Friday, November 20, 2026

ಪ್ರಾಯೋಗಿಕ ಆವೃತ್ತಿ

ನಾಳೆ ವಿಧಾನಸೌಧದ ಆವರಣದಲ್ಲಿ ಸಿಎಂ ಸಿದ್ದರಾಮಯ್ಯ ಜನತಾದರ್ಶನ: ಸಕಲ ಸಿದ್ಧತೆ

ನಾಳೆ(ಫೆ.8) ವಿಧಾನಸೌಧದ ಆವರಣದಲ್ಲಿ ಮೊದಲ ಬಾರಿಗೆ ನಡೆಯಲಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ರಾಜ್ಯ ಮಟ್ಟದ ಎರಡನೇ ಜನತಾ ದರ್ಶನ ಕಾರ್ಯಕ್ರಮಕ್ಕೆ ಸಕಲ ಸಿದ್ದತೆಗಳು ನಡೆದಿದೆ.

ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಲಿರುವ ಸಾರ್ವಜನಿಕರು ಸಲ್ಲಿಸುವ ದೂರು ಹಾಗೂ ಮನವಿಗಳನ್ನು ಸ್ವೀಕರಿಸಲು ಇಲಾಖಾವಾರು ಕೌಂಟರ್‌, ಅಧಿಕಾರಿಗಳ ನಿಯೋಜನೆ ಹಾಗೂ ಎಸ್.ಒ.ಪಿ ಜಾರಿ ಮಾಡಿ ಸರ್ಕಾರ ಆದೇಶಿಸಿದೆ.

ಇಲಾಖಾವಾರು ಕೌಂಟರ್‌

ಮುಖ್ಯಮಂತ್ರಿಯವರ ಜನತಾದರ್ಶನ ನಡೆಯುವ ಸ್ಥಳದಲ್ಲಿ ಸಚಿವಾಲಯದ ಎಲ್ಲಾ ಇಲಾಖೆಗಳ ಸ್ಟಾಲ್‌ ಗಳನ್ನು ಅಳವಡಿಸಲಾಗಿದ್ದು, ಪ್ರತಿ ಸ್ಟಾಲ್‌ಗಳಿಗೆ ಸಂಖ್ಯೆಯನ್ನು ನೀಡಲಾಗಿದೆ.

ಜನತಾದರ್ಶನಕ್ಕಾಗಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ನಾಗರಿಕರನ್ನು ಪ್ರಥಮಹಂತದಲ್ಲಿ ವಿಚಾರಿಸಿ, ಯಾವ ಇಲಾಖೆಯ ಸ್ಟಾಲ್‌ಗೆ ನಿರ್ದೇಶಿಸಿ ಕಳಿಸಬೇಕು ಎಂದು ವಿಂಗಡಿಸಲು ಅನುಭವಿ ಅಧಿಕಾರಿ – ಸಿಬ್ಬಂದಿಗಳ ವಿಚಾರಣಾ ಕೌಂಟರ್ ತೆರೆಯಲಾಗಿದೆ.

ಹಿರಿಯ ನಾಗರಿಕರು, ವಿಕಲಚೇತನರಿಗೆ ವ್ಹೀಲ್ ಚೇರ್ ವ್ಯವಸ್ಥೆ

ವಯೋವೃದ್ಧರು, ಹಿರಿಯ ನಾಗರಿಕರು, ವಿಕಲಚೇತನರು, ಗರ್ಭಿಣಿಯರಿಗಾಗಿ ಬ್ಯಾಟರಿ ಚಾಲಿತ BUGGY, ವ್ಹೀಲ್ ಚೇರ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಸಂಬಂಧಿಸಿದ ಇಲಾಖೆಯ ಸ್ಟಾಲ್‌ ಗೆ ಅವರನ್ನು ಕರೆದೊಯ್ಯುವ ವ್ಯವಸ್ಥೆಯಾಗಿದೆ.

“>

ಜನತಾದರ್ಶನಕ್ಕೆ ಆಗಮಿಸುವ ನಾಗರಿಕರಿಗೆ ಊಟ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಐದರಿಂದ ಹತ್ತು ಸಾವಿರ ಜನರಿಗೆ ಆಹಾರ ಪೂರೈಸುವಂತಹ ವ್ಯವಸ್ಥೆಯಾಗಿದೆ. ಜನತಾದರ್ಶನಕ್ಕೆ ಬರುವ ಎಲ್ಲಾ ಸಾರ್ವಜನಿಕರು ಹಾಗೂ ದಿವ್ಯಾಂಗರಿಗೆ ಸ್ವಚ್ಛ ಶೌಚಾಲಯಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಜನಸ್ಪಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಿಎಂಟಿಸಿ ವತಿಯಿಂದ ಉಚಿತ ಸಾರಿಗೆ ವ್ಯವಸ್ಥೆಯನ್ನು ಕೂಡ ಕಲ್ಪಿಸಲಾಗಿದೆ.
.
3738 ಅರ್ಜಿ ವಿಲೇವಾರಿ

ಕಳೆದ ನವೆಂಬರ್ 27 ರಂದು ನಡೆದ ಜನತಾ ದರ್ಶನದಲ್ಲಿ 4030 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಈವರೆಗೆ 3738 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಸಿಎಂ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ. ಒಟ್ಟಾರೆ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಸುಗಮವಾಗಿ ಪರಿಹಾರವನ್ನು ಪಡೆಯಲು ಜನಸ್ಪಂದನ ಕಾರ್ಯಕ್ರಮ ನೆರವಾಗಲು ಭರದ ಸಿದ್ಧತೆ ನಡೆದಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ