Friday, September 20, 2024

ಪ್ರಾಯೋಗಿಕ ಆವೃತ್ತಿ

ಹಾಲಿನ ಪ್ರೋತ್ಸಾಹಧನ ಬಿಡುಗಡೆಗಾಗಿ ಬಿಜೆಪಿ ಪ್ರತಿಭಟನೆ

ರಾಜ್ಯದ ಕಾಂಗ್ರೆಸ್ ಸರ್ಕಾರ ಹಾಲು ಉತ್ಪಾದಕರಿಗೆ ನೀಡಬೇಕಾದ ಬಾಕಿ ಪ್ರೋತ್ಸಾಹ ಧನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದರು.

ಮಂಡ್ಯ ನಗರದ ಸರ್ ಎಂ ವಿ ಪ್ರತಿಮೆ ಬಳಿಯಿಂದ ಮೆರವಣಿಗೆ ಹೊರಟ ಪಕ್ಷದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

ಬಿ.ಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಹಾಲು ಉತ್ಪಾದಕರಿದ ಪ್ರೋತ್ಸಾಹ ಧನ ನೀಡಿದ್ದರು, ಇದರಿಂದ 26 ಲಕ್ಷ ಗ್ರಾಮೀಣ ರೈತರಿಗೆ ಹೆಚ್ಚಿನ ಅನುಕೂಲವಾಗಿತ್ತು. ಆದರೆ ಇದೀಗ
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಜನರ ಶಾಪಕ್ಕೆ ಮಾತ್ರ ಗುರಿಯಾಗಿಲ್ಲ ಬದಲಾಗಿ ಜಾನುವಾರುಗಳ ಶಾಪಕ್ಕೂ ಗುರಿಯಾಗಿದೆ, ಹಾಲು ಉತ್ಪಾದಕರಿಗೆ 716 ಕೋಟಿ ಪ್ರೋತ್ಸಾಹ ಧನವನ್ನು ಬಾಕಿ ಉಳಿಸಿಕೊಂಡಿದೆ, ಇದರಿಂದ ಕರ್ನಾಟಕದಲ್ಲಿ ಪ್ರತಿನಿತ್ಯ 10 ಲಕ್ಷ ಲೀಟರ್ ಹಾಲು ಉತ್ಪಾದನೆ ಪ್ರಮಾಣ ಕುಸಿದಿದೆ, ಈ ಕೂಡಲೇ ಪ್ರೋತ್ಸಾಹ ಧನದ ಬಾಕಿ ಹಣವನ್ನು ಬಿಡುಗಡೆ ಮಾಡಿ ರೈತರಿಗೆ ಪಾವತಿಸಬೇಕು ಎಂದು ಒತ್ತಾಯಿಸಿದರು.

ಮಂಡ್ಯ ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ.ಇಂದ್ರೇಶ್ ಕುಮಾರ್, ಕೆ ಎಸ್ ಸಚ್ಚಿದಾನಂದ, ಡಾ.ಸಿದ್ದರಾಮಯ್ಯ ಮತ್ತಿತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!