Friday, September 20, 2024

ಪ್ರಾಯೋಗಿಕ ಆವೃತ್ತಿ

ಸ್ವಚ್ಚ, ಪ್ರಾಮಾಣಿಕ, ಜನಪರ ಆಡಳಿತಕ್ಕಾಗಿ KRS ಬೆಂಬಲಿಸಿ: ಲಿಂಗೇಗೌಡ

ಭ್ರಷ್ಟಾಚಾರ, ಸ್ವಜನಪಕ್ಷಪಾತ, ದುರಾಡಳಿತದ ಮೂಲಕ ರಾಜ್ಯದ ಜನರಿಗೆ ನಿರಂತರವಾಗಿ ದ್ರೋಹ ಮಾಡುತ್ತಿರುವ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳನ್ನು ತಿರಸ್ಕರಿಸಿ, ರಾಜ್ಯದ ಏಕೈಕ ಪ್ರಾಮಾಣಿಕ ಮತ್ತು ಪ್ರಾದೇಶಿಕ ಪಕ್ಷವಾದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವನ್ನು ಬೆಂಬಲಿಸಿ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಉಪಾಧ್ಯಕ್ಷ ಲಿಂಗೇಗೌಡ ತಿಳಿಸಿದರು.

ಬೆಂಗಳೂರು ಸಮೀಪದ ದೇವನಹಳ್ಳಿಯಲ್ಲಿ ಪ್ರಾರಂಭವಾದ ಕೆ.ಆರ್.ಎಸ್  ಬೈಕ್ ಜಾಥಾ ಇಂದು ಮಂಡ್ಯ ತಲುಪಿದ ಸಂದರ್ಭದಲ್ಲಿ ಮಂಡ್ಯನಗರದ ಸಿಲ್ವರ್ ಜ್ಯೂಬಿಲಿ ಪಾರ್ಕ್ ನಲ್ಲಿ ನಡೆದ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ಜನರನ್ನು ಕೋರಲು ಹಾಗೂ ಸ್ವಚ್ಚ, ಪ್ರಾಮಾಣಿಕ, ಜನಪರ, ಪ್ರಾದೇಶಿಕ ರಾಜಕಾರಣದ ಕುರಿತು ಜನಜಾಗೃತಿ ಮೂಡಿಸಲು ”ಕರ್ನಾಟಕಕ್ಕಾಗಿ ನಾವು ಎನ್ನುವ ಹೆಸರಿನಲ್ಲಿ ರಾಜ್ಯವ್ಯಾಪಿ ಬೈಕ್ ಜಾಥಾ” ಹಮ್ಮಿಕೊಂಡಿದೆ ಎಂದರು.

ಜಾಥಾದ ಸಂದರ್ಭದಲ್ಲಿ “ಭ್ರಷ್ಟರನ್ನು, ಅಪ್ರಾಮಾಣಿಕರನ್ನು, ಸ್ವಜನಪಕ್ಷಪಾತಿಗಳನ್ನು, ಅನೈತಿಕ ನಡವಳಿಕೆ ಉಳ್ಳವರನ್ನು, ಸುಳ್ಳರನ್ನು, ಸಮಾಜಘಾತುಕ ಶಕ್ತಿಗಳನ್ನು, ಕುಟುಂಬ ರಾಜಕಾರಣದ ಮೂಲಕ ಪ್ರಜಾಪ್ರಭುತ್ವದ ಆಶಯಗಳನ್ನು ಮಣ್ಣುಪಾಲು ಮಾಡುತ್ತಿರುವ ಜೆ.ಸಿ.ಬಿ. ಪಕ್ಷಗಳ ಪರಮಸ್ವಾರ್ಥಿ ರಾಜಕಾರಣಿಗಳನ್ನು ತಮ್ಮ ಮತ್ತು ತಮ್ಮ ಮಕ್ಕಳ ರಾಜಕೀಯ ನಾಯಕರೆಂದು ಒಪ್ಪಿಕೊಳ್ಳದೆ ಜನಪರ ಕಾಳಜಿಯ, ಸ್ವಚ್ಚ ಮತ್ತು ಪ್ರಾಮಾಣಿಕ ರಾಜಕೀಯ ವ್ಯವಸ್ಥೆಗಾಗಿ ನಿರಂತರವಾಗಿ ಶ್ರಮಿಸುತ್ತಿರುವ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ನಾಡಪ್ರೇಮಿ ಸೈನಿಕರನ್ನು ಮತ್ತು KRS ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಲಾಗುವುದೆಂದರು.

ಬೈಕ್ ಜಾಥಾದಲ್ಲಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ದೀಪಕ್ ಸಿ. ಎನ್., ರಾಜ್ಯ ಸಂಘಟನಾ ಕಾರ್ಯದರ್ಶಿ ಎಲ್. ಜೀವನ್, ರಾಜ್ಯ ಜಂಟಿ ಕಾರ್ಯದರ್ಶಿ ರಘುಪತಿ ಭಟ್, ಅರುಣಕುಮಾರ ಹೆಚ್ ಮಲ್ಲೇಗೌಡ, ಜಿಲ್ಲಾಧ್ಯಕ್ಷ ರಮೇಶ್ ಗೌಡ, ಜಿಲ್ಲಾ ಉಪಾಧ್ಯಕ್ಷ ಮಲ್ಲೇಶ ಹೆಬ್ಬಕವಾಡಿ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರು ಕೀಲಾರ ಹಾಗೂ ಇತರ ಪದಾಧಿಕಾರಿಗಳು ಈ ಬೈಕ್ ಜಾಥಾ ದಲ್ಲಿ ಭಾಗವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!