Sunday, November 22, 2026

ಪ್ರಾಯೋಗಿಕ ಆವೃತ್ತಿ

ಕೆ.ಆರ್.ಪೇಟೆ| ಐಚನಹಳ್ಳಿ ಏತ ನೀರಾವರಿ ಯೋಜನೆಗೆ ಚಲುವರಾಯಸ್ವಾಮಿ ಚಾಲನೆ

ಕೆ.ಆರ್.ಪೇಟೆ ತಾಲೂಕಿನ ಬೂಕನಕೆರೆ ಮತ್ತು ಶೀಳನೆರೆ ಹೋಬಳಿಯ ಕೆರೆ ಕಟ್ಟೆಗಳನ್ನು ಹೇಮಾವತಿ ನದಿ ನೀರು ತುಂಬಿಸುವ 265 ಕೋಟಿ ರೂ. ವೆಚ್ಚದ ಐಚನಹಳ್ಳಿ ಏತ ನೀರಾವರಿ ಯೋಜನೆಗೆ ಸಚಿವ ಚಲುವರಾಯಸ್ವಾಮಿ ಚಾಲನೆ ನೀಡಿದರು.

265 ಕೋಟಿ ರೂ ವೆಚ್ಚದಲ್ಲಿ 2 ಹಂತದಲ್ಲಿ 99 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಪೈಕಿ ಮೊದಲನೆಯ ಹಂತದಲ್ಲಿ ಪೂರ್ಣವಾಗಿರುವ 50 ಕೆರೆಗಳಿಗೆ ನೀರು ತುಂಬಿಸುವ ಏತ ನೀರಾವರಿ ಯೋಜನೆಯೂ ಬೂಕನಕೆರೆ ಸೇರಿದಂತೆ ಹಲವಾರು ಗ್ರಾಮಗಳ ಕೆರೆಗಳಿಗೆ ನೀರು ತುಂಬಿಸುವ ಪಟ್ಟಿಯಲ್ಲಿವೆ ಎಂದರು.

ಈ ಯೋಜನೆಯಲ್ಲಿ ಹೆಚ್ಚಿನ ಕೆರೆಗಳನ್ನು ಸೇರ್ಪಡೆ ಮಾಡಿದರೆ, ಅಂದಾಜು ವೆಚ್ಚವು 310ಕೋಟಿ ರೂಗಳಿಗೂ ಹೆಚ್ಚಾಗಲಿದೆ. ಈ ಯೋಜನೆಯಿಂದ ಕಾಮಗಾರಿ ಕೈಗೆತ್ತಿಕೊಂಡಿರುವ ಗುತ್ತಿಗೆದಾರರಿಗೆ ಹಿಂದಿನ ಸರ್ಕಾರದಿಂದ ಕೇವಲ 25 ಕೋಟಿ ರೂ ಮಾತ್ರ ಪಾವತಿಸಲಾಗಿದೆ. ಅವರಿಗೆ 265 ಕೋಟಿ ರೂಗಳಿಗೂ ಹೆಚ್ಚಿನ ಹಣ ಪಾವತಿಸಬೇಕಾಗುತ್ತದೆ ಎಂದರು.

ಮಾಜಿ ಸಚಿವ ಡಾ.ನಾರಾಯಣಗೌಡ ಹೋರಾಟದ ಫಲವಾಗಿ ಈ ಯೋಜನೆ ಆರಂಭವಾಗಿ ಮೊದಲ ಹಂತವು ಸಂಪೂರ್ಣಗೊಂಡಿದ್ದು. ಪ್ರಸ್ತುತ ಸರ್ಕಾರದ ಪ್ರತಿನಿಧಿಯಾಗಿ ಸಚಿವನಾಗಿ ಉದ್ಘಾಟನೆ ಮಾಡಿದ್ದೇನೆ. ನಾರಾಯಣಗೌಡರ ದೂರದರ್ಶಿತ್ವದಿಂದಾಗಿ ಹಲವು ಅಭಿವೃದ್ಧಿ ಕಾಮಗಾರಿಗಳು ಚಾಲನೆಗೊಂಡಿವೆ ಎಂದು ಹೇಳಿದರು.

ನಾಗಮಂಗಲ ಹಾಗೂ ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ ಮಳೆಯಾಶ್ರಿತ ಒಣ ಪ್ರದೇಶವಿದ್ದು, ಈ ಎರಡೂ ತಾಲ್ಲೂಕುಗಳಿಗೆ ನೀರಾವರಿ ಯೋಜನೆಗಳು ಅವಶ್ಯಕವಾಗಿದ್ದು, ಬೂಕನಕೆರೆ ಹೋಬಳಿಯ 49 ಕೆರೆಕಟ್ಟೆಗಳನ್ನು ತುಂಬಿಸುವ ಈ ಏತ ನೀರಾವರಿ ಯೋಜನೆಯನ್ನು ಉದ್ಘಾಟನೆ ಮಾಡಲಾಗಿದೆ . ಈ ಹಿಂದಿನ ಬಿಜೆಪಿ ಸರ್ಕಾರವು ರಾಜ್ಯದಲ್ಲಿ ಹಲವಾರು ನೀರಾವರಿ ಯೋಜನೆಗಳನ್ನು ಪ್ರಾರಂಭಿಸಿದೆ ಅವುಗಳ ಪಾವತಿಗೆ 2,40,000 ಕೋಟಿ ರೂ ಅನುದಾನದ ಅವಶ್ಯಕತೆ ಇದೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು.

ಕಾರ್ಯಕ್ರಮದಲ್ಲಿ ಕೆ.ಆರ್. ಪೇಟೆ ಶಾಸಕ ಹೆಚ್.ಟಿ ಮಂಜು, ಮಾಜಿ ಶಾಸಕರಾದ ಕೆ.ಬಿ. ಚಂದ್ರಶೇಖರ್, ಬಿ.ಪ್ರಕಾಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ. ನಾಗೇಂದ್ರಕುಮಾರ್, ಗಂಜಿಗೆರೆ ಗ್ರಾಮ ಪಂಚಾಯತಿ ಅಧ್ಯಕ್ಷ ಪರಮೇಶ್, ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ದಿ ಇಲಾಖೆಯ ಅಧೀಕ್ಷಕ ಇಂಜಿನಿಯರ್ ವಿನಾಯಕ ಆರ್ ಹರನಟ್ಟಿ, ಕಾರ್ಯಪಾಲಕ ಇಂಜಿನಿಯರ್ ಸಿ. ಶಂಕರ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಎಸ್. ನಿರ್ಮಲೇಶ್ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ