Wednesday, November 18, 2026

ಪ್ರಾಯೋಗಿಕ ಆವೃತ್ತಿ

ಮದ್ದೂರು : ಸಂವಿಧಾನ ಜಾಗೃತಿ ಜಾಥಾ

ವರದಿ : ಪ್ರಭು ವಿ. ಎಸ್.

ಮದ್ದೂರು ತಹಶೀಲ್ದಾರ್ ರವರು ಮತ್ತು ತಾಲ್ಲೂಕು ಅಡಳಿತದಿಂದ ಚಾಲನೆಗೊಂಡ ಸಂವಿಧಾನ ಜಾಗೃತ ಜಾಥವು ಇಂದು ಭಾರತಿ ನಗರದಿಂದ ಪ್ರಾರಂಭವಾಗಿ ಚಿಕ್ಕರಸಿನಕೆರೆ, ಗೊರವನಹಳ್ಳಿ, ಸಾದೊಳಲು, ಗೆಜ್ಜಲಗೆರೆ, ವಳಗೆರೆಹಳ್ಳಿ, ಆಲೂರು, ನಗರಕೆರೆ, ಕ್ಯಾತಘಟ್ಟ, ಕೂಳಗೆರೆ, ಕೆ. ಬೆಳ್ಳೂರು ಮತ್ತು ಕೆ. ಹೊನ್ನಲಗೆರೆ ಪಂಚಾಯಿತಿಗಳಲ್ಲಿ ಸಂಚರಿಸಿ ಸಂವಿಧಾನ ಜಾಗೃತಿ ಮೂಡಿಸಲಾಯಿತು.

ಭಾರತೀ ನಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯಿಂದ ಬೆಳ್ಳಿರಥ ಮತ್ತು ವಿದ್ಯಾರ್ಥಿಗಳ ಪಥ ಸಂಚಲನದ ಮೂಲಕ ಹೊರಟ ಜಾಗೃತಿ ರಥವನ್ನು ಚಿಕ್ಕರಸಿನಕೆರೆ, ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ರಥವನ್ನು ಡೊಳ್ಳು ಕುಣಿತ, ಪೂಜಾ ಕುಣಿತ, ಮಹಿಳೆಯರಿಂದ ಪೂರ್ಣ ಕುಂಭಮೇಳ ಹಾಗೂ ವಿದ್ಯಾರ್ಥಿಗಳ ಪಥ ಸಂಚಲನದ ಮೂಲಕ ಸ್ವಾಗತಿಸಿ ಬರಮಾಡಿಕೊಂಡರು.

ಸಾದೊಳಲು, ಗ್ರಾಮ ಪಂಚಾಯತಿಯಲ್ಲಿ ಸಂವಿಧಾನ ಜಾಗೃತಿ ಜಾತ ರಥವನ್ನು ವೀರಗಾಸೆ ಪೂಜಾ ಕುಣಿತ ಪೂರ್ಣ ಕುಂಭಮೇಳ ಹಾಗೂ ವಿದ್ಯಾರ್ಥಿಗಳಿಂದ ಅದ್ದೂರಿ ಸ್ವಾಗತ ಮಾಡಲಾಯಿತು.

ಜಾಥಾ ಸಂಚರಿಸಿದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಶಾಲಾ ಮಕ್ಕಳಿಗೆ ರಸಪ್ರಶ್ನೆ, ಪ್ರಬಂಧ, ಚರ್ಚಾ ಸ್ಪರ್ಧೆಗಳನ್ನು ಏರ್ಪಡಿಸಿ ಸಮಾಜ ಕಲ್ಯಾಣ ಇಲಾಖೆ ಮತ್ತು ಪಂಚಾಯಿತಿ ವತಿಯಿಂದ ಬಹುಮಾನ ವಿತರಣೆ ಮಾಡಲಾಯಿತು.

ಸಾರ್ವಜನಿಕರಿಗೆ ಸಂವಿಧಾನದ ಮಹತ್ವ, ಪ್ರಜೆಗಳಿಗೆ ನೀಡಿರುವ ಹಕ್ಕುಗಳು ಹಾಗೂ ಜವಾಬ್ಧಾರಿಗಳ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅರಿವು ಮೂಡಿಸಲಾಯಿತು.

ಜಾಥಾ ಸಾಗುವ ದಾರಿಯುದ್ದಕ್ಕೂ ವಿವಿದ ಕಲಾ ತಂಡಗಳಿಂದ ಪೂಜಾ ಕುಣಿತ, ಡೊಳ್ಳು ಕುಣಿತ, ಕಂಸಾಳೆ ನೃತ್ಯ ಕುಂಭಮೇಳಗಳು ಮತ್ತು ಶಾಲಾ ವಿದ್ಯಾರ್ಥಿಗಳ ಬ್ಯಾಂಡ್ ಸೆಟ್ ವಾದ್ಯಗಳು ಜಾಥಾಕ್ಕೆ ಮೆರುಗು ತಂದವು.ಶಾಲಾ ಪುಟಾಣಿಗಳ ರಾಷ್ಟ್ರ ನಾಯಕರ ವೇಷಭೂಷಣವು ಎಲ್ಲರ ಗಮನ ಸೆಳೆಯುತ್ತಿದ್ದು ವಿಶೇಷವಾಗಿತ್ತು.

ಗೆಜ್ಜಲಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶಾಲಾ ಮಕ್ಕಳು ದೇಶಭಕ್ತಿ ಗೀತೆಗೆ ನರ್ತನ ಮತ್ತು ಪೂಜೆ ಕುಣಿತ ಮಾಡುವ ಮೂಲಕವೂ, ನಗರಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೈಕ್ ಜಾಥಾದ ಮೂಲಕ ಸಂವಿಧಾನ ಜಾಗೃತಿ ಜಾಥಾವನ್ನು ಸ್ವಾಗತಿಸಿದರು.

ಕೆ. ಹೊನ್ನಲಗೆರೆ ಮೊರಾರ್ಜಿ ದೇಸಾಯಿ ವಸತಿ ಶಾಲೆ ವಿದ್ಯಾರ್ಥಿಗಳು ಮೇಣದಬತ್ತಿ ದೀಪ ಬೆಳಗಿಸುವ ಮೂಲಕ ಜಾಗೃತ ರಥವನ್ನು ಸ್ವಾಗತಿಸಿದರು.

ಜಾಥಾ ಸಂಚರಿಸುವ ಎಲ್ಲ ಕಡೆಯೂ, ಪ್ರತಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಪಂಚಾಯಿತಿ ಅಬಿವೃದ್ಧಿ ಅಧಿಕಾರಿಗಳು ,ಸದಸ್ಯರು, ಊರಿನ ಮುಖಂಡರು, ಎಲ್ಲಾ ಶಾಲಾ ಮತ್ತು ಕಾಲೇಜಿನ ವಿದ್ಯಾರ್ಥಿಗಳು, ಶಿಕ್ಷಕರು ವಿವಿದ ಸಂಘ ಸಂಸ್ಥೆಯ ಪ್ರತಿನಿಧಿಗಳು, ಸಿಬ್ಬಂದಿಗಳು, ಭಾಗವಹಿಸಿದ್ದರು‌.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ