Thursday, September 19, 2024

ಪ್ರಾಯೋಗಿಕ ಆವೃತ್ತಿ

ಬಸವಣ್ಣನ ಚಿಂತನೆ ಸಂವಿಧಾನ ರಚನೆಗೆ ಪ್ರೇರಣೆ: ನರೇಂದ್ರಸ್ವಾಮಿ

ಬಸವಣ್ಣನವರು ತಮ್ಮ ಅನುಭವ ಮಂಟಪದಲ್ಲಿ ಎಲ್ಲಾ ಜನಂಗದವರಿಗೂ ಚರ್ಚೆಗೆ ಅವಕಾಶ ಮಾಡಿಕೊಟ್ಟಿದ್ದರು, ಬಸವಣ್ಣನವರ ಮಾದರಿ ಆಡಳಿತ ಮತ್ತು ಚಿಂತನೆಗಳು ಡಾ. ಬಿಆರ್ ಅಂಬೇಡ್ಕರ್‌ ಅವರು ಸಂವಿಧಾನ ಬರೆಯಲು ಸ್ಪೂರ್ತಿದಾಯಕವಾಗಿತ್ತು ಎಂದು ಶಾಸಕ ಪಿ.ಎಂ ನರೇಂದ್ರಸ್ವಾಮಿ ತಿಳಿಸಿದರು.

ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರವನ್ನು ಅಳವಡಿಸಬೇಕೆಂಬ ಸರ್ಕಾರದ ಅದೇಶದ ಹಿನ್ನೆಲೆಯಲ್ಲಿ ಮಳವಳ್ಳಿ ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ನೆರೆವೇರಿಸುವುದರ ಮೂಲಕ ಭಾವಚಿತ್ರ ಅಳವಡಿಕೆಗೆ ಚಾಲನೆ ನೀಡಿ ಮಾತನಾಡಿದರು.

ಬಸವಣ್ಣನವರು ತಮ್ಮ ಅನುಭವ ಮಂಟಪದಲ್ಲಿ ಎಲ್ಲಾ ಜನಾಂಗದವರಿಗೂ ಚರ್ಚೆಗೆ ಅವಕಾಶ ಮಾಡಿಕೊಟ್ಟಿದ್ದರು, ಬಸವಣ್ಣನವರ ಮಾದರಿ ಆಡಳಿತ ಮತ್ತು ಚಿಂತನೆಗಳು ಡಾ.ಬಿ.ಆರ್ ಅಂಬೇಡ್ಕರ್‌ರವರು ಸಂವಿಧಾನ ಬರೆಯಲು ಪ್ರೇರಣೆ ನೀಡಿತ್ತು. ಸಂವಿಧಾನದಿಂದ ಪ್ರತಿಯೊಬ್ಬರು ನೆಮ್ಮದಿಯಿಂದ ಬದುಕುವಂತಾಗಿದೆ ಎಂದು ತಿಳಿಸಿದರು.

ಸಂವಿಧಾನದ ಆಶಯಗಳನ್ನು ಈಡೇರಿಸಲು ಬದ್ದವಾಗಿರುವ ಕಾಂಗ್ರೆಸ್ ಸರ್ಕಾರ ಪ್ರತಿಯೊಂದು ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರವನ್ನು ಅಳವಡಿಸಲು ಮಹತ್ವದ ನಿರ್ಧಾರ ಕೈಗೊಂಡಿದೆ, ಬಸವಣ್ಣ ಹಾಗೂ ಅಂಬೇಡ್ಕರ್‌ರವರ ಚಿಂತನೆಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು.

ವಿಶ್ವವೇ ಮೆಚ್ಚುವಂತಹ ಆಡಳಿತವನ್ನು 12ನೇ ಶತಮಾನದಲ್ಲಿಯೇ ಬಸವಣ್ಣನವರು ತಿಳಿಸಿಕೊಟ್ಟಿದ್ದರು, ಬಸವಣ್ಣನವರ ವಚನಗಳು ಸಮಾಜಕ್ಕೆ ದಾರಿ ದೀಪವಾಗಿದೆ, ಅವರ ಚಿಂತನೆಗಳು ಇಂದಿಗೂ ಪ್ರಸ್ತುತವಾಗಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಅಭಿವೃದ್ದಿ ಯೋಜನಾಧಿಕಾರಿ ಸಂಜೀವಪ್ಪ, ತಹಶೀಲ್ದಾರ್ ಕೆ.ಎನ್ ಲೊಕೇಶ್, ತಾ.ಪಂ ಕಾರ್ಯನಿರ್ವಹಕ ಅಧಿಕಾರಿ ಮಮತ, ಸೇರಿದಂತೆ ಇತರರು ಇದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!