Tuesday, November 17, 2026

ಪ್ರಾಯೋಗಿಕ ಆವೃತ್ತಿ

ಫೆ.25 ರಂದು ಪೋಲಿಸ್ ಪೇದೆ ಹುದ್ದೆ ನೇಮಕಾತಿ ಪರೀಕ್ಷೆ

ಮಂಡ್ಯ ಜಿಲ್ಲಾ ವ್ಯಾಪ್ತಿಯಲ್ಲಿ ನಾಗರಿಕ ಪೊಲೀಸ್ ಪೇದೆ ಹುದ್ದೆಯ ನೇಮಕಾತಿ ಲಿಖಿತ ಪರೀಕ್ಷೆಯು ನಾಳೆ ಫೆಬ್ರವರಿ 25ರಂದು ನಡೆಯಲಿದೆ.

ನಾಗರಿಕ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಯ ನೇಮಕಾತಿ ಲಿಖಿತ ಪರೀಕ್ಷೆಯು ಸುಗಮವಾಗಿ ನಡೆಯಲು ಮಂಡ್ಯ ತಾಲ್ಲೂಕಿನ 4 ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಪರೀಕ್ಷಾ ದಿನಗಳಂದು 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿದೆ.

ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್ ಮತ್ತು ಸೈಬರ್ ಅಂಗಡಿಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚುವಂತೆ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಆದೇಶ ಹೊರಡಿಸಿದ್ದಾರೆ.

ಪರೀಕ್ಷಾರ್ಥಿಗಳು ಮತ್ತು ಪರೀಕ್ಷಾ ಕಾರ್ಯಕ್ಕೆ ನೇಮಕಗೊಂಡ ಅಧಿಕಾರಿಗಳು/ಸಿಬ್ಬಂದಿಗಳು ಹೊರತುಪಡಿಸಿ ಇತರರು ಯಾರೂ ನಿಷೇಧಿತ ಪ್ರದೇಶದೊಳಗೆ ಪ್ರವೇಶಿಸುವಂತಿಲ್ಲ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಪರೀಕ್ಷಾ ಕೇಂದ್ರಗಳು:

1) ವಿಶ್ವಮಾನವ ಪದವಿ ಪೂರ್ವ ಸಂಯುಕ್ತ ಕಾಲೇಜು, ವಿಶ್ವಮಾನವ ಕ್ಷೇತ್ರ ಕೊಮ್ಮೇರಹಳ್ಳಿ.
2)ಮಂಡ್ಯ ವಿಶ್ವವಿದ್ಯಾನಿಲಯ,
3)ಪಿ.ಇ.ಎಸ್ ವಿಜ್ಞಾನ, ಕಲಾ & ವಾಣಿಜ್ಯ ಕಾಲೇಜು
4)ಸರ್ಕಾರಿ ಮಹಿಳಾ ಕಾಲೇಜು( ಸ್ವಾಯತ್ತ) ಪರೀಕ್ಷೆ ನಡೆಯಲಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ