Friday, November 20, 2026

ಪ್ರಾಯೋಗಿಕ ಆವೃತ್ತಿ

ಕುತೂಹಲ ಕೆರಳಿಸಿದ ರೆಡ್ಡಿ ನಡೆ| ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಅವರೊಂದಿಗೆ ಜನಾರ್ದನ ರೆಡ್ಡಿ ಮಾತುಕತೆ !

ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ (KRPP)ಶಾಸಕ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಕೆಲಹೊತ್ತು ಮಾತುಕತೆ ನಡೆಸಿದರು. ಸಚಿವ ಶಿವರಾಜ್ ತಂಗಡಗಿ ಉಪಸ್ಥಿತರಿದ್ದರು.

ಸಚಿವ ಶಿವರಾಜ್ ತಂಗಡಗಿ ಅವರೊಂದಿಗೆ ಗಾಲಿ ಜನಾರ್ದನ ರೆಡ್ಡಿ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್‌ ಅವರನ್ನು ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ.

ಫೆ.27ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ -ಬಿಜೆಪಿ ಮೈತ್ರಿ ಕೂಟಕ್ಕೆ ತಿರುಗೇಟು ನೀಡಲು ಕಾಂಗ್ರೆಸ್ ರಣತಂತ್ರ ರೂಪಿಸುತ್ತಿದ್ದು, ಜನಾರ್ದನ ರೆಡ್ಡಿ ಅವರು ಕಾಂಗ್ರೆಸ್‌ ಅಭ್ಯರ್ಥಿಗೆ ಬೆಂಬಲ ಸೂಚಿಸುತ್ತಾರಾ ಎಂಬುದು ಕಾದುನೋಡಬೇಕು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ