Tuesday, November 24, 2026

ಪ್ರಾಯೋಗಿಕ ಆವೃತ್ತಿ

ಕೆ.ಆರ್.ಪೇಟೆ| ವಾಹನ ಸವಾರರಿಗೆ ಗುಲಾಬಿ ಹೂವು ನೀಡಿ ಸಂಚಾರ ಜಾಗೃತಿ

ಕೆ.ಆರ್.ಪೇಟೆ ಪಟ್ಟಣ ಠಾಣೆ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆ ವತಿಯಿಂದ ಹೆಲ್ಮೆಟ್ ಜಾಗೃತಿ ಜಾಥಾ ನಡೆಸಿ ಸಂಚಾರ ನಿಯಮ ಪಾಲನೆ ಹಾಗೂ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಲಾಯಿತು. ಈ ಸಂದರ್ಭದಲ್ಲಿ ಪೊಲೀಸರು ವಾಹನ ಚಾಲಕರಿಗೆ ಗುಲಾಬಿ ಹೂವು ನೀಡುವ ಮೂಲಕ ಜಾಗೃತಿ ಮೂಡಿಸಿದರು.

ಕೃಷ್ಣರಾಜಪೇಟೆ ಪಟ್ಟಣ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸುಮಾರಾಣಿ ಮತ್ತು ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಆನಂದೇಗೌಡ ಅವರ ನೇತೃತ್ವದಲ್ಲಿ ಕೆ.ಆರ್. ಪೇಟೆ ಪಟ್ಟಣದಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಜಾಥ ನಡೆಸಿದ ಪೊಲೀಸ್ ಅಧಿಕಾರಿಗಳು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ, ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿ ಅಪಘಾತಗಳು ಸಂಭವಿಸದಂತೆ ಎಚ್ಚರ ವಹಿಸಬೇಕು ಎಂದು ಜಾಗೃತಿ ಮೂಡಿಸಿದರು.

ರಸ್ತೆ ಸುರಕ್ಷತಾ ಜಾಥಾ ನಡೆಸಿದ ಸಂದರ್ಭದಲ್ಲಿ ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನ ಚಾಲನೆ ಮಾಡುತ್ತಿದ್ದ ವಾಹನ ಸವಾರರಿಗೆ ಗುಲಾಬಿ ಹೂವು ನೀಡಿ ರಸ್ತೆ ಸುರಕ್ಷತೆ ನಿಯಮಗಳನ್ನು ಪಾಲಿಸಿ ಹೆಲ್ಮೆಟ್ ಧರಿಸಿ ದ್ವಿಚಕ್ರವಾಹನಗಳನ್ನು ಚಾಲನೆ ಮಾಡುವಂತೆ ಕಿವಿಮಾತು ಹೇಳಿದ ಇನ್ಸ್ಪೆಕ್ಟರ್ ಸುಮಾರಾಣಿ, ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಗಳು ಸೇರಿದಂತೆ ಯುವಕ ಯುವತಿಯರು ದ್ವಿಚಕ್ರ ವಾಹನ ಚಾಲನೆ ಮಾಡಬಾರದು, ಒಂದು ವೇಳೆ ವಾಹನ ಚಾಲನೆ ಮಾಡಿ ಪೊಲೀಸರಿಗೆ ಸಿಕ್ಕಿಬಿದ್ದರೆ 25,000ಗಳವರೆಗೆ ದಂಡ ಮತ್ತು ಸಜೆ ವಿಧಿಸಲಾಗುವುದು ಎಂದು ಎಚ್ಚರಿಸಿದರು.

ಅಪ್ರಾಪ್ತರು ಯಾವುದೇ ಕಾರಣಕ್ಕೂ ದ್ವಿಚಕ್ರಗಳ ವಾಹನ ಚಾಲನೆ ಮಾಡಬಾರದು. ದ್ವಿಚಕ್ರ ವಾಹನ ಚಾಲನೆ ಮಾಡುವವರು ಕಡ್ಡಾಯವಾಗಿ ವಾಹನ ಚಾಲನಾ ಪರವಾನಗಿಯನ್ನು ಹೊಂದಿರಬೇಕು, ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ತಮ್ಮ ಮೋಟಾರ್ ಬೈಕ್ ಸೇರಿದಂತೆ ಸ್ಕೂಟರ್ ಗಳ ಸವಾರಿ ಮಾಡಬೇಕು. ವಾಹನಗಳ ಸುರಕ್ಷಿತ ಚಾಲನೆಗಾಗಿ ನಿಯಮಗಳನ್ನು ರೂಪಿಸಲಾಗಿದೆ, ಆದ್ದರಿಂದ ದ್ವಿಚಕ್ರ ವಾಹನಗಳ ಸವಾರರು ಹೆಲ್ಮೆಟ್ ಧರಿಸಿ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿ ವಾಹನ ಚಾಲನೆ ಮಾಡಬೇಕು ಎಂದು ಕಿವಿಮಾತು ಹೇಳಿದರು.

ಇದೇ ಸಂದರ್ಭದಲ್ಲಿ ರಾಮ್ ಕೋ ಸಿಮೆಂಟ್ ಕಂಪನಿಯ ವತಿಯಿಂದ ಸುಮಾರು ಮೂರು ಲಕ್ಷ ರೂಪಾಯಿ ಬೆಲೆಬಾಳುವ 25 ಬ್ಯಾರಿಕೆಡ್ ಗಳನ್ನು ಕೆ.ಆರ್.ಪೇಟೆ ಪಟ್ಟಣದ ಪೊಲೀಸ್ ಠಾಣೆ ಆರಕ್ಷಕ ನಿರೀಕ್ಷಕರಾದ ಸುಮಾರಾಣಿ ಅವರಿಗೆ ಹಸ್ತಾಂತರಿಲಾಯಿತು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ