಕೊಳ್ಳಬೇಕು ಎಂದು ಮಂಡ್ಯ ಜಿಲ್ಲಾ ಬಿಜೆಪಿಗರು ಒತ್ತಾಯಿಸುತ್ತಿದ್ದಾರೆ.

ಕೆರಗೋಡು ಗ್ರಾಮ ಪಂಚಾಯತಿ ಎದುರಿನ ಸರ್ಕಾರಿ ಜಾಗದಲ್ಲಿರುವ ಧ್ವಜಸ್ಥಂಭದಲ್ಲಿ ರಾಷ್ಟ್ರಧ್ವಜ ಹಾರಿಸುತ್ತೇವೆಂದು ಅನುಮತಿ ಪಡೆದಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತರು ಕೇಸರಿ ಧ್ವಜ ಹಾರಿಸಿದ್ದರು. ಅಧಿಕಾರಿಗಳು ಅದನ್ನು ತೆರವುಗೊಳಿಸಿ, ರಾಷ್ಟ್ರಧ್ವಜ ಹಾರಿಸಿದ್ದಾರೆ. ಕೇಸರಿ ಧ್ವಜ ತೆರವುಗೊಳಿಸಿದ್ದನ್ನೇ ದಾಳವಾಗಿಸಿಕೊಂಡಿರುವ ಬಿಜೆಪಿ, ವಿವಾದ ಸೃಷ್ಠಿಸಿ ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಯತ್ನಿಸುತ್ತಿದೆ.

ಇದೆಲ್ಲದರ ನಡುವೆ, ಮಂಡ್ಯದ ಪಾಂಡವಪುರದಲ್ಲಿ ಮಂಡ್ಯ ಬಿಜೆಪಿ ಜಿಲ್ಲಾಧ್ಯಕ್ಷ ಡಾ. ಇಂದ್ರೇಶ್‌ ಅವರು ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಭೆ ನಡೆಸಿದ್ದಾರೆ. ಮಂಡ್ಯ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡದೆ, ಬಿಜೆಪಿಯೇ ಪಡೆದುಕೊಳ್ಳಬೇಕೆಂದು ನಾಯಕರ ಮೇಲೆ ಒತ್ತಡ ತರಲು ಜಿಲ್ಲಾ ಬಿಜೆಪಿಗರು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.

ಮಾಜಿ ಸಚಿವ ನಾರಾಯಣಗೌಡ, ಮಾಜಿ ಶಾಸಕ ಪ್ರೀತಂ ಗೌಡ ಸೇರಿದಂತೆ ಹಲವಾರು ಬಿಜೆಪಿಗರು ಮಂಡ್ಯ ಕ್ಷೇತ್ರವನ್ನು ಬಿಜೆಪಿಯೇ ಪಡೆಯಬೇಕೆಂದು ಹೇಳುತ್ತಿದ್ದಾರೆ. ಹಾಲಿ ಸಂಸದೆ ಸುಮಲತಾ ಅಂಬರೀಶ್‌ ಕೂಡ ಈ ಬಾರಿಯೂ ಮಂಡ್ಯದಲ್ಲೇ ಸ್ಪರ್ಧಿಸುತ್ತೇನೆ ಎನ್ನುತ್ತಿದ್ದು, ಮಂಡ್ಯವನ್ನು ಬಿಜೆಪಿ ಉಳಿಸಿಕೊಳ್ಳಬೇಕು. ಬಿಜೆಪಿಯಿಂದಲೇ ಸ್ಪರ್ಧಿಸುತ್ತೇನೆ ಎಂದು ಪಟ್ಟುಹಿಡಿದ್ದಾರೆ.

ಆದರೆ, ಜಿಲ್ಲೆಯಲ್ಲಿ ತನ್ನದೇ ಪ್ರಾಬಲ್ಯ ಹೊಂದಿರುವ ಜೆಡಿಎಸ್‌, ಏನೇ ಆದರೂ ಮಂಡ್ಯವನ್ನು ತನ್ನ ಪಾಲಿಗೆ ತೆಗೆದುಕೊಳ್ಳಲು ಕಸರತ್ತು ನಡೆಸುತ್ತಿದೆ. ಅಲ್ಲದೆ, ಮಂಡ್ಯದಲ್ಲಿ ಜೆಡಿಎಸ್‌ನಿಂದ ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರೇ ಸ್ಪರ್ಧಿಸುತ್ತಾರೆಂಬ ಮಾತುಗಳೂ ಇವೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!