Friday, September 20, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ ಬಂದ್ ಗೆ ಬೆಂಬಲವಿಲ್ಲ, ರ್‍ಯಾಲಿಗಷ್ಟೇ ಬೆಂಬಲ: ಅಶೋಕ್ ಜಯರಾಂ

ಕೆರಗೋಡಿನಲ್ಲಿ ಹನುಮ ಧ್ವಜ ತೆರವು ಸಂಬಂಧ ಹಿಂದೂ ಪರ ಸಂಘಟನೆಗಳು ಕರೆ ನೀಡಿರುವ
ಮಂಡ್ಯ ನಗರ ಬಂದ್‌ಗೆ ಬಿಜೆಪಿ ಬೆಂಬಲ ನೀಡುವುದಿಲ್ಲ, ರ್‍ಯಾಲಿ ಮತ್ತು ಪಾದಯಾತ್ರೆಗೆ ತಮ್ಮ ಸಂಪೂರ್ಣ ಬೆಂಬಲವಿದೆ ಎಂದು ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ, ಬಿಜೆಪಿ ಮುಖಂಡ ಅಶೋಕ್ ಜಯರಾಂ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಟಿ ಮಡೆಸಿ ಮಾತನಾಡಿದ ಅವರು, ಜಿಲ್ಲಾಧಿಕಾರಿಗಳ ಮನವಿ ಮೇರೆಗೆ ನಾವು ಬಂದ್‌ ಅನ್ನು ಬೆಂಬಲಿಸುತ್ತಿಲ್ಲ. ಕೆಲವರು ಬಂದ್ ಮಾಡುವುದಾಗಿ ತಿಳಿಸಿದ್ದಾರೆ. ಶಾಂತಿಯುತ ಬಂದ್ ಮಾಡಿ, ಯಾರಿಗೂ ತೊಂದರೆ ಕೊಡುವುದು ಬೇಡ. ವಿದ್ಯಾರ್ಥಿಗಳಿಗೆ ಪರೀಕ್ಷಾ ಸಮಯವಾಗಿರುವ ಕಾರಣ ಅವರಿಗೂ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಮನವಿ ಮಾಡಿದ್ದೇವೆ ಎಂದರು.

ಒತ್ತಾಯಪೂರ್ವಕವಾಗಿ ಚಿತ್ರಮಂದಿರ, ಅಂಗಡಿ- ಮುಂಗಟ್ಟುಗಳನ್ನು ಬಂದ್ ಮಾಡಿಸಬಾರದು. ಜನರೇ ಸ್ವಯಂಪ್ರೇರಿತವಾಗಿ ಬಂದ್ ಮಾಡಿದರೆ ನಮ್ಮ ಯಾವುದೇ ಅಭ್ಯಂತರವಿಲ್ಲ ಎಂದು ಹೇಳಿರುವುದಾಗಿ ತಿಳಿಸಿದರು.

ಜಿಲ್ಲಾ ವಾಣಿಜ್ಯ ಮಂಡಳಿ ಬೆಂಬಲವಿಲ್ಲ

ಮಂಡ್ಯ ನಗರ ಬಂದ್‌ಗೆ ಬೆಂಬಲ ನೀಡುವುದಿಲ್ಲ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿ ಅಧ್ಯಕ್ಷ ಕೆ.ಪ್ರಭಾಕರ್ ತಿಳಿಸಿದ್ದಾರೆ.

ಬಂದ್‌ನಿಂದಾಗಿ ವ್ಯಾಪಾರ-ವಹಿವಾಟಿಗೆ ತೊಂದರೆಯಾಗುವ ಪರಿಣಾಮ ವ್ಯಾಪಾರಸ್ಥರಿಗೆ ಸಮಸ್ಯೆಯಾಗುತ್ತದೆ. ಇಂತಹ ಬಂದ್‌ಗೆ ಹಿಂದೆಯೂ ಬೆಂಬಲ ನೀಡಿಲ್ಲ, ಮುಂದೆಯೂ ನೀಡುವುದಿಲ್ಲ. ವ್ಯಾಪಾರಸ್ಥರು ಸ್ವಯಂ ಪ್ರೇರಿತರಾಗಿ ಬಂದ್ ಮಾಡಿಕೊಂಡರೆ ನಮ್ಮ ಆಕ್ಷೇಪಣೆ ಇಲ್ಲವೆಂದು ಹೇಳಿದ್ದಾರೆ.

ಕೆರಗೋಡು ಹನುಮ ಧ್ವಜ ತೆರವು ವಿರೋಧಿಸಿ ಕರೆ ನೀಡಿರುವ ಫೆ.9ರಂದು ಬಂದ್‌ಗೆ ಸಹಕರಿಸುವಂತೆ ಹಿಂದು ಸಂಘಟನೆ ಕಾರ್ಯಕರ್ತರು ಇಂದು ಮಂಡ್ಯ ನಗರದಲ್ಲಿ ವರ್ತಕರಿಗೆ ಮನವಿ ಮಾಡಿದರು.

ಜಿಲ್ಲಾಡಳಿತ ಹಾಗೂ ಕಾಂಗ್ರೆಸ್ ಸರ್ಕಾರ ಹಿಂದೂಗಳ ಮೇಲೆ ದಮನಕಾರಿ ನೀತಿ ಅನುಸರಿಸುತ್ತಿದೆ. ಕೆರಗೋಡು ಗ್ರಾಮದಲ್ಲಿ ಹನುಮಾನ್ ಧ್ವಜ ಹಾರಿಸುವವರೆವಿಗೂ ನಮ್ಮ ಹೋರಾಟ ನಿರಂತವಾಗಿರುತ್ತದೆ. ಆದ್ದರಿಂದ ಮಂಡ್ಯ ನಗರ ಬಂದ್‌ಗೆ ಸಾರ್ವಜನಿಕರು, ವರ್ತಕರು, ರಸ್ತೆ ಬದಿ ವ್ಯಾಪಾರಿಗಳು, ಹೋಟೆಲ್ ಮಾಲೀಕರು, ಬೇಕರಿ ಮಾಲೀಕರು, ಆಟೋ ಚಾಲಕರು ಸೇರಿದಂತೆ ಎಲ್ಲರೂ ಸಕಾರಾತ್ಮಕವಾಗಿ ಸ್ಪಂದಿಸಿ ಸಹಕರಿಸಿ ಎಂದು ಮನವಿ ಮಾಡಿದರು.

ಈ ವೇಳೆ ಬೇಕರಿ ಮಾಲೀಕರ ಸಂಘದ ಅಧ್ಯಕ್ಷ ಎಚ್.ಆರ್.ಅರವಿಂದ್, ಹಿಂದೂ ಪರ ಸಂಘಟಕರಾದ ಸಿ.ಟಿ.ಮಂಜುನಾಥ್, ಹೊಸಹಳ್ಳಿ ಶಿವು, ಮಹೇಶ್ ಕೆರಗೋಡು, ಹುಲಿವಾನ ಮಹೇಶ್, ಪ್ರಸನ್ನ ಮತ್ತಿತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!