Tuesday, October 22, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಕಾಂಗ್ರೆಸ್ ಮುಖಂಡ ಎಂ.ಡಿ ಜಯರಾಂ ನಿಧನ

ಮಂಡ್ಯ ಜಿಲ್ಲೆಯ ಕಾಂಗ್ರೆಸ್ ನ ಹಿರಿಯ ಮುಖಂಡ ಎಂ.ಡಿ ಜಯರಾಂ (73) ಇಂದು ಬೆಂಗಳೂರಿನ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ.

ಮಂಡ್ಯ ವಿದ್ಯಾನಗರದಲ್ಲಿರುವ ಅವರ ಸ್ವಗೃಹಕ್ಕೆ ಪಾರ್ಥಿವ ಶರೀರವನ್ನು ತಂದು ಸಾರ್ವಜನಿಕರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು, ಶುಕ್ರವಾರ ಮಧ್ಯಾಹ್ನದ ನಂತರ ಅವರ  ಸ್ವಗ್ರಾಮವಾದ ಮದ್ದೂರು ತಾಲ್ಲೂಕು ಕೊಪ್ಪ ಹೋಬಳಿಯ ಯಡವನಳ್ಳಿ ಗ್ರಾಮದಲ್ಲಿ ಮೃತರ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

ದಲಿತ ಸಮುದಾಯದ ನಾಯಕರಾಗಿದ್ದ ಎಂ.ಡಿ ಜಯರಾಮ್ ಕಾಂಗ್ರೆಸ್ ಪಕ್ಷದಲ್ಲಿ ರಾಜಕೀಯ ಜೀವನ ನಡೆಸಿದ್ದರು, ಮಂಡ್ಯ ನಗರಸಭೆಗೆ ಎರಡು ಬಾರಿ ಚುನಾಯಿತ ಸದಸ್ಯರಾಗಿದ್ದರು, ಎಪಿಎಂಸಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಕಾಂಗ್ರೆಸ್ ಪಕ್ಷದ ಎಸ್ಸಿ ಎಸ್ಟಿ ವಿಭಾಗದ ಅಧ್ಯಕ್ಷರಾಗಿದ್ದರು, ಕೆಪಿಸಿಸಿ ಸದ್ಯಸರಾಗಿದ್ದರೂ ಆಗಿ, ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆತ್ಮೀಯ ಬಳಗದಲ್ಲಿ ಗುರುತಿಸಿಕೊಂಡಿದ್ದರು.

ರಾಜಕೀಯದ ಜೊತೆಗೆ ಶಿಕ್ಷಣ ಕ್ಷೇತ್ರದಲ್ಲಿಯೂ ಸೇವೆ ಮಾಡಿದ್ದ ಇವರು ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯಾಗಿದ್ದರು. ಇವರು ಪತ್ನಿ, ಪುತ್ರ, ಪುತ್ರಿಯರನ್ನು ಅಗಲಿದ್ದಾರೆ. ಎಂಡಿ ಜಯರಾಮ್ ರವರ ನಿಧನಕ್ಕೆ ಮಂಡ್ಯ ಜಿಲ್ಲೆ ಕಾಂಗ್ರೆಸ್ ಸಂತಾಪ ಸೂಚಿಸಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!